AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿನಾಡಿನಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು.. ಪೊಲೀಸ್ ಇಲಾಖೆಯಿಂದ ವಿನೂತನ ಹೆಜ್ಜೆ

ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಬಹುಮುಖ್ಯ ಕಾರಣ ಏನೆಂದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟಾಗಬಾರದು. ಭಾರಿ ಪ್ರಮಾಣದ ದರೋಡೆ, ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ಕೂಡ ತಡೆಯಲು ಈ ಸಿಸಿಟಿವಿ ಕ್ಯಾಮರಾಗಳು ಸಹಕಾರಿಯಾಗುತ್ತವೆ.

ಗಣಿನಾಡಿನಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು.. ಪೊಲೀಸ್ ಇಲಾಖೆಯಿಂದ ವಿನೂತನ ಹೆಜ್ಜೆ
ಬಳ್ಳಾರಿ ನಗರ
Follow us
sandhya thejappa
|

Updated on:Mar 10, 2021 | 6:03 PM

ಬಳ್ಳಾರಿ: ಪೊಲೀಸ್ ಇಲಾಖೆಯು ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಆಳವಡಿಸುವುದು ಸಾಮಾನ್ಯ. ಆದರೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಖಾಸಗಿ ಸಹಭಾಗಿತ್ವದಲ್ಲಿ ನಗರದ ಎಲ್ಲಾ ಕಡೆ ಈಗ ಸಿಸಿ ಕ್ಯಾಮರಾ ಹಾಕಲು ಜಿಲ್ಲಾ ಪೊಲೀಸ್​ ಮುಂದಾಗಿದೆ.

ಬಳ್ಳಾರಿ ನಗರದ ಕೆಲವೊಂದು ಪ್ರದೇಶಗಳಲ್ಲಿ ಮಾತ್ರ ಪೊಲೀಸ್ ಇಲಾಖೆ ಸಿಸಿ ಕ್ಯಾಮರಾಗಳನ್ನ ಆಳವಡಿಸಿತ್ತು. ಜನನಿಬಿಡ ಪ್ರದೇಶ, ಮಾರ್ಕೆಟ್​ಗಳು, ವಾಣಿಜ್ಯ ಸಂಕೀರ್ಣ ಸೇರಿದಂತೆ ಹಲವು ಕಡೆ ಸಿಸಿ ಕ್ಯಾಮರಾಗಳು ಇರಲಿಲ್ಲ. ಆದರೆ ಈಗ ಜಿಲ್ಲಾ ಪೊಲೀಸ್ ಇಲಾಖೆ ಕರ್ನಾಟಕ ಪಬ್ಲಿಕ್ ಸೇಫ್ಟಿ ಆ್ಯಕ್ಟ್ – 2017ರ ಅಡಿ 550 ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸಿಸಿಟಿವಿ ಕ್ಯಾಮರಾಗಳು ಜಿಲ್ಲೆಯ ಮಹಾನಗರದ ನಾನಾ ಪ್ರದೇಶಗಳಲ್ಲಿ ಅಳವಡಿಸಲು ಮುಂದಾಗಿದೆ. ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯು ವಾಣಿಜ್ಯ ಹಾಗೂ ವ್ಯಾಪಾರೋದ್ಯಮ ಗಳಿಗೆ ಕ್ಯಾಮರಾ ಅಳವಡಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಿದೆ. ಆ ಪೈಕಿ ಸುಮಾರು 250 ಸಿಸಿಟಿವಿ ಕ್ಯಾಮರಾಗಳನ್ನ ವಾಣಿಜ್ಯ ಮತ್ತು ವ್ಯಾಪಾರೋದ್ಯಮಿಗಳು ಅಲ್ಲಲ್ಲಿ ಅಳವಡಿಸಿಕೊಂಡಿದ್ದು, ಅವುಗಳನ್ನ ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯು ಪರಿಶೀಲನೆ ನಡೆಸಿದೆ. ಉಳಿದ 300 ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಈಗಾಗಲೇ ಸ್ಥಳಗಳನ್ನ ಗುರುತಿಸಿ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಅತೀ ಶೀಘ್ರದಲ್ಲೇ ಈ ಅತ್ಯಾಧುನಿಕ ತಂತ್ರಜ್ಞಾನ ಉಳ್ಳ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಕಾರ್ಯ ನಡೆಯುತ್ತದೆ.

ಕಾರಣವೇನು? ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಬಹುಮುಖ್ಯ ಕಾರಣ ಏನೆಂದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟಾಗಬಾರದು. ಭಾರಿ ಪ್ರಮಾಣದ ದರೋಡೆ, ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ಕೂಡ ತಡೆಯಲು ಈ ಸಿಸಿಟಿವಿ ಕ್ಯಾಮರಾಗಳು ಸಹಕಾರಿಯಾಗುತ್ತವೆ. ಇದಲ್ಲದೇ ಅಪರಾಧಗಳನ್ನ ಬಹು ಬೇಗನೆ ಡಿಟೆಕ್ಟಿವ್ ಮಾಡಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲ ಅಡಾವತ್ ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮರಾ 

ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಏಳು ವರ್ಷಗಳ ಹಿಂದಿನ ಹಳೆಯ ಸಿಸಿಟಿವಿ ಕ್ಯಾಮರಾಗಳಿದ್ದು, ಅವುಗಳ ನಿರ್ವಹಣೆಗೆ ಬಹಳ ಖರ್ಚು- ವೆಚ್ಚ ತಗುಲುತ್ತದೆ. ಅಂದಾಜು 42 ಸಿಸಿಟಿವಿ ಕ್ಯಾಮರಾಗಳು ಅತ್ಯಂತ ಹಳೆಯ ತಂತ್ರಜ್ಞಾನ ಉಳ್ಳದ್ದಾಗಿವೆ. ಆಗಾಗ ರಿಪೇರಿ ಬರುವುದರಿಂದ ಅವುಗಳಿಗೂ ಕೂಡ ಅತ್ಯಾಧುನಿಕ ತಂತ್ರಜ್ಞಾನದ ಸ್ಪರ್ಶ ನೀಡಲು ಜಿಲ್ಲಾ ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಅತ್ಯಾಧುನಿಕ ತಂತ್ರಜ್ಞಾನ ಉಳ್ಳ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಾರ್ವಜನಿಕ ವಲಯ ಹಾಗೂ ವ್ಯಾಪಾರೋದ್ಯಮಿಗಳ ಸಹಭಾಗಿತ್ವ ಸಕಾರಾತ್ಮಕವಾಗಿದೆ. ಈಗಾಗಲೇ ಸಿಸಿಟಿವಿ ಕ್ಯಾಮರಾಗಳ ಸ್ವರೂಪ ಹೇಗಿರಬೇಕು ಎಂದು ತಿಳಿಸಿಕೊಡಲಾಗಿದೆ. 920×1080 ಮೆಗಾ ಫಿಕ್ಸಲ್ ಫುಲ್ ಹೆಚ್ಡಿ ಕ್ವಾಲಿಟಿಯುಳ್ಳ ಕ್ಯಾಮರಾಗಳನ್ನ ಅಳವಡಿಸಬೇಕು. ಅಂದಾಜು 30 ದಿನಗಳ ಕಾಲ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿರಬೇಕು ಎಂದು ಈಗಾಗಲೇ ತಿಳಿ ಹೇಳಲಾಗಿದೆ.

ದಂಡ ವಿಧಿಸಲು ಪೊಲೀಸ್ ಇಲಾಖೆ ನಿರ್ಧಾರ ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಗರದ ಜನನಿಬಿಡ ಪ್ರದೇಶಗಳಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಸಿ ಕ್ಯಾಮರಾ ಆಳವಡಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಅಂತಿದ್ದಾರೆ ಸ್ಥಳೀಯರು.

ಈಗಾಗಲೇ ಬಳ್ಳಾರಿ ನಗರದ ಯಾವ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಆಳವಡಿಸಬೇಕು ಎನ್ನುವ ಬಗ್ಗೆ ಆಯಾ ಠಾಣೆಯ ವ್ಯಾಪ್ತಿಯಲ್ಲಿ ಸ್ಥಳಗಳನ್ನ ಗುರುತಿಸಲಾಗಿದೆ. ಗುರುತಿಸಿದ ಸ್ಥಳಗಳಲ್ಲಿ ಅಂಗಡಿ, ಹೋಟೆಲ್, ಶಾಪಿಂಗ್ ಮಾಲ್ ಸೇರಿದಂತೆ ವಾಣಿಜ್ಯ ಸಂಕೀರ್ಣಗಳ ಮಾಲೀಕರು ಕಡ್ಡಾಯವಾಗಿ ಸಿಸಿ ಕ್ಯಾಮರಾ ಆಳವಡಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಜೊತೆಗೆ ಸಿಸಿ ಕ್ಯಾಮರಾಗಳನ್ನು ಅಡವಳಿಸಲು ಬೇಕಾಗಿರುವ ಖರ್ಚನ್ನು ಅಂಗಡಿ, ಹೋಟೆಲ್, ಶಾಪಿಂಗ್ ಮಾಲ್ ಸೇರಿದಂತೆ ವಾಣಿಜ್ಯ ಸಂಕೀರ್ಣಗಳ ಮಾಲೀಕರೇ ನೋಡಿಕೊಳ್ಳಬೇಕು. ಇನ್ನು ಪೊಲೀಸರು ಆಯಾ ಠಾಣೆ ವ್ಯಾಪ್ತಿಯ  ಸಿಸಿ ಕ್ಯಾಮರಾಗಳತ್ತ ಹೆಚ್ಚು ಗಮನ ಹರಿಸುತ್ತಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

TV9 Digital Live | ನೌಕರಿಗೆ ಸೇರಲು ಪೊಲೀಸ್ ಪ್ರಮಾಣಪತ್ರ ಅಗತ್ಯ ಎಂಬ ನಿಯಮ ಬೇಕೇ?

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

Published On - 5:55 pm, Wed, 10 March 21

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ