ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ

ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳು ಮುಂದುವರೆಸುವ ನಿಟ್ಟಿನಲ್ಲಿ ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಅಂದರೆ 5 ದಿನಗಳು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ
ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ
Follow us
ಗಂಗಾಧರ​ ಬ. ಸಾಬೋಜಿ
|

Updated on:Aug 19, 2024 | 5:38 PM

ಬೆಂಗಳೂರು, ಆಗಸ್ಟ್ 19: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡೆವೆ ಮೆಟ್ರೋ (namma Metro) ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಆಗಸ್ಟ್​ 20, 23, 30 ಮತ್ತು ಸೆಪ್ಟೆಂಬರ್​​ 6, 11 ರಂದು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಬಿಎಂಆರ್​ಸಿಎಲ್​, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳು ಮುಂದುವರೆಸುವ ನಿಟ್ಟಿನಲ್ಲಿ ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು.

5 ದಿನ ಪೂರ್ಣ ದಿನ ರೈಲು ಸೇವೆಗಳು ಸ್ಥಗಿತ

  • ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:

  • ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ.
  • ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಿಗೆ, 5.00 ಗಂಟೆ ಬದಲಾಗಿ 06. ಗಂಟೆಗೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ

  • ಆಗಸ್ಟ್ 24ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಗಂಟೆ ಪ್ರಾರಂಭವಾಗಲಿದೆ.
  • ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 05.00 ಗಂಟೆಗೆ ಪ್ರಾರಂಭವಾಗಲಿದೆ.

ಮೆಟ್ರೋ ಟ್ವೀಟ್​

ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಬದಲಾವಣೆಯನ್ನು ಗಮನಿಸಿ ಸಂಚರಿಸುವಂತೆ ಬಿಎಂಆರ್​ಸಿಎಲ್ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Mon, 19 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ