ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸಂಪರ್ಕಿಸಬಹುದು. ಸರ್ಕಾರಿ ಅಧಿಕಾರಿಗಳ ರಜೆ ರದ್ದುಗೊಳಿಸಲಾಗಿದೆ. ಎಲ್ಲಾ ಅಧಿಕಾರಿಗಳೂ ಕೇಂದ್ರ ಸ್ಥಾನದಲ್ಲಿ ಅಲರ್ಟ್ ಆಗಿರಬೇಕೆಂದು ಉಡುಪಿಯ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ
ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on: Jul 14, 2021 | 1:13 PM

ಉಡುಪಿ: ಜಿಲ್ಲೆಯಲ್ಲಿ ಐದು ದಿನ ಭಾರೀ ಗಾಳಿ ಮಳೆಯಾಗಲಿದ್ದು, ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆ ಜನರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬೀಚ್​ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು. ಸಮುದ್ರ ಪ್ರಕ್ಷ್ಯುಬ್ಧವಾಗಿರುವುದರಿಂದ ನೀರಿಗೆ ಇಳಿಯಬಾರದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸಂಪರ್ಕಿಸಬಹುದು. ಸರ್ಕಾರಿ ಅಧಿಕಾರಿಗಳ ರಜೆ ರದ್ದುಗೊಳಿಸಲಾಗಿದೆ. ಎಲ್ಲಾ ಅಧಿಕಾರಿಗಳೂ ಕೇಂದ್ರ ಸ್ಥಾನದಲ್ಲಿ ಅಲರ್ಟ್ ಆಗಿರಬೇಕೆಂದು ಉಡುಪಿಯ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ರಸ್ತೆಗೆ ಉರುಳಿದ ಮರ ಹಾಸನ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿದೆ. ಭಾರಿ ಗಾಳಿ, ಮಳೆಯಿಂದ ಮರ ರಸ್ತೆಗೆ ಉರುಳಿದೆ. ಸಕಲೇಶಪುರ ತಾಲೂಕಿನ ಬಿಸಿಲೆ ಬಳಿ ರಸ್ತೆಗೆ ಮರ ಉರುಳಿದ್ದು, ಬಿಸಿಲೆ- ಸುಬ್ರಹ್ಮಣ್ಯ ನಡುವೆ ವಾಹನ ಸಂಚಾರ ಸ್ಥಗಿತವಾಗಿದೆ. ಲೋಕೋಪಯೋಗಿ ಇಲಾಖೆ ಸಿಬ್ಬಂದಿಯಿಂದ ತೆರವು ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ

Karnataka Rain: ಕೊಡಗಿನಲ್ಲಿ ಮುಂದುವರಿದ ವರುಣ; ಕಾವೇರಿ, ಲಕ್ಷ್ಮಣ ತೀರ್ಥ ನದಿಗಳ ನೀರಿನ ಮಟ್ಟ ಏರಿಕೆ

Karnataka Dams: ರಾಜ್ಯದಲ್ಲಿ ಮಳೆ ಜೋರು; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

(District Collector has announced a five day Orange Alert in Udupi)