ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕಕ್ಕೆ 5 ಕೋಟಿ ರೂ. ವ್ಯಾಜ್ಯ ಶುಲ್ಕ ಪಾವತಿಸಲು ತಮಿಳುನಾಡು ಸರ್ಕಾರಕ್ಕೆ ಆದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಅಕ್ರಮ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ವಿವರಗಳನ್ನು ಎಸ್​ಪಿಪಿ ಕಿರಣ್ ಎಸ್ ಜವಳಿ ಅವರು ಬೆಂಗಳೂರು ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದಾರೆ. ಅದರಂತೆ, ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ ಐದು ಕೋಟಿ ರೂಪಾಯಿ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ವಿಶೇಷ ಕೋರ್ಟ್ ಆದೇಶಿಸಿದೆ.

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕಕ್ಕೆ 5 ಕೋಟಿ ರೂ. ವ್ಯಾಜ್ಯ ಶುಲ್ಕ ಪಾವತಿಸಲು ತಮಿಳುನಾಡು ಸರ್ಕಾರಕ್ಕೆ ಆದೇಶ
ಜೆ.ಜಯಲಲಿತಾImage Credit source: PTI
Follow us
Ramesha M
| Updated By: Rakesh Nayak Manchi

Updated on:Jan 22, 2024 | 9:37 PM

ಬೆಂಗಳೂರು, ಜ.22: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ (J.Jayalalithaa) ಅವರ ಅಕ್ರಮ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ವಿವರಗಳನ್ನು ಎಸ್​ಪಿಪಿ ಕಿರಣ್ ಎಸ್ ಜವಳಿ ಅವರು ಬೆಂಗಳೂರು (Bengaluru) ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದಾರೆ. ಅದರಂತೆ, ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ ಐದು ಕೋಟಿ ರೂಪಾಯಿ ಪಾವತಿಸುವಂತೆ ತಮಿಳುನಾಡು (Tamil Nadu) ಸರ್ಕಾರಕ್ಕೆ ವಿಶೇಷ ಕೋರ್ಟ್ ಆದೇಶಿಸಿದೆ.

ಡಿಡಿ ರೂಪದಲ್ಲಿ ಐದು ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಲು ಸೂಚನೆ ನೀಡಲಾಗಿದೆ. ಜಯಲಲಿತಾ ಅವರಿಗೆ ಸೇರಿದ ಒಡವೆ ತನ್ನ ವಶದಲ್ಲಿರುವ ಹಿನ್ನೆಲೆ ಒಡವೆ ಹರಾಜು ಬದಲು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲು ವಿಶೇಷ ಕೋರ್ಟ್ ನಿರ್ಧಾರ ಮಾಡಿದೆ.

ಇದನ್ನೂ ಓದಿ: ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕಿಲ್ಲ ನಿವೇಶನ ಹಂಚಿಕೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

ಅಲ್ಲದೆ, ತಮಿಳುನಾಡಿನ ಗೃಹ ಕಾರ್ಯದರ್ಶಿ ಪೊಲೀಸರೊಂದಿಗೆ ಕೋರ್ಟ್​​ಗೆ ಹಾಜರಾಗಬೇಕು. ಒಡವೆಗಳನ್ನು ಗುರುತಿಸಿ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳುವಂತೆ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಮೋಹನ್‌ ಅವರು ಸೂಚಿಸಿದ್ದಾರೆ.

1996ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದ್ದರು. 1997ರಲ್ಲಿ ಪ್ರಕರಣದ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆದು ಶಿಕ್ಷೆ ಪ್ರಕಟವಾಗುವ ಮುನ್ನವೇ ಜಯಲಲಿತಾ ಅವರು 2016 ರಲ್ಲಿ‌ ಮೃತಪಟ್ಟಿದ್ದರು.

ಜಯಲಲಿತಾ ಅವರು 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್‌ ಬಳಿ ಫಾರ್ಮ್‌ ಹೌಸ್‌, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್‌ ಖಾತೆಗಳಲ್ಲಿ ಸಂಪತ್ತು ಕ್ರೋಡೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Mon, 22 January 24

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ