ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ಡಿಕೆ ಸಹೋದರರು: ಸಿಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. 

Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 14, 2024 | 3:21 PM

ರಾಮನಗರ, ಜೂನ್​ 14: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್​​ ಆಗಿರುವ ನಟ ದರ್ಶನ್ (Darshan)​ ಕಾಂಗ್ರೆಸ್​ನಿಂದ​ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿದ್ರಾ? ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್​, ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಈ ಹಿಂದೆ ಡಿ.ಕೆ.ಸುರೇಶ್ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ. ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್​​​ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿಕೆ ಬ್ರದರ್ಸ್ ಪ್ಲಾನ್​​ ಮಾಡಿದ್ದ. ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ

ದರ್ಶನ್ ಮೇಲೆ ಕೊಲೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸುತ್ತಿದೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ ಆದರೆ ಈ ರೀತಿ ಅನಾಹುತ ಆಗಿ ಹೋಗಿದೆ. ನೋಡೊಣ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರವಾಗಿ ಮಾತನಾಡಿದ್ದು, ರಾಮನಗರ ನಾಲ್ಕು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಬಿಜೆಪಿಗೆ ಅಸ್ತಿತ್ವ ಇದೆ. ಇಲ್ಲಿ ಬಿಜೆಪಿಗೆ ಹೆಚ್ಚು ಬಲ ಇದೆ. ಕನಕಪುರ, ರಾಮನಗರ, ಮಾಗಡಿಯಲ್ಲಿ ಜೆಡಿಎಸ್​ಗೆ ಶಕ್ತಿ ಇದೆ. ಆದರೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೊಣ. ವಸ್ತುಸ್ಥಿತಿ ಏನಿದೆ ಅನ್ನೋದನ್ನ ನಾನು ಹೇಳಿದ್ದೇನೆ. ಎರಡೂ ಪಕ್ಷಗಳು ಸೇರಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್​: ತಾನಾಗಿಯೇ ಬಂದು ಶರಣಾದ ಎ8 ಆರೋಪಿ, ಆತನ ಪಾತ್ರವೇನು?

ಎನ್​ಡಿಎ ಅಭ್ಯರ್ಥಿ ಯಾರೇ ಆದ್ರೂ ನಾವು ಕೆಲಸ ಮಾಡ್ತೇವೆ. ಲೋಕಸಭಾ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡಿ ಸಕ್ಸಸ್ ಸಿಕ್ಕಿದೆ. ಹಾಗಾಗಿ ಯಾವುದೇ ಗೊಂದಲ ಇಲ್ಲದೇ ಈ ಚುನಾವಣೆಯಲ್ಲೂ ಒಟ್ಟಾಗಿ ಕೆಲಸ ಮಾಡ್ತೇವೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್​ ಸದ್ಯ ಕಂಬಿ ಎಣಿಸುತ್ತಿದ್ದಾರೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಬಂಧಿತ ಆರೋಪಿಗಳಿಗೆ ಡ್ರಿಲ್​ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:52 pm, Fri, 14 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ