ಡಿ.ಕೆ.ಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ, ವಿಚಾರಣೆಯನ್ನು ಮೇ31ಕ್ಕೆ ಮುಂದೂಡಿದ ನ್ಯಾಯಾಧೀಶರು

| Updated By: ವಿವೇಕ ಬಿರಾದಾರ

Updated on: May 28, 2022 | 2:05 PM

ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಪ್ರಕರಣದ ವಾದವನ್ನು ಆಲಿಸಿದ ಇಡಿ ವಿಶೇಷ ನ್ಯಾಯಾಲಾಯ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.

ಡಿ.ಕೆ.ಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ, ವಿಚಾರಣೆಯನ್ನು ಮೇ31ಕ್ಕೆ ಮುಂದೂಡಿದ ನ್ಯಾಯಾಧೀಶರು
ಡಿಕೆ ಶಿವಕುಮಾರ್
Follow us on

ಬೆಂಗಳೂರು: ಡಿ.ಕೆ.ಶಿವಕುಮಾರ್ (DK Shivakumar) ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ(Delhi) ರೋಸ್‌ ಅವೆನ್ಯೂ ಕೋರ್ಟ್‌ನಲ್ಲಿ ವಿಚಾರಣೆ ಆರಂಭಗೊಂಡಿದೆ. ನ್ಯಾಯಮೂರ್ತಿ ವಿಕಾಸ್‌ ದುಲ್‌ರವರ ಪೀಠದಲ್ಲಿ ವಿಚಾರಣೆ ಪ್ರಾರಂಭವಾಗಿತ್ತು. ವಾದವನ್ನು ಆಲಿಸಿದ ಇಡಿ ವಿಶೇಷ ನ್ಯಾಯಾಲಾಯ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.

ಇದನ್ನು ಓದಿ: ಇಳಿಯುತ್ತಾ ಬಂತು 2000 ರೂಪಾಯಿ ಮುಖಬೆಲೆಯ ಚಲಾವಣೆ ಪ್ರಮಾಣ; ಆರ್​ಬಿಐ ಏನು ಹೇಳುತ್ತದೆ?

2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಐಟಿ ಅಧಿಕಾರಿಗಳು  ಡಿ.ಕೆ.ಶಿ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಎರಡೂವರೆ ವರ್ಷದ  ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.  2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದರು.

ಇದನ್ನು ಓದಿ: ಫಿರೋಜ್, ಸೋನಿಯಾ, ರಾಹುಲ್ ಗಾಂಧಿ ಹೆಸರಿನ ಮೂಲ ನಿಮಗೆ ಗೊತ್ತಿಲ್ಲವೇ?; ಸಿದ್ದರಾಮಯ್ಯನವರಿಗೆ ಬಿಜೆಪಿ ತಿರುಗೇಟು

ದೆಹಲಿಯ ಇಡಿ ವಿಶೇಷ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು,  ಜಾರಿ ನಿರ್ದೇಶನಾಲಯ ಪರ ವಕೀಲರಿಂದ ವಾದ ಮಂಡನೆಯಾಗಿದೆ.  IPC ಸೆಕ್ಷನ್ 120B ಸೇರ್ಪಡೆ ಮಾಡಿರುವ ಬಗ್ಗೆ ವಾದ ಮಂಡಿಸಲಾಗಿದೆ.  PML ಕಾಯ್ದೆ ಜೊತೆಗೆ 120B ಸೇರ್ಪಡೆ ಮಾಡಿರುವ ಬಗ್ಗೆ ವಾದ ನಡೆದಿತ್ತು. ಸಚಿನ್ ನಾರಾಯಣ ಕೇಸ್‌ಗೆ ಸಂಬಂಧಿಸಿದಂತೆ ತೀರ್ಪನ್ನು ಉಲ್ಲೇಖಿಸಲಾಗಿತ್ತು. ಇಡಿ ವಕೀಲರಿಂದ ಕರ್ನಾಟಕ ಹೈಕೋರ್ಟ್ ತೀರ್ಪಿನ ಉಲ್ಲೇಖವಾಗಿದೆ.  ಒಟ್ಟು ಮೂರು ಹೈಕೋರ್ಟ್‌ಗಳ ಆದೇಶವನ್ನು ವಕೀಲರು ಉಲ್ಲೇಖಿಸಿದರು.  120B ಸೇರ್ಪಡೆ ಮಾಡಿರುವ ಕಾರಣಗಳ ಕುರಿತು ವಾದ ಮಂಡನೆ ಮಾಡಿದರು. ಇಡಿ ವ್ಯಾಪ್ತಿಯ ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಲಾಗಿದೆ. ಸಫ್ದರ್‌ಜಂಗ್‌ ಎನ್‌ಕ್ಲೇವ್‌ ಫ್ಲ್ಯಾಟ್‌ನಲ್ಲಿ ಹಣ ವಶ ಬಗ್ಗೆ ವಕೀಲರು ಮಾಹಿತಿ ನಿಡಿದರು. ದೆಹಲಿಯ ಫ್ಲ್ಯಾಟ್‌ನಲ್ಲಿ ಐಟಿ ದಾಳಿ ವೇಳೆ 8.5 ಕೋಟಿ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿಕೆಶಿ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಪರ ವಕೀಲರು ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Sat, 28 May 22