AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಕಾಂಗ್ರೆಸ್​​​ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್‌ ಅಮಾನತಿಗೆ ಆಗ್ರಹ

ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪನನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು (ಅ.06) ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಇದೀಗ ಇಡಿ ಅಧಿಕಾರಿಗಳು, ಶಿವಶಂಕರಪ್ಪ ಸಾಹುಕಾರ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಕಾಂಗ್ರೆಸ್​​​ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್‌ ಅಮಾನತಿಗೆ ಆಗ್ರಹ
Pradeep Eshwar
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 06, 2026 | 5:04 PM

Share

ಚಿಕ್ಕಬಳ್ಳಾಪುರ, (ಅಕ್ಟೋಬರ್ 06): ಚಿಕ್ಕಬಳ್ಳಾಪುರ ಕಾಂಗ್ರೆಸ್​ನಲ್ಲಿ ಶಾಸಕ ಕಿತ್ತಾಟ ತಾರಕಕ್ಕೇರಿದೆ. ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಎಂ.ಸಿ. ಸುಧಾಕರ್ ನಡುವಿನ ಆರೋಪ ಪ್ರತ್ಯಾರೋಪಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಿನ್ನೆ ಅಷ್ಟೇ ಸಮಾಜಿಕ ಜಾಲತಾಣಗಳ ಮೂಲಕ ಸುಧಾಕರ್​ಗೆ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಇದೀಗ ಸುಧಾಕರ್ ಬೆಂಬಲಿಗರು ಪ್ರದೀಪ್ ಈಶ್ವರ್ ವಿರುದ್ಧ ಮುಗಬಿದ್ದಿದ್ದು, ಪ್ರದೀಪ್ ಈಶ್ವರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಪ್ರದೀಪ್ ಈಶ್ವರ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಚಿಂತಾಮಣಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು. ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಜಾತಿ ಸಂಘರ್ಷ ಇಲ್ಲ. ಸವರ್ಣೀಯರು, ದಲಿತರು, ಅಲ್ಪಸಂಖ್ಯಾತರು ಸಾಮರಸ್ಯದಿಂದ ಇದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ. ಪ್ರದೀಪ್ ಈಶ್ವರ್‌ ಶಿಕ್ಷಣ ಸಂಸ್ಥೆಯನ್ನು ಕಟ್ಟುವುದರಿಂದ ಹಿಡಿದು ಅವರು ಶಾಸಕರು ಆಗುವವರೆಗೂ ಡಾ.ಎಂ.ಸಿ.ಸುಧಾಕರ್ ಸಹಾಯವಿದೆ. ಪ್ರದೀಪ್ ಈಶ್ವರ್ ವಿರುದ್ಧ ಪೊಲೀಸರು ಕೇಸ್‌ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದೊಣ್ಣೆ ನಾಯಕನ ವಿರುದ್ಧ ಸಮರ ನಿರಂತರ: ಸ್ವಪಕ್ಷದ ಹಿರಿಯ ನಾಯಕನ ವಿರುದ್ಧವೇ ತಿರುಗಿ ಬಿದ್ದ ಪ್ರದೀಪ್‌ ಈಶ್ವರ್‌

ಎಚ್ಚರಿಕೆ ನೀಡಿದ್ದ ಪ್ರದೀಪ್ ಈಶ್ವರ್

ದೊಣ್ಣೆ ನಾಯಕನಿಗೆ ಹೇಳಲು ಬಯಸುತ್ತೇನೆ, ಕೆ.ಎಚ್. ಮುನಿಯಪ್ಪನವರಷ್ಟು ಸೌಮ್ಯ ಸ್ವಭಾವದ ವ್ಯಕ್ತಿ ನಾನಲ್ಲ. ಒಂದು ಕಲ್ಲು ಬಿದ್ದರೆ ಹತ್ತು ಕಲ್ಲು ಬಿಸಾಕಿ ಮಾತುಕತೆಗೆ ಬರುವ ವ್ಯಕ್ತಿತ್ವ ನನ್ನದು. ನಿಮ್ಮ ತಾಕತ್ತು ಎಷ್ಟಿದೆಯೋ ಅಷ್ಟು ಬಿಸಾಕಿ. ನಾನು ಹತ್ತರಷ್ಟು ತಿರುಗಿಸಿ ಕೊಡುವುದು ನನಗೆ ಗೊತ್ತಿದೆ. ದೊಣ್ಣೆ ನಾಯಕನಿಗೆ ಮತ್ತೊಮ್ಮೆ ಹೇಳುತ್ತಿದ್ದೇನೆ ನಿಮ್ಮ ವಿರುದ್ಧ ಸಮರ ನಿರಂತರ ಎಂದು ಹೆಸರು ಹೇಳದೆ ಎಂ.ಸಿ ಸುಧಾಕರ್ ಗೆ ಎಚ್ಚರಿಕೆ ನೀಡಿದ್ದರು.

ಅಲ್ಲದೇ ಮಾಜಿ ಸಚಿವ, ಹಾಲಿ ಚಿಂತಾಮಣಿ ಶಾಸಕ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಹಿರಂಗವಾಗಿ ಸಮರ ಸಾರಿದ್ದು, ಆಸ್ತಿ ಬಗ್ಗೆ ಸ್ಫೋಟಕ ಮಾಹಿತಿ ಹೊರಗೆ ಹಾಕ್ತೀನಿ ಅಂತಾ ನಿನ್ನೆ ಟ್ವೀಟ್ ಮಾಡಿದ್ದು, ಕಿತ್ತಾಟ ಇನ್ನಷ್ಟು ಜೋರಾಗಲು ಕಾರಣವಾಗಿದೆ.

ಈ ಕಿತ್ತಾಟ ಕಾಂಗ್ರೆಸ್​​​ಗೆ ಇರುಸುಮುರುಸು ಉಂಟು ಮಾಡಿದ್ದು, ಈ ಇಬ್ಬರ ನಾಯಕರ ನಡುವಿನ ಗಲಾಟೆ ವಿಚಾರ ಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಕೆ ಹರಿಪ್ರಸಾದ್ ಗಮನಕ್ಕೂ ಇದೆ. ಯಾವುದೇ ಸಂದರ್ಭದಲ್ಲಿ ಇಬ್ಬರನ್ನು ಕರೆದು ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಕ್ ಮಾಡಿ

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ