ಬಹುತೇಕ ಜಿಲ್ಲಾ ಕೋರ್ಟ್​ಗಳ ಕೊವಿಡ್ ಮಾರ್ಗಸೂಚಿ ಸಡಿಲ

ಬಹುತೇಕ ಜಿಲ್ಲಾ ಕೋರ್ಟ್​ಗಳ ಕೊವಿಡ್ ಮಾರ್ಗಸೂಚಿ ಸಡಿಲಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಕ್ಷಿದಾರರಿಗೆ ಕೋರ್ಟ್ ಪ್ರವೇಶಕ್ಕಿದ್ದ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ನಿರ್ಧರಿಸಲಾಗಿದೆ.

ಬಹುತೇಕ ಜಿಲ್ಲಾ ಕೋರ್ಟ್​ಗಳ ಕೊವಿಡ್ ಮಾರ್ಗಸೂಚಿ ಸಡಿಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 9:04 PM

ಬೆಂಗಳೂರು: ಬಹುತೇಕ ಜಿಲ್ಲಾ ಕೋರ್ಟ್​ಗಳ ಕೋವಿಡ್ ಮಾರ್ಗಸೂಚಿ ಸಡಿಲಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಕ್ಷಿದಾರರಿಗೆ ಕೋರ್ಟ್ ಪ್ರವೇಶಕ್ಕಿದ್ದ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ನಿರ್ಧರಿಸಲಾಗಿದೆ.

ಅದರ ಅನ್ವಯ, ಕೋವಿಡ್ ಲಕ್ಷಣಗಳಿಲ್ಲದಿದ್ದರೆ ನ್ಯಾಯಾಲಯ ಪ್ರವೇಶಕ್ಕೆ ಅನುಮತಿ ಸಿಗಲಿದೆ. ತಾಪಮಾನ ಪರೀಕ್ಷೆ ನಂತರ ಕೋರ್ಟ್ ಪ್ರವೇಶಕ್ಕೆ ಅನುಮತಿ ದೊರಕಲಿದೆ. ಆದರೆ, ದೈಹಿಕ ಅಂತರ, ಮಾಸ್ಕ್ ಕಡ್ಡಾಯ ನಿಯಮಗಳು ಮೊದಲಿನಂತೆ ಮುಂದುವರಿಯಲಿದೆ. ಕ್ಯಾಂಟೀನ್, ಜೆರಾಕ್ಸ್, ಟೈಪಿಂಗ್, ನೋಟರಿಗೂ ಅವಕಾಶ ಲಭ್ಯವಾಗಲಿದೆ. ಈ ಬಗ್ಗೆ, ಮುಖ್ಯ ನ್ಯಾಯಾಧೀಶರ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಪ್ರಕಟಣೆ ಹೊರಡಿಸಿದ್ದಾರೆ. ಜನವರಿ 18ರಿಂದ ಪರಿಷ್ಕೃತ ಮಾರ್ಗಸೂಚಿ ಜಾರಿಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾ ಕೋರ್ಟ್​ಗಳಲ್ಲಿ ನಿರ್ಬಂಧ ಮುಂದುವರಿಯಲಿದೆ. ಕ್ಯಾಂಟೀನ್​ನಲ್ಲಿ ಪ್ಯಾಕೆಟ್ ಅಹಾರ, ಕಾಫಿ, ಟೀ ಬಿಸ್ಕತ್ ಪೂರೈಕೆ ಬಗ್ಗೆ ಬಾರ್ ಅಸೋಸಿಯೇಷನ್ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಕುರಿತು ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊವಿಶೀಲ್ಡ್​ ಲಸಿಕೆ.. DCGI ಮಾರ್ಗಸೂಚಿ

Published On - 8:32 pm, Wed, 13 January 21

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ
ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ: HDK
ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ: HDK