‘ಗೃಹಲಕ್ಷ್ಮೀ‘ಯರಿಗೆ ದೀಪಾವಳಿ ಗಿಫ್ಟ್​ ನೀಡಿದ ರಾಜ್ಯ ಸರ್ಕಾರ: 3 ಕಂತುಗಳ ಹಣ ಬಿಡುಗಡೆ

ಸಾಲು ಸಾಲು ದರ ಏರಿಕೆ ಮಧ್ಯೆ ಸರ್ಕಾರ ರಾಜ್ಯದ ಗೃಹಲಕ್ಷ್ಮೀಯರಿಗೆ ಭರ್ಜರಿ ಗುಡ್​ ನ್ಯೂಸ್​ ನೀಡಿದೆ. ಗೃಹಲಕ್ಷ್ಮೀ ಯೋಜನೆಯ 3 ಕಂತುಗಳ ಹಣ ಬಿಡುಗಡೆ ಸಿಎಂ ಡಿಕೆ ಶಿವಕುಮಾರ್​ ಆದೇಶಿಸಿದ್ದು, ಆ ಮೂಲಕ ದೀಪಾವಳಿ ಹಬ್ಬದ ಗಿಫ್ಟ್​​ ನೀಡಿದ್ದಾರೆ. ಒಟ್ಟು 7405.86 ಕೋಟಿ ರೂ. ಹಣ ಬಿಡುಗಡೆ ಆದೇಶಿಸಲಾಗಿದೆ.

‘ಗೃಹಲಕ್ಷ್ಮೀ‘ಯರಿಗೆ ದೀಪಾವಳಿ ಗಿಫ್ಟ್​ ನೀಡಿದ ರಾಜ್ಯ ಸರ್ಕಾರ: 3 ಕಂತುಗಳ ಹಣ ಬಿಡುಗಡೆ
ಗೃಹಲಕ್ಷ್ಮೀ ಯೋಜನೆ
Edited By:

Updated on: Nov 04, 2026 | 9:10 PM

ಮುಖ್ಯಾಂಶಗಳು

  • ಗೃಹಲಕ್ಷ್ಮೀ ಯೋಜನೆಯ 3 ಕಂತುಗಳ ಹಣ ಬಿಡುಗಡೆ
  • 3 ಕಂತುಗಳ 7405.86 ಕೋಟಿ ರೂ. ಹಣ ಬಿಡುಗಡೆ
  • ಅಕ್ಟೋಬರ್​​ವರೆಗೆ 86,838.36 ಕೋಟಿ ರೂ. ಪಾವತಿ

ಬೆಂಗಳೂರು, ನವೆಂಬರ್​​ 04: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್​​ ನ್ಯೂಸ್​​ ನೀಡಿದೆ. ಯೋಜನೆಯ 34, 35 ಮತ್ತು 36ನೇ ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ. ಮೂರು ಕಂತುಗಳ ಒಟ್ಟು 7,405.86 ಕೋಟಿ ರೂ ಹಣ ಬಿಡುಗಡೆಗೆ ಆದೇಶಿಸಲಾಗಿದ್ದು, ಆ ಮೂಲಕ ರಾಜ್ಯದ ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬದ ಗಿಫ್ಟ್​ ಸಿಕ್ಕಿದೆ.

34, 35 ಮತ್ತು 36ನೇ ಕಂತುಗಳ ಹಣ ಬಿಡುಗಡೆ

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ 33 ಕಂತುಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಇದೀಗ 34ನೇ ಕಂತಿನ 2,500 ಕೋಟಿ ರೂ, 35ನೇ ಕಂತಿನ 2,452.93 ಕೋಟಿ ರೂ ಹಾಗೂ 36ನೇ ಕಂತಿನ 2,452.93 ಕೋಟಿ ರೂ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಆದೇಶಿಸಲಾಗಿದೆ.

Loading...

1.24 ಕೋಟಿ ಮಹಿಳೆಯರಿಗೆ 86,838.36 ಕೋಟಿ ರೂ ಪಾವತಿ

ಅಕ್ಟೋಬರ್ ತಿಂಗಳವರೆಗೆ ರಾಜ್ಯದ 1.24 ಕೋಟಿ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯಡಿ ಒಟ್ಟು 86,838.36 ಕೋಟಿ ರೂ ಹಣ ಪಾವತಿಸಿದಂತಾಗಲಿದೆ. ಆ ಮೂಲಕ ಪ್ರತಿ ಫಲಾನುಭವಿಗೆ ಒಟ್ಟು 72,000 ರೂ ಹಣ ತಲುಪಿದಂತಾಗಲಿದೆ.

ಏನಿದು ಗೃಹಲಕ್ಷ್ಮೀ ಯೋಜನೆ?  

ರಾಜ್ಯ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಈ ಯೋಜನೆಯನ್ನು ಅಧಿಕಾರಕ್ಕೆ ಬಂದ ಬಳಿಕ ಜಾರಿಗೊಳಿಸಲಾಯಿತು. ಯೋಜನೆ ಆರಂಭವಾದಾಗಿನಿಂದ ಈವರೆಗೆ ಒಟ್ಟು 36 ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಹೊಸ ಅರ್ಜಿ: ಪ್ರತಿ ತಿಂಗಳು 2000 ರೂ. ಬೇಕಿದ್ರೆ ಈ ದಾಖಲೆಗಳನ್ನು ನೀಡಲೇಬೇಕು

ಇದರಡಿ ಪ್ರತಿ ತಿಂಗಳು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ತಲಾ 2,000 ರೂ. ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಒಬ್ಬ ಫಲಾನುಭವಿಗೆ ವರ್ಷಕ್ಕೆ ಒಟ್ಟು 24,000 ರೂ ಆರ್ಥಿಕ ನೆರವು ದೊರೆಯುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:08 pm, Wed, 4 November 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us