ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನ ಅನರ್ಹಗೊಳಿಸಿದ ಸರ್ಕಾರ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಸದ್ಯ ರಾಜ್ಯ ಸರ್ಕಾರ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.
ಬೆಂಗಳೂರು, ಮೇ 31: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ (Dr. shantha a thimmaiah) ಅನರ್ಹಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಹೀಗಾಗಿ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಡಾ. ಶಾಂತ್ ಎ ತಿಮ್ಮಯ್ಯ ಮುಂದುವರೆಸುವಂತೆ ಹೇಳಿ ಆದೇಶ ಹೊರಡಿಸಿತ್ತು. ಆದರೆ ಅದರ ಬೆನ್ನೆಲ್ಲೇ ಇದೀಗ ರಾಜ್ಯ ಸರ್ಕಾರ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.
ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಬಳಿಕ ಕೆಎಸ್‍ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರವಧಿ ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಶಾಂತ್ ತಿಮ್ಮಯ್ಯ ಅವರು ಇತ್ತೀಚೆಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಂತ್ ತಿಮ್ಮಯ್ಯ ಮುಂದುವರಿಕೆಗೆ ಹೈಕೋರ್ಟ್ ಆದೇಶ
ಈ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ಅಧಿಸೂಚನೆಯನ್ನು ಅಮಾನತ್ತಿನಲ್ಲಿಟ್ಟು ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿತ್ತು.
ಜಾಗೃತಿ ಕಾರ್ಯಕ್ರಮಗಳ ಹೆಸರಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಅವರು ಕಾಯ್ದೆಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರ ನೇಮಿಸಿದ್ದ ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲಾಗಿತ್ತು.
ಇದನ್ನೂ ಓದಿ: ವೀಕೆಂಡ್ನಲ್ಲೇ ಮದ್ಯ ಪ್ರಿಯರಿಗೆ ಶಾಕ್: ಜೂ.1ರಿಂದ ಬೆಂಗಳೂರಿನಲ್ಲಿ 5 ದಿನ ಬಾರ್ಗಳು ಕ್ಲೋಸ್!
ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಕೆಎಸ್ಪಿಸಿಬಿಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:50 pm, Fri, 31 May 24