ವಿಧಾನಸಭೆಯಲ್ಲಿ ಜೆರೋಸಾ ಶಾಲೆ ಪ್ರಕರಣ ಸುದ್ದು; ಬಿಜೆಪಿ-ಕಾಂಗ್ರೆಸ್ ಸದಸ್ಯರ ಗದ್ದಲ, ಪರಮೇಶ್ವರ್ ಸ್ಪಷ್ಟನೆ

ಅಯೋಧ್ಯೆ ಹಾಗೂ ಶ್ರೀರಾಮನಿಗೆ ಅವಮಾನ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಅಮಾನತು ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆ ಸಂಬಂಧ ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವಿಚಾರ ಇಂದು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ಸದಸ್ಯ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಬಳಿಕ ಗೃಹ ಸಚಿವ ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದರು.

ವಿಧಾನಸಭೆಯಲ್ಲಿ ಜೆರೋಸಾ ಶಾಲೆ ಪ್ರಕರಣ ಸುದ್ದು; ಬಿಜೆಪಿ-ಕಾಂಗ್ರೆಸ್ ಸದಸ್ಯರ ಗದ್ದಲ, ಪರಮೇಶ್ವರ್ ಸ್ಪಷ್ಟನೆ
ವಿಧಾನಸಭೆಯಲ್ಲಿ ಜೆರೋಸಾ ಶಾಲೆ ಪ್ರಕರಣ ಸುದ್ದು; ಬಿಜೆಪಿ-ಕಾಂಗ್ರೆಸ್ ಸದಸ್ಯರ ಗದ್ದಲ, ಪರಮೇಶ್ವರ್ ಸ್ಪಷ್ಟನೆ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Feb 15, 2024 | 6:39 PM

ವಿಧಾನಸಭೆ, ಫೆ.15: ಅಯೋಧ್ಯೆ ಹಾಗೂ ಶ್ರೀರಾಮನಿಗೆ ಅವಮಾನ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ ಸಂತ ಜೆರೋಸಾ ಶಾಲೆಯ (St Gerosa School) ಶಿಕ್ಷಕಿ ಅಮಾನತು ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆ ಸಂಬಂಧ ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್ (Vedavyas Kamath) ಹಾಗೂ ಭರತ್ ಶೆಟ್ಟಿ (Bharath Shetty) ವಿರುದ್ಧ ಪ್ರಕರಣ ದಾಖಲಾಗಿದೆ. ಈ ವಿಚಾರ ಇಂದು ವಿಧಾನಸಭೆ ಅಧಿವೇಶನದಲ್ಲಿ (Assembly Session) ಚರ್ಚೆಯಾಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ಸದಸ್ಯ ನಡುವೆ ವಾಗ್ವಾದಕ್ಕೆ ಕಾರಣವಾಯಿತು.

ಶಾಸಕ‌ ಭರತ್ ಶೆಟ್ಟಿ ವಿರುದ್ಧ ಎಫ್​ಐಆರ್ ದಾಖಲಿಸಿದ ಎಸ್​​ಐ ಸಸ್ಪೆಂಡ್ ಮಾಡುವಂತೆ ಸದನದಲ್ಲಿ ಬಿಜೆಪಿ ಸದಸ್ಯರು ಒತ್ತಾಯಿಸಿದ್ದು, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ ಅವರು ಎಸ್​ಐ ಸಮಾನತು ಮಾಡುವಂತೆ ಪಟ್ಟು ಹಿಡಿದರು. ಅಲ್ಲದೆ, ಸದನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು.

ಇದನ್ನೂ ಓದಿ: ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯ ವಿವಾದ ಪ್ರಕರಣ ಸಂಬಂಧ ಭರತ್ ಶೆಟ್ಟಿ ಟ್ವೀಟ್ ಮಾಡಿದ್ದರು. ಪೋಸ್ಟ್‌ ಮಾಡಿದ ಸಾಲುಗಳನ್ನು ಸದನದಲ್ಲಿ ಪರಮೇಶ್ವರ್‌ ಓದಿದರು. ಈ ವೇಳೆ, ಇದರಲ್ಲಿ ಏನು ತಪ್ಪಿದೆ ಎಂದು ಭರತ್ ಶೆಟ್ಟಿ ಕೇಳಿದರು. ಇದಕ್ಕೆ ನಿಧಾನಕ್ಕೆ ಮಾತನಾಡಿ ಎಂದ ಪರಮೇಶ್ವರ್ ಹೇಳಿದಾಗ ಬಿಜೆಪಿ ಸದಸ್ಯರು ಸಿಟ್ಟಾದರು. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸುನೀಲ್ ಕುಮಾರ್‌ ನಡುವೆ ವಾಕ್ಸಮರ, ಗದ್ದಲ ನಡೆಯಿತು.

ಪೊಲೀಸರ ನಡೆ ಮೇಲೆ ಅನುಮಾನ

ಪೊಲೀಸರ ನಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಬಗ್ಗೆ ಬಿಜೆಪಿ ಸದಸ್ಯರು ಸದನದಲ್ಲಿ ಕಿಡಿಕಾರಿದರು. ಶಾಸಕರ ರಕ್ಷಣೆಗೆ ಸರ್ಕಾರ ಬರಬೇಕಿತ್ತು. ಸದನ ನಡೆಯುತ್ತಿರುವಾಗ ಎಫ್‌ಐಆರ್ ಹೇಗೆ ಹಾಕಿದರು ಎಂದು ಸುನೀಲ್ ಕುಮಾರ್, ಅಶೋಕ್ ಆಕ್ರೋಶಭರಿತರಾಗಿ ಪ್ರಶ್ನಿಸಿದರು.

ಈ ನಡುವೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಲೆ ಬಗ್ಗೆ ಒಳ್ಳೆಯ ಇತಿಹಾಸ ಇದೆ. ಅಲ್ಲಿ ನಡೆದ ಘಟನೆ ಬಗ್ಗೆ ತನಿಖೆಯಿಂದ ಸತ್ಯ ಗೊತ್ತಾಗುತ್ತದೆ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಶಾಲೆಯವರು ಸರಿ ಇದ್ದಾರೆ, ಆ ಟೀಚರ್ ತಪ್ಪಿದೆ ಅಂತ ಗೊತ್ತಾಗಿಯೇ ಅವರು ಸಸ್ಪೆಂಡ್ ಮಾಡಿದ್ದಾರೆ. ಸಸ್ಪೆಂಡ್ ಆದ ನಂತರದ ವಿದ್ಯಮಾನಗಳ ಒತ್ತಡದಿಂದ ಶಾಸಕರ ಮೇಲೆ ಎಫ್‌ಐಆರ್ ಹಾಕಲಾಗಿದೆ. ಅನಗತ್ಯವಾಗಿ ಕೆಲವರು ಘಟನೆಯಲ್ಲಿ ಮಧ್ಯ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮಂಗಳೂರು: ಎಫ್​ಐಆರ್ ಖಂಡಿಸಿ ಪೊಲೀಸ್ ಠಾಣೆ ಮುಂದೆ ಜೈ ಶ್ರೀರಾಮ್ ಘೋಷಣೆಗಳೊಂದಿಗೆ ಹರತಾಳಕ್ಕೆ VHP ಕರೆ

ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆಂದು ಇನ್ನೂ ಸಾಬೀತಾಗಿಲ್ಲ. ಇಬ್ಬರು ಪೋಷಕರು ಹಾಗೆ ಹೇಳುತ್ತಿದ್ದಾರೆ, ಆಡಿಯೋ ವೈರಲ್ ಆಗಿದೆ. ಆ ಶಾಲೆ ಮೇಲೆ ಒತ್ತಡ ಬಂತು, ಶಿಕ್ಷಕಿಯನ್ನು ಸಸ್ಪೆಂಡ್ ಮಾಡಿದ್ದಾರೆ. ಕೆಟ್ಟ ವಾತಾವರಣ ನಿರ್ಮಾಣ ಆಗಿತ್ತು. ಇನ್ನೊಬ್ಬ ಶಾಸಕ ವೇದವ್ಯಾಸ್ ಕಾಮತ್ ಮೇಲೂ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ಬಗ್ಗೆ ಮುಕ್ತವಾಗಿ ಪರಮೇಶ್ವರ್ ಹೇಳಿದ್ದಾರೆ. ನಾವೇನೂ ಪ್ರಕರಣ ಮುಚ್ಚಿ ಹಾಕುತ್ತಿಲ್ಲ, ನಮ್ಮ ಮೇಲೆ ಯಾರದ್ದೂ ಒತ್ತಡ ಇಲ್ಲ. ಪ್ರಕರಣದ ತನಿಖೆ ಆಗಲಿದೆ, ತನಿಖೆಯಲ್ಲಿ ತಪ್ಪು ಯಾರದ್ದು ಅಂತ ಗೊತ್ತಾಗುತ್ತದೆ, ಕ್ರಮ ಆಗುತ್ತದೆ ಎಂದರು.

ಶಾಲೆಯ ಆವರಣದಲ್ಲಿ ಶಾಸಕ ಭರತ್ ಶೆಟ್ಟಿ ಇರಲಿಲ್ಲ: ಪರಮೇಶ್ವರ್

ಭರತ್ ಶೆಟ್ಟಿ ವಿರುದ್ಧ ದಾಖಲಾದ ಎಫ್​ಐಆರ್ ಕುರಿತು ಮಾತನಾಡಿದ ಪರಮೇಶ್ವರ್, ಜೆರೋಸಾ ಶಾಲೆಯ ಆವರಣದಲ್ಲಿ ಶಾಸಕ ಭರತ್ ಶೆಟ್ಟಿ ಇರಲಿಲ್ಲ. ನಾನು ಪೊಲೀಸ್ ಆಯುಕ್ತರ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಆದರೆ ಡಿಡಿಪಿಐ ಕಚೇರಿಗೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಹೋಗಿದ್ದಾರೆ. ಕ್ರಿಶ್ಚಿಯನ್ ಶಾಲೆಗೆ ಮಕ್ಕಳನ್ನು ಕಳಿಸಬೇಡಿ ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಜೆರೋಸಾ ಶಿಕ್ಷಣ ಸಂಸ್ಥೆಯ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಅಧಿಕಾರಿ ತಪ್ಪು ಮಾಡಿದ್ದರೆ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇನೆ. ದೂರಿನಲ್ಲಿ ಶಾಸಕರ ಹೆಸರು ಇದೆ ಅಂತಾ ಎಫ್​ಐಆರ್​ನಲ್ಲಿ ಹಾಕಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಡಿಡಿಪಿಐ ವರ್ಗಾವಣೆ ಫೈಲ್ ಮೊದಲೇ ಆಗಿತ್ತು: ಮಧು ಬಂಗಾರಪ್ಪ

ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆಯೂ ಸದನದಲ್ಲಿ ಚರ್ಚೆ ನಡೆಯಿತು. ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಮಧು ಬಂಗಾರಪ್ಪ, ಈ ಪ್ರಕರಣ ಸಂಬಂಧ ನಾವು ಡಿಡಿಪಿಐರನ್ನು ವರ್ಗಾವಣೆ ಮಾಡಿಲ್ಲ. ಮೊದಲೇ ಡಿಡಿಪಿಐ ವರ್ಗಾವಣೆ ಫೈಲ್ ಹೋಗಿತ್ತು ಎಂದರು.

ಸದನದ ಬಾವಿಗಿಳಿಯಲು ಮುಂದಾದ ಬಿಜೆಪಿ

ಜೆರೋಸಾ ಶಿಕ್ಷಣ ಸಂಸ್ಥೆಯ ಪ್ರಕರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು. ಸರ್ಕಾರದ ನಿಲುವಿನ ವಿರುದ್ಧ ಬಿಜೆಪಿ ಸದಸ್ಯರು ಸದನದ ಬಾವಿಗಿಳಿಯಲು ಮುಂದಾದರು. ಈ ವೇಳೆ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಕಲಾಪವನ್ನು ನಾಳೆ ಬೆಳಗ್ಗೆ 10.15ಕ್ಕೆ ಮುಂದೂಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ