ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ ಯತ್ನ ಪ್ರಕರಣ; ಕಲಬುರಗಿಯಲ್ಲಿ ಅಧಿಕಾರಿಗಳಿಂದ ದಿಢೀರ್ ದಾಳಿ

ದಾಳಿ ಕುರಿತಾಗಿ ಹೇಳಿಕೆ ನೀಡಿರುವ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ, ಜನತೆ ಸಂಕಷ್ಟದ ಸ್ಥಿತಿಯಲ್ಲಿರುವಾಗ ಹೆಚ್ಚಿನ ಹಣದ ಆಸೆಗಾಗಿ ಯಾರೊಬ್ಬರೂ ಕೂಡ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್​ಗಳನ್ನು ಮಾರಾಟ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ ಯತ್ನ ಪ್ರಕರಣ; ಕಲಬುರಗಿಯಲ್ಲಿ ಅಧಿಕಾರಿಗಳಿಂದ ದಿಢೀರ್ ದಾಳಿ
ಆಕ್ಸಿಜನ್ ಸಿಲಿಂಡರ್
Follow us
sandhya thejappa
|

Updated on: May 05, 2021 | 3:08 PM

ಕಲಬುರಗಿ: ರಾಜ್ಯಕ್ಕೆ ಪೂರೈಸಬೇಕಾದ ಆಕ್ಸಿಜನ್ ಸಿಲಿಂಡರ್​ಗಳನ್ನು ಮಹಾರಾಷ್ಟ್ರ, ಮತ್ತು ತೆಲಂಗಾಣ ರಾಜ್ಯಕ್ಕೆ ಕಾಳಸಂತೆಯಲ್ಲಿ ಮಾರುತ್ತಿದ್ದ ಆಕ್ಸಿಜನ್ ಇಂಡಸ್ಟ್ರಿ ಮೇಲೆ ಕಲಬುರಗಿ ಜಿಲ್ಲಾಡಳಿತ ದಿಢೀರ್ ದಾಳಿ ನಡೆಸಿ ಸಿಲಿಂಡರ್ ವಶಪಡಿಸಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ವಿಶೇಷವೆಂದರೆ ಎರಡು ದಿನಗಳ ಹಿಂದೆಯಷ್ಟೇ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ್ ಆರ್ ನಿರಾಣಿ ಅವರು ಅಕ್ರಮಗಳ ಮೇಲೆ ನಿಗಾವಹಿಸುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ದಾಳಿ ನಡೆಸಲಾಗಿದೆ. ದಾಳಿ ಸಂದರ್ಭದಲ್ಲಿ ಆಕ್ಸಿಜನ್ ತುಂಬಿದ ಕೆಲವು ಸಿಲಿಂಡರ್​ಗಲನ್ನು ವಶಕ್ಕೆ ಪಡೆಯಲಾಗಿದೆ.

ಕಲಬುರಗಿ ಜಿಲ್ಲೆಯ ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ವಿಜಯ ಆಕ್ಸಿಜನ್ ಇಂಡಸ್ಟ್ರಿ ಘಟಕದಿಂದ ನೆರೆಯ ಮಹಾರಾಷ್ಟ್ರ, ತೆಲಂಗಾಣಕ್ಕೆ ಅಕ್ರಮವಾಗಿ ವೈದ್ಯಕೀಯ ಆಮ್ಲಜನಕ ಪೂರೈಕೆಯಾಗುತ್ತಿದೆ ಎಂಬ ದೂರು ಜಿಲ್ಲಾಡಳಿತಕ್ಕೆ ಬಂದಿತ್ತು. ಆ ಮಾಹಿತಿಯನ್ನು ಆಧರಿಸಿ ಜಿಲ್ಲಾಡಳಿತ ನಿನ್ನೆ ರಾತ್ರಿ ವಿಜಯ ಆಕ್ಸಿಜನ್ ಇಂಡಸ್ಟ್ರಿ ಮೇಲೆ ದಾಳಿ ನಡೆಸಿ ಆಕ್ರಮವನ್ನು ಬಯಲಿಗೆ ಎಳೆದಿದೆ. ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಇಂಡಸ್ಟ್ರಿಯನ್ನು ವಶಕ್ಕೆ ಪಡೆದಿದೆ. ಎಸಿ ರಾಮಚಂದ್ರ ಗಡದೆ ಅವರ ಸಮ್ಮುಖದಲ್ಲಿ ನಡೆದ ಈ ದಾಳಿಯಿಂದಾಗಿ ಅಕ್ರಮ ಬಯಲಿಗೆ ಬಂದಿದೆ.

ಸಚಿವರ ಎಚ್ಚರಿಕೆ ಈ ದಾಳಿ ಕುರಿತಾಗಿ ಹೇಳಿಕೆ ನೀಡಿರುವ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ, ಜನತೆ ಸಂಕಷ್ಟದ ಸ್ಥಿತಿಯಲ್ಲಿರುವಾಗ ಹೆಚ್ಚಿನ ಹಣದ ಆಸೆಗಾಗಿ ಯಾರೊಬ್ಬರೂ ಕೂಡ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್​ಗಳನ್ನು ಮಾರಾಟ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಅನೇಕ ಕಡೆ ಸಕಾಲಕ್ಕೆ ಸರಿಯಾಗಿ ಕೊವಿಡ್ ಸೋಂಕಿತರಿಗೆ ಆಕ್ಸಿಜನ್ ಸಿಗದೆ ಸಾವು- ನೋವು ಸಂಭವಿಸಿದೆ. ಕೊವಿಡ್ ಸಂಕಷ್ಟದ ಸ್ಥಿತಿಯಲ್ಲಿ ಆಕ್ಸಿಜನ್ ತುಂಬಾ ಅತ್ಯಗತ್ಯ. ಜೀವ ಉಳಿಸುವ ಸಂಜೀವಿನಿ ಎಂದೇ ಹೇಳಲಾಗುವ ಇದನ್ನು ಕಾಳಸಂತೆಯಲ್ಲಿ ಮಾರಾಟ ಮಾಡದಂತೆ ಜನತೆಯಲ್ಲಿ ಪ್ರಾರ್ಥಿಸಿದ್ದಾರೆ. ಯಾರಾದರೂ ಹಣದ ಆಸೆಗಾಗಿ ಅಕ್ರಮವಾಗಿ ಸಿಲಿಂಡರ್ಗಳನ್ನು ಸಂಗ್ರಹಿಸಿಕೊಂಡಿದ್ದರೆ ಕೂಡಲೇ ಜಿಲ್ಲಾಡಳಿತಕ್ಕೆ ಹಿಂದಿರುಗಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಕಳೆದ ರಾತ್ರಿ ಪತ್ತೆಯಾದ ಸಿಲಿಂಡರ್ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳಲಿರಲಿ, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಜೊತೆ ಮಾತಮಾಡಿದ್ದು, ಹೊರ ರಾಜ್ಯಗಳಿಗೆ ಸಂಪಕ೯ ಕಲ್ಪಿಸುವ ಚೆಕ್ ಪೋಸ್ಟ್​ಗಳನ್ನು ಇನ್ನಷ್ಟು ಬಿಗಿಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಜೀವನ ಹಂಗು ತೊರೆದು ಈ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಕಲಬುರಗಿ ಜಿಲ್ಲೆಯ ಜಿಲ್ಲಾಡಳಿತಕ್ಕೆ ವಿಶೇಷ ಅಭಿನಂದನೆಗಳು. ಒಳ್ಳೆಯ ಕೆಲಸಗಳಿಗೆ ಯಾವಾಗಲೂ ನಮ್ಮ ಪ್ರೋತ್ಸಾಹ ಇದ್ದೇ ಇರುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಅಂತ್ಯಕ್ರಿಯೆಗೆ ಹಣ ನೀಡುವ ವಿಚಾರಕ್ಕೆ ಮಾರಣಾಂತಿಕ ಹಲ್ಲೆ

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ; ಆರೋಪ ಸರಿಯಲ್ಲ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಣ್ಣೀರು

(District administration attacked on vijaya oxygen industry and seized the oxygen cylinder at kalaburagi)

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ