ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಿತಿ: ಡಿಕೆ ಶಿವಕುಮಾರ್
ಸಮಿತಿಗಳ ರಚನೆಯನ್ನು ಪೂರ್ಣಗೊಳಿಸಲು ಅವರು (ಖರ್ಗೆ) ನಮಗೆ ಗಡುವು ವಿಧಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ನಾಮನಿರ್ದೇಶನಗಳನ್ನು ಸಲ್ಲಿಸುವಂತೆ ನಾನು ನಮ್ಮ ಪಕ್ಷದ ಶಾಸಕರಿಗೆ ಸೂಚಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು, ಡಿಸೆಂಬರ್ 18: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ (Guarantee Schemes) ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನ ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಮಿತಿಗಳ ರಚನೆಯನ್ನು ಪೂರ್ಣಗೊಳಿಸಲು ಅವರು (ಖರ್ಗೆ) ನಮಗೆ ಗಡುವು ವಿಧಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ನಾಮನಿರ್ದೇಶನಗಳನ್ನು ಸಲ್ಲಿಸುವಂತೆ ನಾನು ನಮ್ಮ ಪಕ್ಷದ ಶಾಸಕರಿಗೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.
ನಿಗಮ ಮಂಡಳಿಗಳಿಗೆ ನೇಮಕಗೊಂಡವರ ಪಟ್ಟಿಗೆ ಅನುಮೋದನೆ ಪಡೆಯಲು ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡಲು ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಸಚಿವ ಸ್ಥಾನ ಸಿಗದ ಹಿರಿಯ ಶಾಸಕರು ಮಂಡಳಿ, ನಿಗಮಗಳ ಪ್ರಮುಖ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದಾರೆ. ನೇಮಕಾತಿ ವಿಳಂಬದ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ.
ಇದನ್ನೂ ಓದಿ: ಹೊಸ ವರ್ಷಕ್ಕೆ ಗೈಡ್ ಲೈನ್ಸ್ ರೆಡಿ: ಡಿ. 31ರ ಮಧ್ಯರಾತ್ರಿಯಿಂದಲೇ ಅನ್ವಯ
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ತಳ್ಳಿಹಾಕಿದ ಶಿವಕುಮಾರ್, ಸಿಂಹ ಅವರನ್ನು ಬಲೆಗೆ ಬೀಳಿಸಲು ಅವರೇನು ಚಿಕ್ಕ ಮಗು ಅಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:54 am, Mon, 18 December 23