ಮೈಸೂರು: ರಾಜ್ಯದಲ್ಲಿ ಜನ್ ಔಷಧಿ (Genetic medicine) ಬಳಸುವಂತೆ ಆರೋಗ್ಯ ಸಚಿವರು ಮನವಿ ಮಾಡಿಕೊಂಡಿದ್ದು, ಸರ್ಕಾರಿ ವೈದ್ಯರು ಔಷಧಿ ಸೂಚಿಸುವಾಗ ಖಾಸಗಿ ಕಂಪನಿ ಹೆಸರು ಉಲ್ಲೇಖಿಸಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ. ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಲಭ್ಯವಿರುವಂತೆ ನೋಡಿಕೊಳ್ಳಲಾಗುವುದು. ಸದ್ಯ ಜನ್ ಔಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೆ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರ ತೆರೆಯಲಾಗುವುದು. ಕೆಲವರಿಗೆ ಧರಿಸಲು ಬ್ರಾಂಡೆಡ್ ಬಟ್ಟೆಯೇ ಬೇಕು ಅಂತಹವರು ಬೇರೆ ಬ್ರಾಂಡ್ ಔಷಧಿ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಸ್ವ- ಸಹಾಯ ಸಂಸ್ಥೆಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುತ್ತಿರುವ ಮೇಳವನ್ನು ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮೇಳ ಆಯೋಜನೆ
ಮೇಳದಲ್ಲಿ ಇಲಕಲ್ಲ ರೇಶ್ಮೆ ಸೀರೆ, ಗ್ರಾಮೀಣ ಭಾಗದ ಅಹಾರೋತ್ಪನ್ನಗಳು, ಕರಕುಶಲ ವಸ್ತುಗಳು, ಚನ್ನಪಟ್ಟಣ ಗೊಂಬೆ ಸಾಮಗ್ರಿಗಳು ಗಮನ ಸೆಳೆಯುತ್ತಿದೆ.
ಇದನ್ನೂ ಓದಿ:
ಎತ್ತಿನಹೊಳೆ ಯೋಜನೆ ಜಾರಿಯಾದರೆ ನೇಣು ಹಾಕಿಕೊಳ್ಳುವೆ; ವಿಧಾನಪರಿಷತ್ತಿನಲ್ಲಿ JDS ಸದಸ್ಯ ಭೋಜೇಗೌಡ ಸವಾಲ್