ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಬಿಐ ತನಿಖೆ ಭವಿಷ್ಯ ಇಂದು ನಿರ್ಧಾರ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸಿಬಿಐ (CBI) ತನಿಖೆ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸಿಬಿಐ ತನಿಖೆ ಸಂಬಂಧ ಕರ್ನಾಟಕ ಹೈಕೋರ್ಟ್ (Karnataka High Court) ಇಂದು (ಅಕ್ಟೋಬರ್ 19) ಮಹತ್ವದ ತೀರ್ಪು ನೀಡಲಿದೆ.
ಬೆಂಗಳೂರು, (ಅಕ್ಟೋಬರ್ 19): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸಿಬಿಐ (CBI) ತನಿಖೆ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸಿಬಿಐ ತನಿಖೆ ಸಂಬಂಧ ಕರ್ನಾಟಕ ಹೈಕೋರ್ಟ್ (Karnataka High Court) ಇಂದು (ಅಕ್ಟೋಬರ್ 19) ಮಹತ್ವದ ತೀರ್ಪು ಪ್ರಕಟಿಸಲಿದೆ. ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ತೀರ್ಪು ನೀಡಲಿದೆ.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು.
ಇದನ್ನೂ ಓದಿ: ಪಟ್ಟು ಬಿಡದ ಸಿಬಿಐ: ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂಕೋರ್ಟ್ ನೋಟಿಸ್
ಈ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದ್ರೆ, ಮೊನ್ನೆ ಅಷ್ಟೇ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅಲ್ಲದೇ ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ? ಅಥವಾ ಸಿಬಿಐ ತನಿಖೆ ರದ್ದುಗೊಳಿಸಿ ಆದೇಶ ನೀಡುತ್ತಾ? ಎನ್ನುವುದು ಕುತೂಹಲ ಮೂಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ