ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್; ಜಿಲ್ಲಾಡಳಿತದ ಈ ಕೊವಿಡ್ ನಿಯಮದಿಂದ ಸಾರ್ವಜನಿಕರಲ್ಲಿ ಗೊಂದಲ

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಾತ್ರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್​ಡೌನ್, ವಾರಾಂತ್ಯದ ಶನಿವಾರ, ಭಾನುವಾರವೂ ಸಂಪೂರ್ಣ ಲಾಕ್ ಮಾಡಲಾಗುತ್ತಿದೆ. ತರಕಾರಿ, ಹಣ್ಣಿನ ವ್ಯಾಪಾರಿಗಳು ಹಾಗೂ ಜನರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್; ಜಿಲ್ಲಾಡಳಿತದ ಈ ಕೊವಿಡ್ ನಿಯಮದಿಂದ ಸಾರ್ವಜನಿಕರಲ್ಲಿ ಗೊಂದಲ
ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್
Follow us
preethi shettigar
|

Updated on: May 29, 2021 | 2:47 PM

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಆದರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಕೊರೊನಾ ಎರಡನೇ ಅಲೆಯ ಸೋಂಕು ಏರಿಕೆ ಆಗುತ್ತಿದೆ. ಹೀಗಾಗಿ, ಕೊವಿಡ್ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಮುಂದಾಗಿದ್ದು, ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದೆ. ಆದರೆ ಕೊರೊನಾ ನಿಯಂತ್ರಣಕ್ಕಿಂತ ಈ ಭಾಗದ ಜನರಲ್ಲಿ ಈ ರೀತಿಯಾ ಲಾಕ್​ಡೌನ್ ಗೊಂದಲ ಸೃಷ್ಟಿಸಿದೆ.

ಕೊರೊನಾ ಸೋಂಕಿನ ಪ್ರಮಾಣ ಶೇಕಡಾ 4ರಷ್ಟಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ, ಈಗ ಶೇ. 20ಕ್ಕೆ ಏರಿದೆ. ಹೀಗಾಗಿ, ಜಿಲ್ಲಾಡಳಿತ ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದೆ. ಮೇ 26ರಿಂದ ಜೂನ್ 07ರವರೆಗೆ ದಿನಬಿಟ್ಟು ದಿನ ಸಂಪೂರ್ಣ ಲಾಕ್​ಡೌನನ್​ಗೆ ಡಿಸಿ ಆದೇಶಿಸಿದ್ದಾರೆ. ಜಿಲ್ಲಾಡಳಿತದ ಆದೇಶ ಸಾರ್ವಜನಿಕರು ಮತ್ತು ವ್ಯಾಪಾರಿಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೀಗಾಗಿ ಜನ ನಿತ್ಯವೂ ರಸ್ತೆಗಿಳಿಯುತ್ತಿದ್ದು, ಪೊಲೀಸರಿಂದ ದಂಡಕ್ಕೆ ಗುರಿಯಾಗುವಂತಾಗಿದೆ.

ಅಂತೆಯೇ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿ ಬೀಳುವಂತಾಗಿದೆ. ಆದರೆ ಬೇರೆ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಿದ್ದು, ಇಲ್ಲಿ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗೆಯೇ ಜನರು ಕೂಡ ಈ ಬಗ್ಗೆ ಸರಿಯಾದ ಮಾಹಿತಿ ಹೊಂದಿಲ್ಲ. ಹೀಗಾಗಿ ಚಿತ್ರದುರ್ಗ ಜಿಲ್ಲಾಡಳಿತ ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದ ಬಗ್ಗೆ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರಾದ ಶಫಿವುಲ್ಲಾ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಾತ್ರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್​ಡೌನ್, ವಾರಾಂತ್ಯದ ಶನಿವಾರ, ಭಾನುವಾರವೂ ಸಂಪೂರ್ಣ ಲಾಕ್ ಮಾಡಲಾಗುತ್ತಿದೆ. ತರಕಾರಿ, ಹಣ್ಣಿನ ವ್ಯಾಪಾರಿಗಳು ಹಾಗೂ ಜನರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲಾಡಳಿತ ಘೋಷಿಸಿರುವ ದಿನಬಿಟ್ಟು ದಿನ ಲಾಕ್​ಡೌನ್ ಸಾರ್ವಜನಿಕರಲ್ಲಿ ಗೊಂದಲು ಹುಟ್ಟುಹಾಕಿದೆ. ಹೀಗಾಗಿ, ಜಿಲ್ಲಾಡಳಿತ ಈ ಬಗ್ಗೆ ಮರು ಪರಿಶೀಲನೆ ನಡೆಸಬೇಕು ಹಾಗೂ ಕೊರೊನಾ ನಿಯಂತ್ರಣಕ್ಕೆ ಸೂಕ್ತ ರೀತಿಯ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಕೊರೊನಾ 3ನೇ ಅಲೆಯ ಆತಂಕ‌, ಮತ್ತೆ ಲಾಕ್​ಡೌನ್​ಗೆ ಒಲವು: ಹೀಗಿರಲಿದೆ ಜೂನ್​ ತಿಂಗಳ ಚಿತ್ರಣ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್