ಡಿಕೆಶಿಗೆ ಕೊಂಚ ರಿಲೀಫ್: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅರ್ಜಿ ವಿಚಾರಣೆ 4 ವಾರ ಮುಂದೂಡಿಕೆ
ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ. ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದ ನಂತರ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸದ್ಯ ಡಿಕೆ ಶಿವಕುಮಾರ್ಗೆ ಕೊಂಚ ರಿಲೀಫ್ ಸಿಕ್ಕಿದೆ.
ಬೆಂಗಳೂರು, ನವೆಂಬರ್ 04: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧಿಸಿದಂತೆ 4 ವಾರಗಳ ಕಾಲ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಆ ಮೂಲಕ ಕೊಂಚ ರಿಲೀಫ್ ಸಿಕ್ಕಿದೆ. ಸದ್ಯ ಡಿಕೆ ಶಿವಕುಮಾರ್ಗೆ ಉಪ ಚುನಾವಣೆ ಪ್ರಚಾರದಲ್ಲಿದ್ದಾರೆ.
ಇತ್ತೀಚೆಗೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ಈ ನಡೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಸದ್ಯ ನಾಲ್ಕು ವಾರಗಳ ಕಾಲ ಮುಂದೂಡಿದೆ.
ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
ಇನ್ನು ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಶಾಸಕ ಯತ್ನಾಳ್ ಕೂಡ ಪ್ರಶ್ನಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಕೂಡ ಸಲ್ಲಿಸಿದ್ದರು. ಆದರೆ ಅದರ ವಿಚಾರ ಬಾಕಿ ಇದೆ. ಈ ವಿಚಾರವಾಗಿ ಸರ್ಕಾರ ಮತ್ತು ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತ್ತು. ಆದರೆ ಇದಕ್ಕೆ ಉತ್ತರಿಸಲು ಅವರು ಕಾಲಾವಕಾಶ ಕೇಳಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಏನಿದು ಪ್ರಕರಣ?
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿತ್ತು. ಆ ಬಗ್ಗೆ ಸಚಿವ ಸಂಪುಟ ನಿರ್ಣಯ ಕೈಗೊಳ್ಳಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:03 pm, Mon, 4 November 24