ವಾಕಿಂಗ್ ತೆರಳಿದ್ದ ಡಿಪ್ಲೊಮಾ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಶಿವಮೊಗ್ಗ: ಡಿಪ್ಲೊಮಾ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೀರನಕೆರೆ ಬಳಿ ನಡೆದಿದೆ. ಪ್ರತಿಷ್ಠಿತ ಪಿಇಎಸ್​ ಸಂಸ್ಥೆಯ ಪೆಸಿಟ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಪರಿಣಿತಾ(20) ಮೃತ ದುರ್ದೈವಿ. ಕಾಲೇಜು ವತಿಯಿಂದ ಬೀರನಕೆರೆ ಬಳಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಕ್ಯಾಂಪ್ ಹಾಕಲಾಗಿತ್ತು. ಕಳೆದ 4 ದಿನಗಳಿಂದ ಬೀರನಕೆರೆಯಲ್ಲಿ 22 ವಿದ್ಯಾರ್ಥಿಗಳ ತಂಡ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದ್ರೆ, ಇದನ್ನು ಒಪ್ಪದ […]

ವಾಕಿಂಗ್ ತೆರಳಿದ್ದ ಡಿಪ್ಲೊಮಾ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Updated on: Dec 07, 2019 | 1:59 PM

ಶಿವಮೊಗ್ಗ: ಡಿಪ್ಲೊಮಾ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೀರನಕೆರೆ ಬಳಿ ನಡೆದಿದೆ. ಪ್ರತಿಷ್ಠಿತ ಪಿಇಎಸ್​ ಸಂಸ್ಥೆಯ ಪೆಸಿಟ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಪರಿಣಿತಾ(20) ಮೃತ ದುರ್ದೈವಿ.

ಕಾಲೇಜು ವತಿಯಿಂದ ಬೀರನಕೆರೆ ಬಳಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಕ್ಯಾಂಪ್ ಹಾಕಲಾಗಿತ್ತು. ಕಳೆದ 4 ದಿನಗಳಿಂದ ಬೀರನಕೆರೆಯಲ್ಲಿ 22 ವಿದ್ಯಾರ್ಥಿಗಳ ತಂಡ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಆದ್ರೆ, ಇದನ್ನು ಒಪ್ಪದ ಪರಿಣಿತಾ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೆಲಕಾಲ ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:54 pm, Sat, 7 December 19