ಮಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ 20ಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪತ್ತೆ

ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್​ಗೆ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಎಚ್ಚರವಹಿಸಬೇಕಿದೆ. ಯಾವ ಯಾವ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

ಮಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ 20ಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
|

Updated on: Mar 16, 2021 | 10:32 AM

ಮಂಗಳೂರು: ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ದೇರಳಕಟ್ಟೆ ಬಳಿಯ ಯೆನೆಪೋಯಾ ವಿವಿ ಶಿಕ್ಷಣ ಸಂಸ್ಥೆಗೆ ಸೇರಿದ 9 ಶಿಕ್ಷಣ ಸಂಸ್ಥೆಗಳನ್ನು ಬಂದ್​ ಮಾಡಲಾಗಿದೆ. ಮೆಡಿಕಲ್, ಡೆಂಟಲ್, ನರ್ಸಿಂಗ್ ಸೇರಿ 9 ಶಿಕ್ಷಣ ಸಂಸ್ಥೆಗಳನ್ನು ಬಂದ್​ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ 20ಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಸೂಚನೆಯಂತೆ ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಹೊರತುಪಡಿಸಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿಲ್ಲ. ಯೆನೆಪೋಯಾ ಶಿಕ್ಷಣ ಸಂಸ್ಥೆಯಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಆನ್​ಲೈನ್ ಮೂಲಕವೇ ಎಲ್ಲಾ ತರಗತಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಹಾಸನದಲ್ಲಿ 7 ಜನರಿಗೆ ಕೊರೊನಾ ಪಾಸಿಟಿವ್​ ಚನ್ನರಾಯಪಟ್ಟಣ ತಾಲೂಕಿನ 289 ಜನರು ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರದಿಂದ ಬಂದ ಜನರಿಗೆ ಹೋಂ ಕ್ವಾರಂಟೈನ್​ ಆಗುವಂತೆ ಸೂಚನೆ ನೀಡಿದೆ. ಇವರಲ್ಲಿ 7 ಜನರಿಗೆ ಕೊರೊನಾ ಪತ್ತೆಯಾಗಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿ ಮತ್ತೆ ಕಂಟಕವಾಗುತ್ತಾ ಮುಂಬೈ ವೈರಸ್ ಎಂದು ಜನರು ಭಯ ಪಡುತ್ತಿದ್ದಾರೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ವಾಪಸ್ ಮರಳುತ್ತಿರುವವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

ಬೀದರ್ ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಕೇಸ್ ಹೆಚ್ಚಳ ಜಿಲ್ಲೆಯಲ್ಲಿ 24 ಗಂಟೆಯಲ್ಲಿ 38 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬ್ರೀಮ್ಸ್ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ 230 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 12 ಜನರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ್ ನಾಗಮಾರಪಳ್ಳಿ ಹಾಗೂ ಮೂವರು ವಕೀಲರಿಗೆ ಕೊರೊನಾ ಸೋಂಕು ದೃಢವಾಗಿದೆ.

ಕೊರೊನಾ ಪ್ರಕರಣ ಹೆಚ್ಚಳ; ನಿರ್ಲಕ್ಷ್ಯದಲ್ಲಿ ಬೆಳಗಾವಿ ಜಿಲ್ಲಾಡಳಿತ ಮಹಾರಾಷ್ಟ್ರದಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ತಿಳಿದು ಬರುತ್ತಿದೆ. ಕೋವಿಡ್ ತಡೆಗೆ ಸೂಕ್ತ ಕ್ರಮಕೈಗೊಳ್ಳದೇ ಬೆಳಗಾವಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿದೆ. ಕೊರೊನಾ 2ನೇ ಅಲೆ ಭೀತಿಯಿದ್ದರೂ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ. ಎಪಿಎಂಸಿ ಮಾರುಕಟ್ಟೆಗಳಲ್ಲಿ ದೈಹಿಕ ಅಂತರ ಪಾಲಿಸದೆ ಜನರು ಓಡಾಡುತ್ತಿದ್ದಾರೆ. ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ನಡೆಯುತ್ತಿದೆ. ಮಹಾರಾಷ್ಟ್ರ, ಗೋವಾಗೆ ಪ್ರತಿನಿತ್ಯ ಇಲ್ಲಿಂದಲೇ ತರಕಾರಿ ಸಪ್ಲೈ ಆಗುತ್ತದೆ. ಆದರೂ ಯಾವುದೇ ಕಟ್ಟುನಿಟ್ಟಿನ ಕ್ರಮ ಕಗೊಳ್ಳದೇ ಜನರು ಓಡಾಡುತ್ತಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ; ಮಾಸ್ಕ್ ಧರಿಸದ ಗ್ರಾಹಕರಿಗೆ ಪ್ರವೇಶ ನೀಡದಂತೆ ಸೂಚನೆ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಹೆಚ್ಚಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಗ್ರಾಹಕರಿಗೆ ಪ್ರವೇಶ ನೀಡದಂತೆ ವಾಣಿಜ್ಯ ಅಂಗಡಿ ಮಾಲೀಕರು ಸೂಚನೆ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿನ್ನೆ ಸೋಮವಾರ 43 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಾಪಿಂಗ್‌ಮಾಲ್, ಚಿತ್ರಮಂದಿರ, ಹೋಟೆಲ್‌ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದ್ದಲ್ಲಿ ವಾಣಿಜ್ಯ ಅಂಗಡಿಗಳ‌ ಮಾಲೀಕರಿಗೆ ದಂಡ ವಿಧಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ‌ ಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು

ಇದನ್ನೂ ಓದಿ: ಬಾಲಿವುಡ್ ನಟ ರಣಬೀರ್ ಕಪೂರ್​ಗೆ ಕೊರೊನಾ ಪಾಸಿಟಿವ್; ಹೋಮ್ ಕ್ವಾರಂಟೈನ್​ನಲ್ಲಿ ಇದ್ದಾರೆ ಎಂದ ನೀತು ಕಪೂರ್

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!