AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ

ಬೈ ಎಲೆಕ್ಷನ್ ಕರ್ತವ್ಯಕ್ಕೆ ಹೋಗಿದ್ದ ಶಿಕ್ಷಕರ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ ಇದಕ್ಕೆ ನಮ್ಮ ಸ್ವಯಂಕೃತ ಅಪರಾಧವೇ ಕಾರಣ. ಆಡಳಿತ ನಡೆಸುವವರೇ ಇದಕ್ಕೆ ಹೊಣೆ. ಉಪಚುನಾವಣೆ ವೇಳೆ ಎಲ್ಲರೂ ಜಾಗೃತಿ ವಹಿಸಬೇಕಾಗಿತ್ತು. ಯಾವ ಪಕ್ಷದವರೂ ಸರಿಯಾದ ಅಂತರವನ್ನು ಕಾಪಾಡಲಿಲ್ಲ.

ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ. ಶಿವಕುಮಾರ್
sandhya thejappa
|

Updated on: May 15, 2021 | 3:31 PM

Share

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ ಎಂದು ಆರೋಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊವಿಡ್ ಟೆಸ್ಟ್ ಕಡಿಮೆ ಮಾಡಲು ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಕೂಡ ಇದನ್ನೇ ಹೇಳಿದ್ದಾರೆ. ಜನಗಳಿಗೆ ನಾವು ಅಷ್ಟೋ ಇಷ್ಟೋ ಮಾಡುತ್ತಾ ಇದ್ದೆವು. ಈಗ ನಿಮ್ಮಿಂದ ಆಗೊಲ್ಲ ಎಂದರೆ ಬಿಟ್ಟು ಹೋಗಲಿ. ಲಾಕ್​ಡೌನ್​ ವಿಚಾರದಲ್ಲಿ ನಾವು ಮೂಗು ತುರಿಸುವುದಿಲ್ಲ. ಲಾಕ್​ಡೌನ್​ ನಿರ್ಧಾರವನ್ನು ರಾಜ್ಯ ಸರ್ಕಾರಕ್ಕೆ ಬಿಡುತ್ತೇನೆ. ಹಾಗಂತ ಮಾಡಿದ ತಪ್ಪು ತಿದ್ದಿಕೊಳ್ಳದಿದ್ದರೆ ಸುಮ್ಮನೆ ಇರಲ್ಲ ಎಂದು ಹೇಳಿದ್ದಾರೆ.

ಬೈ ಎಲೆಕ್ಷನ್ ಕರ್ತವ್ಯಕ್ಕೆ ಹೋಗಿದ್ದ ಶಿಕ್ಷಕರ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ ಇದಕ್ಕೆ ನಮ್ಮ ಸ್ವಯಂಕೃತ ಅಪರಾಧವೇ ಕಾರಣ. ಆಡಳಿತ ನಡೆಸುವವರೇ ಇದಕ್ಕೆ ಹೊಣೆ. ಉಪಚುನಾವಣೆ ವೇಳೆ ಎಲ್ಲರೂ ಜಾಗೃತಿ ವಹಿಸಬೇಕಾಗಿತ್ತು. ಯಾವ ಪಕ್ಷದವರೂ ಸರಿಯಾದ ಅಂತರವನ್ನು ಕಾಪಾಡಲಿಲ್ಲ. ನಾನು ಪ್ರಯತ್ನಿಸಿದೆ ಆದರೆ ಜನರ ಜಂಜಾಟ ಹೆಚ್ಚಾಗಿತ್ತು. ಸರ್ಕಾರ ಚುನಾವಣೆ ಮಾಡುವುದು ಬೇಡವೆಂದು ಹೇಳಿದ್ದರೆ, ಚುನಾವಣಾ ಆಯೋಗ ಏನೂ ಮಾಡುವುದಕ್ಕೆ ಆಗುತ್ತಿರಲಿಲ್ಲ. ನಾವು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ಇಂದು ಡಿ.ಕೆ.ಶಿವಕುಮಾರ್ ಅವರ 60 ನೇ ಹುಟ್ಟುಹಬ್ಬ ಹಿನ್ನೆಲೆ ಶಿವಮೊಗ್ಗ ನಗರದ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ನಡೆಯಿತು. ಡಿಕೆಶಿ ಬ್ರಿಗೇಡ್​ನ ಸದಸ್ಯರು ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಚಿಕ್ಕಬಳ್ಳಾಪುರದ ಕೈವಾರ ತಾತಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದಂಪತಿ ಸಮೇತ ದೇವಸ್ಥಾನಕ್ಕೆ ಆಗಮಿಸಿದ ಶಿವಕುಮಾರ್ಗೆ ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ.ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ನ್.ಕೇಶವರೆಡ್ಡಿ ಸಾಥ್ ನೀಡಿದರು.

ಇದನ್ನೂ ಓದಿ

ಕೊರೊನಾ ರೋಗಿಗಳು ಉಸಿರಾಟದ ವ್ಯಾಯಾಮವನ್ನು ಮಾಡುವುದು ಹೇಗೆ?..ಇಲ್ಲಿದೆ ನೋಡಿ ಕೇಂದ್ರ ಸರ್ಕಾರ ಸೂಚಿಸಿದ ಕ್ರಮಗಳು

ಮೇ 26 ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 7 ವರ್ಷ; ಅಂದು ರೈತರಿಂದ ಕರಾಳ ದಿನ ಆಚರಣೆಗೆ ದೆಹಲಿ ರೈತ ನಾಯಕರ ನಿರ್ಧಾರ

(DK Shivakumar accused the karnataka government of reducing the covid test in state)

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ