ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ; ಕಾರ್ಯಕ್ರಮಕ್ಕೆ ನಾಳೆ ಸಿದ್ದರಾಮಯ್ಯ ಚಾಲನೆ

| Updated By: ಆಯೇಷಾ ಬಾನು

Updated on: Feb 21, 2024 | 10:32 AM

ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ. 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ; ಕಾರ್ಯಕ್ರಮಕ್ಕೆ ನಾಳೆ ಸಿದ್ದರಾಮಯ್ಯ ಚಾಲನೆ
ಮಧು ಬಂಗಾರಪ್ಪ
Follow us on

ಶಿವಮೊಗ್ಗ, ಫೆ.21: ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

ಈ ಸರ್ಕಾರವನ್ನು ರಾಜ್ಯದ ಹೆಣ್ಣು ಮಕ್ಕಳು ಎತ್ತಿದ್ದಾರೆ. ಅದನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ನೀವು ಮಾಡಬೇಕು. ಶಿವಮೊಗ್ಗ ಜಿಲ್ಲೆಗೆ 100 ಹೊಸ KSRTC ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ. ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ‌ ತಿಳಿಸಿದರು.

ಇದನ್ನೂ ಓದಿ:  ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕೆಎಫ್​ಡಿ ಕಾಯಿಲೆಯಿಂದ ಮೃತಪಟ್ಟವರಿಗೆ ಪರಿಹಾರ ಕೊಡುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ‌, ಕೆಎಫ್​ಡಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಬೇಕು ಎಂದು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಕೆಎಫ್​ಡಿಯಿಂದ ಮೃತಪಟ್ಟವರ ಮಾಹಿತಿ ಕೊಡಲು ಸೂಚಿಸಿದ್ದೇನೆ. ಪರಿಹಾರ ಕೊಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು. ಇದೇ ವೇಳೆ ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರಕಾರ ಪರಿಹಾರ ನೀಡುತ್ತಿರುವ ಸಂಬಂಧ ಪ್ರತಿಕ್ರಿಯೆ ನೀಡಿದರು. ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ಸತ್ಯಸಾಯಿ ಬಾಬಾ ಆಸ್ಪತ್ರೆಗೆ 2 ಕೋಟಿ ಕೊಟ್ಟಿದ್ದರು. ಅದಕ್ಕೂ ವಿರೋಧ ಮಾಡಿದ್ರು. ನಮ್ಮ ರಾಜ್ಯದ ರೋಗಿಗಳು ಆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಅಂದಿದ್ದರು. ಅದೇ ರೀತಿ ಆನೆ ತುಳಿದು ಮೃತಪಟ್ಟಿದ್ದಕ್ಕೆ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ಕೆಲಸ ಇಲ್ಲ. ಅದಕ್ಕೆ ಇಂತಹ ಕೆಲಸ ಮಾಡ್ತಾರೆ. ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆಗೆ ಸರ್ಕಾರ ಯಾವುದೇ ಆದೇಶ ಮಾಡಿರಲಿಲ್ಲ. ಯಾವುದೋ ವಾಟ್ಸಾಪ್ ನಲ್ಲಿ ಬಂದ ಮೆಸೇಜ್​ನಿಂದ ಗೊಂದಲವಾಗಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ