AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಪೀಡಕರಂತೆ ವರ್ತಿಸುವ ಡಿಕೆ ಶಿವಕುಮಾರ್: ನೀರಿನ ದರ ಏರಿಕೆಗೆ ಬಿಜೆಪಿ ಆಕ್ರೋಶ

ನೀರಿನ ದರ ಹೆಚ್ಚಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಪ್ರತಿಪಕ್ಷ ಬಿಜೆಪಿಯನ್ನು ಕೆರಳಿಸಿದೆ. ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಜನ ಪೀಡಕರಂತೆ ವರ್ತಿಸುವ ಡಿಕೆ ಶಿವಕುಮಾರ್: ನೀರಿನ ದರ ಏರಿಕೆಗೆ ಬಿಜೆಪಿ ಆಕ್ರೋಶ
ಸಾಂದರ್ಭಿಕ ಚಿತ್ರ
ಕಿರಣ್​ ಹನಿಯಡ್ಕ
| Edited By: |

Updated on: Aug 22, 2024 | 2:06 PM

Share

ಬೆಂಗಳೂರು, ಆಗಸ್ಟ್​​ 22: ನೀರಿನ ದರ ಏರಿಕೆ ಮಾಡುವ ಸಂಬಂಧ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಟೀಕಾ ಪ್ರಹಾರ ನಡೆಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದಿದೆ.

‘ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂಥವರನ್ನು ನೋಡಿಯೇ ‘ಮೂರು ಬಿಟ್ಟವರು ಊರಿಗೆ ದೊಡ್ಡವರು’ ಎನ್ನುವು ನಾಣ್ನುಡಿ ಬರೆದಂತೆ ತೋರುತ್ತಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ’ ಎಂದು ಬಿಜೆಪಿ ಉಲ್ಲೇಖಿಸಿದೆ.

‘ದರ ಏರಿಕೆ, ಗುಂಡಿ ಭಾಗ್ಯ, ಅವ್ಯವಸ್ಥೆಯೇ ಕೊಡುಗೆ’

ಕಾಂಗ್ರೆಸ್​​ ಬರೀ ದರ ಏರಿಕೆಯನ್ನಷ್ಟೇ ಬೆಂಗಳೂರು ಜನಕ್ಕೆ ನೀಡಿದೆ ಎಂದು ಶಾಸಕ ಅಶ್ವತ್ಥ್ ನಾರಾಯಣ ಟೀಕಿಸಿದರು. ಬೆಂಗಳೂರಿನಲ್ಲಿ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿಗೆ ಈ ಸರ್ಕಾರ ಕೊಟ್ಟಿದ್ದು ಏನು? ಬೆಂಗಳೂರಿನವರಿಗೆ ಕೊಟ್ಟಿದ್ದು ದರ ಏರಿಕೆ, ಗುಂಡಿ ಭಾಗ್ಯ, ಅವ್ಯವಸ್ಥೆ. ರಸ್ತೆಯಲ್ಲಿ ಯಾರೂ ಓಡಾಡದಂತಹ ಪರಿಸ್ಥಿತಿ ನಿರ್ಮಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನೀರಿನ ದರ ಏರಿಕೆ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಡ, ಮಧ್ಯಮ ವರ್ಗದ ಜನ ಹೆಚ್ಚು ಇದ್ದಾರೆ. ಜನ ಬದುಕಬೇಕಾ, ಸಾಯಬೇಕಾ, ಸರ್ಕಾರಕ್ಕೆ ಕರುಣೆ ಇಲ್ವಾ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಎಲ್ಲದರ ಬೆಲೆ ಏರಿಕೆ ಮಾಡುತ್ತಿದ್ದರೆ ಜನರು ಏನು ಮಾಡಬೇಕು? ಯಾವುದೇ ಕಾರಣಕ್ಕೂ ನೀರಿನ ದರ ಹೆಚ್ಚಳ ಮಾಡಬಾರದು. ನೀರಿನ ದರ ಏರಿಕೆ ಮಾಡಿದರೆ ಬಿಜೆಪಿ ವಿರೋಧಿಸಲಿದೆ. ನೀರಿನ ದರ ಹೆಚ್ಚಿಸಿದರೆ ಬೆಂಗಳೂರಿನ ಜನ ಶಾಪ ಹಾಕುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಕೆ ಶಿವಕುಮಾರ್, ಯಾರು ಏನೇ ಅಂದರೂ ತಲೆಕೆಡಿಸಿಕೊಳ್ಳಲ್ಲ, ನೀರಿನ ದರ ಹೆಚ್ಚಿಸಿಯೇ ಸಿದ್ಧ ಎಂದಿದ್ದಾರೆ. ಇದರ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಅವರ ವಿರುದ್ಧ ಮುಗಿಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ