ಅಧ್ಯಕ್ಷರ ನೇಮಕವಾಗುವವರೆಗೂ ಜಿಲ್ಲಾ ನ್ಯಾಯಾದೀಶರೇ ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯಾಗಿ ಮುಂದುವರಿಕೆ: ಹೈಕೋರ್ಟ್

ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಸಿಬ್ಬಂದಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರು  ಮುಂದುವರಿಯಲಿದ್ದಾರೆ ಎಂದು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ಅಧ್ಯಕ್ಷರ ನೇಮಕವಾಗುವವರೆಗೂ ಜಿಲ್ಲಾ ನ್ಯಾಯಾದೀಶರೇ ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯಾಗಿ ಮುಂದುವರಿಕೆ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ವಿವೇಕ ಬಿರಾದಾರ

Updated on:Sep 28, 2023 | 2:27 PM

ಬೆಂಗಳೂರು ಸೆ.28: ಚಿತ್ರದುರ್ಗದ (Chitradurga) ಮುರುಘಾಮಠಕ್ಕೆ (Murugha Mutt) ಅಧ್ಯಕ್ಷರು ನೇಮಕವಾಗುವವರೆಗೆ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೇ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದಿದ್ದಾರೆ ಎಂದು ಹೈಕೋರ್ಟ್ (High Court)​ ಆದೇಶ ನೀಡಿದೆ. ಸಂಘದ ಬೈಲಾ ಪ್ರಕಾರ ಶ್ರೀಮುರುಘರಾಜೇಂದ್ರ ವಿದ್ಯಾಪೀಠದ ಅಧ್ಯಕ್ಷರು ಮಠದ ಜಗದ್ಗುರುಗಳೇ ಆಗಬೇಕು. ಆದರೆ ಮುರುಘಾಮಠದ ಜಗದ್ಗುರುಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಅಲ್ಲಿಯವರೆಗೆ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರೇ ಮುರುಘಾ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಪೀಠ ಹೇಳಿದೆ.

ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಸಿಬ್ಬಂದಿ ಹಿತದೃಷ್ಟಿಯಿಂದ ಈ ಆದೇಶ ನೀಡಲಾಗಿದೆ. ಉಸ್ತುವಾರಿ ಸಮಿತಿಗೆ ನಿರ್ಧಾರ ಕೈಗೊಳ್ಳುವ ಸದಸ್ಯರ ಅಗತ್ಯವಿದೆ. ಹೀಗಾಗಿ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರು  ಮುಂದುವರಿಯಲಿದ್ದಾರೆ ಎಂದು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ಆಡಳಿತಾಧಿಕಾರಿಯನ್ನು ನೇಮಿಸಿದ್ದ ಹೈಕೋರ್ಟ್​

ಇದೇ ವರ್ಷ ಮೇ ತಿಂಗಳಲ್ಲಿ ರಾಜ್ಯ ಸರ್ಕಾರವು ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಆದರೆ ಈ ನೇಮಕವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆಯನ್ನು ನಡೆಸಿದ್ದ  ಸಿಜೆ‌ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಎಂ.ಜಿ.ಎಸ್.ಕಮಲ್​ ಅವರಿದ್ದ ವಿಭಾಗೀಯ ಪೀಠ ಜುಲೈ ತಿಂಗಳಲ್ಲಿ ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಕ ಮಾಡಿ  ಆದೇಶ ಹೊರಡಿಸಿತ್ತು. ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು.

ಇದನ್ನೂ ಓದಿ: ಎಲ್ಲ ಇಲಾಖೆ, ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನ ಪೂರ್ಣಗೊಳಿಸಿ: ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಜಗದ್ಗುರು ಮುರುಘರಾಜೇಂದ್ರ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಮಠ, ವಿದ್ಯಾಪೀಠದ ದಿನನಿತ್ಯದ ವ್ಯವಹಾರ ನೋಡಿಕೊಳ್ಳಬೇಕು. ಯಾವುದೇ ನೀತಿ ನಿರ್ಧಾರದ‌ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಚಿತ್ರದುರ್ಗ ಜಿಲ್ಲಾಧಿಕಾರಿಯವರು ಜಿಲ್ಲಾ ನ್ಯಾಯಾಧೀಶರಿಗೆ ಸಹಕಾರ ನೀಡಬೇಕು. ಜಿಲ್ಲಾ ನ್ಯಾಯಾಧೀಶರು ಕೋರಿದ‌ ಸಹಕಾರ ನೀಡಬೇಕು ಎಂದು ವಿಭಾಗೀಯ ಪೀಠ ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Thu, 28 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ