ಬೆಂಗಳೂರು, ಆಗಸ್ಟ್ 19: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡೆವೆ ಮೆಟ್ರೋ (namma Metro) ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಆಗಸ್ಟ್ 20, 23, 30 ಮತ್ತು ಸೆಪ್ಟೆಂಬರ್ 6, 11 ರಂದು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.
ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಬಿಎಂಆರ್ಸಿಎಲ್, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳು ಮುಂದುವರೆಸುವ ನಿಟ್ಟಿನಲ್ಲಿ ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು.
Curtailment of Metro Services on the Green Line due to Signalling Tests on the days mentioned in the Media Release. Public make note the change and plan their commute. pic.twitter.com/ygHwXF8PaH
— ನಮ್ಮ ಮೆಟ್ರೋ (@OfficialBMRCL) August 19, 2024
ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಬದಲಾವಣೆಯನ್ನು ಗಮನಿಸಿ ಸಂಚರಿಸುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:20 pm, Mon, 19 August 24