ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ: ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಸ್ಫೋಟ; ಎಲ್ಲೆಲ್ಲಿ?

ಲೋಕಸಭೆ ಚುನಾವಣೆಗೆ ಕರ್ನಾಟದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಂದ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಂದೆಡೆ, ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದವರು ಮತ್ತು ಅಭ್ಯರ್ಥಿಗಳ ಬೆಂಬಲಿಗರು, ಕಾರ್ಯಕರ್ತರು ಹರ್ಷಗೊಂಡಿದ್ದರೆ, ಇನ್ನೊಂದೆಡೆ, ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನವೂ ಸ್ಫೋಟಗೊಂಡಿದೆ. ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಗ್ರಾಮಾಂತರದ ಟಿಕೆಟ್ ನೀಡಲಾಗಿದೆ. ಆದರೆ, ಇಲ್ಲೂ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ: ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಸ್ಫೋಟ; ಎಲ್ಲೆಲ್ಲಿ?
ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬೆನ್ನಲ್ಲೇ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಸ್ಫೋಟ
Follow us
| Updated By: Rakesh Nayak Manchi

Updated on:Mar 14, 2024 | 12:26 PM

ಬೆಂಗಳೂರು, ಮಾ.14: ಲೋಕಸಭೆ ಚುನಾವಣೆಗೆ (Lok Sabha Election) ಕರ್ನಾಟದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಂದ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ (BJP Candidate List) ಹೆಸರು ಘೋಷಣೆಯಾಗಿದೆ. ಒಂದೆಡೆ, ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದವರು ಮತ್ತು ಅಭ್ಯರ್ಥಿಗಳ ಬೆಂಬಲಿಗರು, ಕಾರ್ಯಕರ್ತರು ಹರ್ಷಗೊಂಡಿದ್ದರೆ, ಇನ್ನೊಂದೆಡೆ, ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನವೂ ಸ್ಫೋಟಗೊಂಡಿದೆ. ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಗ್ರಾಮಾಂತರದ ಟಿಕೆಟ್ ನೀಡಲಾಗಿದೆ. ಆದರೆ, ಇಲ್ಲೂ ವಿರೋಧ ವ್ಯಕ್ತವಾಗುತ್ತಿದೆ.

ಟಿಕೇಟ್​ ಘೋಷಣೆ ಬೆನ್ನೆಲ್ಲೆ ಬೆಂಗಳೂರು ಉತ್ತರ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳುರು, ಚಾಮರಾಜನಗರ, ಮೈಸೂರು, ದಾವಣಗೆರೆ, ಬೀದರ್​, ಶಿವಮೊಗ್ಗ, ಚಿಕ್ಕೋಡಿ, ತುಮಕೂರು ಕ್ಷೇತ್ರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸ್ಥಳೀಯ ನಾಯಕರ ಅಸಮಾಧಾನದಿಂದ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ.

ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಗ್ರಾಮಾಂತರದ ಟಿಕೆಟ್ ನೀಡಲಾಗಿದೆ. ಆದರೆ, ಇಲ್ಲೂ ವಿರೋಧ ವ್ಯಕ್ತವಾಗುತ್ತಿದೆ. ಹೌದು, ಸ್ಥಳೀಯ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಕಾರ್ಯಕರ್ತರು ಗೋ ಬ್ಯಾಕ್​ ಅಭಿಯಾನ ನಡೆಸುತ್ತಿದ್ದಾರೆ. ಇದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪಕ್ಷಕ್ಕೆ ಮುಳುವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್

ಬೀದರ್​ ಕ್ಷೇತ್ರದಲ್ಲಿ ಎಲ್ಲ ಶಾಸಕರ ನೇರ ವಿರೋಧ ಹೊಂದಿರುವ ಭಗವಂತ ಖೂಬಾ ಅವರಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಕ್ಷೇತ್ರದಲ್ಲಿ ಮಣೆ ಹಾಕಿದೆ. ಮಾಜಿ ಸಚಿವ ಪ್ರಭು ಚೌಹಾಣ್ ಅವರು ಖೂಬಾ ಅವರಿಗೆ ಟಿಕೆಟ್ ನೀಡದಂತೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದರು. ಸಭೆಯಲ್ಲೂ ನೇರ ವಾಗ್ದಾಳಿ ನಡೆಸಿದ್ದರು. ಇದೀಗ ಮತ್ತೆ ಖೂಬಾಗೆ ಟಿಕೆಟ್ ಘೋಷಣೆಯಾಗಿದ್ದು, ಕ್ಷೇತ್ರದಲ್ಲಿ ಅಸಮಾಧಾನ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ.

ರಾಘವೇಂದ್ರ, ಬೊಮ್ಮಾಯಿಗೆ ಬಂಡಾಯದ ಬಿಸಿ

ಪುತ್ರನ ರಾಜಕೀಯ ಪ್ರವೇಶಕ್ಕಾಗಿ ಆರಂಭಕ್ಕಾಗಿ ಕೆಎಸ್ ಈಶ್ವರಪ್ಪ ಅವರು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ಚೆಲ್ಲಿದರು. ಬಳಿಕ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಪುತ್ರ ಕೆಇ ಕಾಂತೇಶ್​ಗೆ ಕೊಡಿಸಲು ಈಶ್ವರಪ್ಪ ಇನ್ನಿಲ್ಲದ ಪ್ರಯತ್ನ ನಡೆಸಿದರೂ ಬಿಜೆಪಿ ಹೈಕಮಾಂಡ್ ಶಾಸಕ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಇದರಿಂದ ಗರಂ ಆಗಿರುವ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದು, ಕಾರ್ಯಕರ್ತರ ಸಭೆಯನ್ನೂ ಕರೆದಿದ್ದಾರೆ. ಬಂಡಾಯ ಸ್ಪರ್ಧೆ ಬಗ್ಗೆ ಈ ಸಭೆಯಲ್ಲಿ ಚರ್ಚಿಸು ನಿರ್ಧರಿಸಲಾಗಿದೆ. ಒಂದೊಮ್ಮೆ, ಕೆಎಸ್ ಈಶ್ವರಪ್ಪ ಅವರು ಬಂಡಾಯವೆದ್ದರೆ, ಯಡಿಯೂರಪ್ಪ ಪುತ್ರ ರಾಘವೇಂದ್ರ ಸ್ಪರ್ಧಿಸುತ್ತಿರುವ ಶಿವಮೊಗ್ಗ ಕ್ಷೇತ್ರ ಹಾಗೂ ಬೊಮ್ಮಾಯಿ ಸ್ಪರ್ಧಿಸುತ್ತಿರುವ ಹಾವೇರಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಲಿದೆ.

ಕೊಪ್ಪಳ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಡಾ.ಬಸವರಾಜ ತ್ಯಾವಟೂರು ಅವರಿಗೆ ಬಿಜೆಪಿ ಟಿಕೆಟ್ ಲಭಿವಿಸೆ. ಕ್ಷೇತ್ರದ ಹಾಲಿ ಸಂಸದರಾಗಿರುವ ಸಂಗಣ್ಣ ಕರಡಿ ಅವರು ತಟಸ್ಥರಾದರೆ ಬಸವರಾಜ ಗೆಲುವು ಸುಲಭವಾಗಲಿದೆ.

ಇದನ್ನೂ ಓದಿ: ಮಗನಿಗೆ ಬಿಜೆಪಿ ಟಿಕೆಟ್ ಮಿಸ್ ಆಗ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ಧ ವಾಗ್ದಾಳಿ: ಬಂಡಾಯದ ಸುಳಿವು!

ದಾವಣಗೆರೆ ಕ್ಷೇತ್ರದಲ್ಲಿ ಹಾಲಿ ಸಂಸದ ಜಿಎಂ ಸಿದ್ದೇಶ್ವರ್​ಗೆ ಟಿಕೆಟ್ ನೀಡದಂತೆ ಒತ್ತಾಯಗಳು ಹಾಗೂ ವಿರೋಧಗಳು ವ್ಯಕ್ತವಾಗಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಕುಟುಂಬ ರಾಜಕಾರಣಕ್ಕೆ ಜೈ ಎಂದು ಹೇಳಿ ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಟಿಕೆಟ್ ಘೋಷಿಸಿದೆ. ಸಿದ್ದೇಶ್ವರ್ ಕುಟುಂಬಕ್ಕೇ ಟಿಕೆಟ್ ಘೋಷಣೆಯಾಗಿರುವುದರಿಂದ ಮಾಜಿ ಸಚಿವ ರೇಣುಕಾಚಾರ್ಯ, ರವೀಂದ್ರನಾಥ್​ ಮತ್ತಿತರರಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಪ್ರತಾಪ್​ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಅಸಮಾಧಾನದ ನಡುವೆ ಬೆಂಬಲಿಗರು ನ್ಯೂಟ್ರಲ್​ ಆಗುವ ಸಾಧ್ಯತೆ ಇದೆ. ತುಮಕೂರು ಕ್ಷೇತ್ರದಲ್ಲಿ ವಿ ಸೋಮಣ್ಣಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಮೇಲೆ ಹಾಗೂ ನಳಂಬ ಲಿಂಗಾಯತ ಸಮುದಾಯ ಹಿಡಿತ ಹೊಂದಿರುವ ಮಾಧುಸ್ವಾಮಿ ಅವರು ಮುಂದಿನ ನಡೆ ಕುತೂಹಲ ಮೂಡಿಸಿದೆ. ಇನ್ನೊಂದೆಡೆ, ಚಾಮರಾಜನಗರದಲ್ಲಿ ಶ್ರೀವಾಸ್​ ಪ್ರಸಾದ್​ ಕುಟುಂಬಕ್ಕೆ ಟಿಕೇಟ್​ ಸಿಗದಿದ್ದಕ್ಕೆ ಅಸಮಾಧಾನ ಏಳದು ಎಂದು ಹೇಳಲು ಸಾಧ್ಯವಿಲ್ಲ.

ತುಮಕೂರು ಕ್ಷೇತ್ರದಲ್ಲಿ ಮಾಧುಸ್ವಾಮಿ ನ್ಯೂಟ್ರಲ್ ಆದರೆ ವಿ ಸೋಮಣ್ಣ ಗೆಲುವು ಕಷ್ಟಕರವಾಗಲಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ರಮೇಶ್ ಕತ್ತಿ ನ್ಯೂಟ್ರಲ್ ಆದರೆ ಅಣ್ಣಾ ಸಾಹೇಬ್ ಜೋಲ್ಲೆ ಗೆಲುವು ಕಷ್ಟಕರವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Thu, 14 March 24

ತಾಜಾ ಸುದ್ದಿ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ