ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಖಾನ್ ಅರ್ಜಿ ವಜಾಗೊಳಿಸಿದ‌ ಹೈಕೋರ್ಟ್

| Updated By: Ganapathi Sharma

Updated on: Nov 20, 2023 | 4:06 PM

2019 ರ ಜೂನ್​ನಲ್ಲಿ, ಜಮೀರ್ ಮತ್ತು ಐ-ಮಾನಿಟರಿ ಅಡ್ವೈಸರಿ ಪ್ರೈವೇಟ್ ಲಿಮಿಟೆಡ್‌ನ ಪ್ರವರ್ತಕ ಮೊಹಮ್ಮದ್ ಮನ್ಸೂರ್ ಖಾನ್ ನಡುವಿನ ಕೆಲವು ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯದಿಂದ ವರದಿಯನ್ನು ಪಡೆದ ನಂತರ ಎಸಿಬಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಪ್ರಕರಣದ ತನಿಖೆಯ ರದ್ದು ಕೋರಿ ಜಮೀರ್ ಅಹ್ಮದ್‌ ಖಾನ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಖಾನ್ ಅರ್ಜಿ ವಜಾಗೊಳಿಸಿದ‌ ಹೈಕೋರ್ಟ್
ಜಮೀರ್ ಅಹ್ಮದ್ ಖಾನ್
Follow us on

ಬೆಂಗಳೂರು, ನವೆಂಬರ್ 20: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಅವರಿಗೆ ಭಾರೀ ಹಿನ್ನಡೆಯಾಗಿದೆ. 87.44 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಜಮೀರ್ ವಿರುದ್ಧ ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ (Karnataka High Court) ನಿರಾಕರಿಸಿದೆ.

ಪ್ರಕರಣದ ತನಿಖೆಯ ರದ್ದು ಕೋರಿ ಜಮೀರ್ ಅಹ್ಮದ್‌ ಖಾನ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮಧ್ಯೆ, ಸುಪ್ರೀಂಕೋರ್ಟ್‌ನಲ್ಲಿ ಈಗಾಗಲೇ ಮೇಲ್ಮನವಿ ಬಾಕಿ ಹಿನ್ನೆಲೆ‌ಯಲ್ಲಿ, ಹೈಕೋರ್ಟ್ ಆದೇಶ ತಡೆಹಿಡಿಯುವಂತೆ ಜಮೀರ್ ಪರ ವಕೀಲರು ಮನವಿ ಮಾಡಿದ್ದು, 30 ದಿನಗಳ ಕಾಲ ತನ್ನ ತೀರ್ಪನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಹಿಂದೆ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶವನ್ನು ಜಮೀರ್ ಸುಪ್ರೀಂ ಕೋರ್ಟ್​​​ನಲ್ಲಿ ಪ್ರಶ್ನಿಸಿದ್ದರು.

ಏನಿದು ಪ್ರಕರಣ?

2019 ರ ಜೂನ್​ನಲ್ಲಿ, ಜಮೀರ್ ಮತ್ತು ಐ-ಮಾನಿಟರಿ ಅಡ್ವೈಸರಿ ಪ್ರೈವೇಟ್ ಲಿಮಿಟೆಡ್‌ನ ಪ್ರವರ್ತಕ ಮೊಹಮ್ಮದ್ ಮನ್ಸೂರ್ ಖಾನ್ ನಡುವಿನ ಕೆಲವು ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯದಿಂದ ವರದಿಯನ್ನು ಪಡೆದ ನಂತರ ಎಸಿಬಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲಿಂದಲೂ ಗೊತ್ತಿತ್ತು: ಬಿಜೆಡ್ ಜಮೀರ್ ಅಹ್ಮದ್ ಖಾನ್, ಸಚಿವ

ಫ್ಲ್ಯಾಟ್ ಖರೀದಿಸಲು 9.38 ಕೋಟಿ ರೂ. ಜಮೀರ್‌ಗೆ ಒಟ್ಟು 63 ಕೋಟಿ ರೂ. ಪಾವತಿಸಿದ್ದಾಗಿ ಮನ್ಸೂರ್ ಖಾನ್ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿತ್ತು. ಇದರ ನಂತರ, 2021 ರ ಆಗಸ್ಟ್​​​ಲ್ಲಿ ಎಸಿಬಿ ಅಧಿಕಾರಿಗಳು ಜಮೀರ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ