AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದ್ದಿದ್ದೇ ಒಂಬತ್ತು, ಆಗಿದ್ದೊಂದೇ ಒಂದು, ಈಗ ಕಾಂಗ್ರೆಸ್ ಬಿತ್ತು ಹಳ್ಳಕ್ಕೆ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್ ಬರುವ ಮುನ್ನ ರಾಜ್ಯದಲ್ಲಿ 9 ಸಂಸದರಿದ್ದರು. ಈಗ ಕಾಂಗ್ರೆಸ್​ ಪಕ್ಷದಲ್ಲಿ ಒಬ್ಬ ಸಂಸದರಿದ್ದಾರೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಆಚೆ ಬರುವ ಪ್ರಮೇಯ ಬರ್ತಾ ಇರಲಿಲ್ಲ. ಅವರು ನೆಟ್ಟಗೆ ಇದ್ದಿದ್ರೆ ಸಮ್ಮಿಶ್ರ ಸರ್ಕಾರ ಸರಿ ಇರ್ತಿತ್ತು. ಒಂದಂತೂ ಸತ್ಯ ದಿನೇಶ್ ಗುಂಡೂರಾವ್ ರಂತಹ ಅಧ್ಯಕ್ಷರು ಇರುವ ತನಕ ಕಾಂಗ್ರೆಸ್ ಸ್ಥಿತಿ ಹೀಗೇ ಇರುತ್ತೆ ಎಂದು ಬೆಂಗಳೂರಿನಲ್ಲಿ ಬಿ.ಸಿ.ಪಾಟೀಲ್ […]

‘ಇದ್ದಿದ್ದೇ ಒಂಬತ್ತು, ಆಗಿದ್ದೊಂದೇ ಒಂದು, ಈಗ ಕಾಂಗ್ರೆಸ್ ಬಿತ್ತು ಹಳ್ಳಕ್ಕೆ‘
ಸಾಧು ಶ್ರೀನಾಥ್​
|

Updated on:Sep 30, 2019 | 4:18 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್ ಬರುವ ಮುನ್ನ ರಾಜ್ಯದಲ್ಲಿ 9 ಸಂಸದರಿದ್ದರು. ಈಗ ಕಾಂಗ್ರೆಸ್​ ಪಕ್ಷದಲ್ಲಿ ಒಬ್ಬ ಸಂಸದರಿದ್ದಾರೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.

ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಆಚೆ ಬರುವ ಪ್ರಮೇಯ ಬರ್ತಾ ಇರಲಿಲ್ಲ. ಅವರು ನೆಟ್ಟಗೆ ಇದ್ದಿದ್ರೆ ಸಮ್ಮಿಶ್ರ ಸರ್ಕಾರ ಸರಿ ಇರ್ತಿತ್ತು. ಒಂದಂತೂ ಸತ್ಯ ದಿನೇಶ್ ಗುಂಡೂರಾವ್ ರಂತಹ ಅಧ್ಯಕ್ಷರು ಇರುವ ತನಕ ಕಾಂಗ್ರೆಸ್ ಸ್ಥಿತಿ ಹೀಗೇ ಇರುತ್ತೆ ಎಂದು ಬೆಂಗಳೂರಿನಲ್ಲಿ ಬಿ.ಸಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಚೇಲಾ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಬಿ.ಸಿ.ಪಾಟೀಲ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದವರು ಒಂದು ಕಡೆ ಇರಬಾರದು. ಒಬ್ಬರಿಗೊಂದು ರೀತಿ, ಮತ್ತೊಬ್ಬರಿಗೊಂದು ರೀತಿ ಮಾಡಬಾರದು. ಈಗ ನಾನು ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದೇನೆ. ಆ ವಿಚಾರ ಮಾತನಾಡುವುದು ಸರಿ ಹೋಗಲ್ಲ ಎಂದರು.

ಬಿಎಸ್​ವೈ ಹೇಳಿಕೆ ಸ್ವಾಗತ: ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಅವರ ಹೇಳಿಕೆಯಿಂದ ಸಂತೋಷವಾಗಿದೆ. ಬಿಜೆಪಿಗೆ ಸೇರುವ ಬಗ್ಗೆ ಅನರ್ಹ ಶಾಸಕರು ಒಟ್ಟಿಗೆ ಕುಳಿತು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

Published On - 4:17 pm, Mon, 30 September 19

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ