AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಆರ್​ಟಿಒ ಎಚ್ಚರಿಕೆಗೂ ಬಗ್ಗದ ಖಾಸಗಿ ಬಸ್​ಗಳು, ಗಗನಕ್ಕೇರಿದ ಟಿಕೆಟ್ ದರ

ದೀಪಾವಳಿ ಹಬ್ಬ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಲು ರಜೆ ಇದ್ದು, ಖಾಸಗಿ ಬಸ್​​​ಗಳಿಗೆ ಟಿಕೆಟ್​ ದರ ಬೇಕಾಬಿಟ್ಟಿ ಏರಿಕೆ ಮಾಡದಂತೆ ಆರ್​​ಟಿಒ ಈಗಾಗಲೇ ಸೂಚನೆ, ಎಚ್ಚರಿಕೆ ನೀಡಿದೆ. ಆದರೆ, ಸಾರಿಗೆ ಇಲಾಖೆಯ ಎಚ್ಚರಿಕೆಯನ್ನು ಕ್ಯಾರೇ ಮಾಡದ ಖಾಸಗಿ ಬಸ್​ಗಳು ಸುಲಿಗೆ ಆರಂಭಿಸಿವೆ. ಟಿಕೆಟ್ ದರ ಗಗನಕ್ಕೇರಿಸಿವೆ.

ದೀಪಾವಳಿ: ಆರ್​ಟಿಒ ಎಚ್ಚರಿಕೆಗೂ ಬಗ್ಗದ ಖಾಸಗಿ ಬಸ್​ಗಳು, ಗಗನಕ್ಕೇರಿದ ಟಿಕೆಟ್ ದರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 28, 2024 | 12:39 PM

Share

ಬೆಂಗಳೂರು, ಅಕ್ಟೋಬರ್ 28: ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ರಜೆಗಳು ಸಮೀಪಿಸುತ್ತಿದ್ದಂತೆಯೇ ಖಾಸಗಿ ಬಸ್ ಟಿಕೆಟ್ ದರಗಳು ಗಗನಕ್ಕೇರಿದೆ. ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಖಾಸಗಿ ಬಸ್​ಗಳು 1,000 ರೂ.ನಿಂದ 1,500 ರೂ.ವರಗೆ ಟಿಕೆಟ್ ದರ ವಸೂಲಿ ಮಾಡುತ್ತಿವೆ. ಕೆಲವು ಬಸ್​​ಗಳಲ್ಲಂತೂ ಟಿಕೆಟ್ ದರ 2,000 ರೂ. ವರೆಗೆ ಇದೆ.

ನೈಋತ್ಯ ರೈಲ್ವೆ ವಿಶೇಷ ದೀಪಾವಳಿ ರೈಲುಗಳ ಸೇವೆ ಒದಗಿಸುತ್ತಿದೆ. ಆದರೆ, ವಿಶೇಷ ರೈಲುಗಳ ಎಲ್ಲ ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿವೆ. ಹೀಗಾಗಿ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಕೆಎಸ್​​ಆರ್​ಟಿಸಿ ಬಸ್​​ಗಳಲ್ಲಿಯೂ ಬಹುತೇಕ ಸೀಟ್​​ಗಳು ಮುಂಗಡ ಕಾಯ್ದಿರಿಸಲಾಗಿದೆ. ವಿಶೇಷ ಬಸ್​ಗಳಲ್ಲಿಯೂ ಮುಂಗಡ ಕಾಯ್ದಿರಿಸುವಿಕೆ ಜೋರಾಗಿದೆ. ಹೀಗಾಗಿ ಪ್ರಯಾಣಿಕರು ದುಬಾರಿ ದರ ತೆತ್ತು ಆನ್‌ಲೈನ್‌ನಲ್ಲಿ ಖಾಸಗಿ ಬಸ್‌ಗಳ ಟಿಕೆಟ್​ ಖರೀದಿಸುತ್ತಿದ್ದಾರೆ.

ಬೆಂಗಳೂರು ಹಾಗೂ ಉಡುಪಿ ಮಧ್ಯೆ ಸಾಮಾನ್ಯವಾಗಿ 400 ರೂ.ನಿಂದ 700 ರೂ. ಇರುತ್ತಿದ್ದ ಖಾಸಗಿ ಬಸ್ ಟಿಕೆಟ್ ದರ ಈಗ 1,000 ರೂ. ದಾಟಿದೆ.

ಹೆಚ್ಚುವರಿ ಖಾಸಗಿ ಬಸ್​ಗಳು: ಟಿಕೆಟ್ ದರ ದುಬಾರಿ

ಹಬ್ಬ ಹಾಗೂ ದೀರ್ಘ ವಾರಾಂತ್ಯದ ಕಾರಣ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಕೆಲವು ಖಾಸಗಿ ಬಸ್ ಸಂಸ್ಥೆಗಳೂ ಸಹ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲು ಮುಂದಾಗಿವೆ. ಆದರೆ, ಈ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ನಿಗದಿಪಡಿಸಲಾಗುತ್ತಿದೆ. ಲಗೇಜ್‌ಗೂ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಪ್ರಯಾಣಿಕರು ಅಲವತ್ತುಕೊಳ್ಳುತ್ತಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಸ್ಥಿರ

ಮತ್ತೊಂದೆಡೆ, ಮಂಗಳೂರು ಮತ್ತು ಬೆಂಗಳೂರು ನಡುವಿನ ಕೆಎಸ್‌ಆರ್‌ಟಿಸಿ ಬಸ್ ದರಗಳು ಸ್ಥಿರವಾಗಿವೆ. ಹೆಚ್ಚುವರಿ ವಿಶೇಷ ಬಸ್​​ ಸೇವೆಗಳಿಗೆ ಮಾತ್ರ ಶೇ 20 ರಷ್ಟು ದರ ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಡುಪಿ ಮತ್ತು ಕುಂದಾಪುರ ಮಾರ್ಗಗಳು ಸೇರಿದಂತೆ ಕರಾವಳಿ ಪ್ರದೇಶಗಳಿಗೆ ಈವರೆಗೆ 18 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ನಿಯೋಜಿಸಿದೆ.

ಇದನ್ನೂ ಓದಿ: ದೀಪಾವಳಿಗೆ ಖಾಸಗಿ ಬಸ್‌ ದುಬಾರಿ: ಮಾಲೀಕರಿಗೆ ಸಾರಿಗೆ ಇಲಾಖೆಗೆ ಖಡಕ್ ಎಚ್ಚರಿಕೆ!

ಆರ್​ಟಿಒ ಅಧಿಕಾರಿಗಳು ಹೇಳುವುದೇನು?

ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ಗಳಿಗೆ ಆರ್‌ಟಿಒ ಇಂತಿಷ್ಟೇ ಎಂದು ದರ ನಿಗದಿಪಡಿಸಿಲ್ಲ. ಆದಾಗ್ಯೂ, ಖಾಸಗಿ ಬಸ್​​ಗಳವರು ಬೇಕಾಬಿಟ್ಟಿ ದರ ಹೆಚ್ಚಿಸಲು ಸಾಧ್ಯವಿಲ್ಲ. ಆ ಬಗ್ಗೆ ದೂರುಗಳು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್​ಟಿಒ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ