ನೀವಿನ್ನು ಅನರ್ಹರಲ್ಲ; ನೀವೆಲ್ಲಾ ಭಾವಿ ಶಾಸಕರು, ಭಾವಿ ಸಚಿವರು: BSY

ಬೆಂಗಳೂರು: ರಾಜ್ಯ ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಒಬ್ಬೊಬ್ಬೊರಾಗಿ ಅನರ್ಹರನ್ನು ಪಕ್ಷಕ್ಕೆ ಬರಮಾಡಿಕೊಂಡ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಾವು ನಿಮಗೆ ಕೊಟ್ಟ ಭರವಸೆಯನ್ನು ಪಾಲಿಸುತ್ತೇವೆ. ನಾವು ನಿಮಗೆ ನಂಬಿಕೆ, ವಿಶ್ವಾಸದ್ರೋಹ ಮಾಡುವುದಿಲ್ಲ ಎಂದು ಭರವಸೆ ನೀಡಿದರು. ನಾವು ನಿಮಗೆ (ಅನರ್ಹರಿಗೆ) ನಂಬಿಕೆ, ವಿಶ್ವಾಸದ್ರೋಹ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಕೇಂದ್ರದ ಬಿಜೆಪಿ ನಾಯಕತ್ವ ನಿಮ್ಮ ಜೊತೆಗಿರಲಿದೆ. ನೀವು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಬಿಜೆಪಿ […]

ನೀವಿನ್ನು ಅನರ್ಹರಲ್ಲ; ನೀವೆಲ್ಲಾ ಭಾವಿ ಶಾಸಕರು, ಭಾವಿ ಸಚಿವರು:  BSY
ಸಾಧು ಶ್ರೀನಾಥ್​

Updated on: Nov 14, 2019 | 7:14 PM

ಬೆಂಗಳೂರು: ರಾಜ್ಯ ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಒಬ್ಬೊಬ್ಬೊರಾಗಿ ಅನರ್ಹರನ್ನು ಪಕ್ಷಕ್ಕೆ ಬರಮಾಡಿಕೊಂಡ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಾವು ನಿಮಗೆ ಕೊಟ್ಟ ಭರವಸೆಯನ್ನು ಪಾಲಿಸುತ್ತೇವೆ. ನಾವು ನಿಮಗೆ ನಂಬಿಕೆ, ವಿಶ್ವಾಸದ್ರೋಹ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ನಾವು ನಿಮಗೆ (ಅನರ್ಹರಿಗೆ) ನಂಬಿಕೆ, ವಿಶ್ವಾಸದ್ರೋಹ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ
ಕೇಂದ್ರದ ಬಿಜೆಪಿ ನಾಯಕತ್ವ ನಿಮ್ಮ ಜೊತೆಗಿರಲಿದೆ. ನೀವು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಬಿಜೆಪಿ ಕಾರ್ಯಕರ್ತರು ನಿಮ್ಮ ಜತೆ ಹೊಂದಿಕೊಳ್ಳುತ್ತಾರೆ. ಯಾರಿಗೂ, ಯಾವುದೇ ಆತಂಕ ಬೇಡ ಎಂದು ಹೇಳಿದ್ದೇನೆ. ಭಾವಿ ಶಾಸಕರು, ಭಾವಿ ಸಚಿವರಿಗೆ ನನ್ನ ಅಭಿನಂದನೆಗಳು ಎಂದು ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ ಬಳಿಕ ಸಿಎಂ ಭಾಷಣದಲ್ಲಿ ತಿಳಿಸಿದರು.


Published On - 11:46 am, Thu, 14 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us