AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಸಹೋದರರು! ಧಿಢೀರ್ ವರಸೆ ಬದಲಿಸಲು ಇದೆ ಬಲವಾದ ಕಾರಣ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಾಲು ಸಂಕಷ್ಟ ಎದುರಾಗುತ್ತಿದ್ದ ಬೆನ್ನಲ್ಲೇ ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಮುಖ್ಯಮಂತ್ರಿಗಳ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಹಿಂದೆಲ್ಲ, 5 ವರ್ಷ ಸಿದ್ದರಾಮಯ್ಯ ಮಂತ್ರಿಯಾಗಿರಲಿದ್ದಾರೆ ಎಂದರೆ ತಕ್ಷಣವೇ ಆ ಬಗ್ಗೆ ತಿರುಗೇಟು ನೀಡುತ್ತಿದ್ದ ಉಭಯ ನಾಯಕರ ವರಸೆ ದಿಢೀರ್ ಬದಲಾಗಲು ಮಹತ್ವದ ರಾಜಕೀಯ ಲೆಕ್ಕಾಚಾರವೊಂದು ಕಾರಣ ಎನ್ನಲಾಗಿದೆ. ಆ ಕುರಿತ ವಿವರ ಇಲ್ಲಿದೆ.

ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಸಹೋದರರು! ಧಿಢೀರ್ ವರಸೆ ಬದಲಿಸಲು ಇದೆ ಬಲವಾದ ಕಾರಣ
ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಸಹೋದರರು!
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Oct 09, 2024 | 9:33 AM

Share

ಬೆಂಗಳೂರು, ಅಕ್ಟೋಬರ್ 9: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಹೇಳಿಕೆಗಳು ಕೇಳಿ ಬಂದರೆ ಹಿಂದೆಲ್ಲ ಅದಕ್ಕೆ ತಿರುಗೇಟು ನೀಡುತ್ತಿದ್ದ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಈಗ ವರಸೆ ಬದಲಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಡಿಕೆ ಸುರೇಶ್ ಮಾತ್ರವಲ್ಲದೆ ಡಿಕೆ ಶಿವಕುಮಾರ್ ಸಹ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಮುಡಾ ಹಗರಣ ಕರ್ನಾಟಕ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಡಿಕೆ ಸಹೋದರ ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಡಿಕೆ ಸಹೋದರರ ಮಾತಿನ ಧಾಟಿಯೇ ಬದಲು!

ಸಿದ್ದರಾಮಯ್ಯಗೆ ಮುಡಾ ಹಗರಣದ ಸಂಕಷ್ಟ ಹೆಚ್ಚಾಗಿರುವ ಬೆನ್ನಲ್ಲೇ ಸಾಲು ಸಾಲು ರಹಸ್ಯ ಸಭೆಗಳು ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿವೆ. ಒಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಿವಾಸ ಎರಡು ದಿನಗಳ ಹಿಂದಷ್ಟೇ ಕೇಂದ್ರಬಿಂದುವಾಗಿ ಗಮನ ಸೆಳೆದಿದ್ದರೆ ಮತ್ತೊಂದೆಡೆ ಮೈಸೂರಿನಲ್ಲಿ ಮಂಗಳವಾರ ರಾತ್ರಿ ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಸಹೋದರರ ಮಾತಿನ ಧಾಟಿಯೇ ಬದಲಾಗಿದೆ. ಹಿಂದೆ, ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಎಂದರೆ ಉರಿದು ಬೀಳುತ್ತಿದ್ದ ಉಭಯ ನಾಯಕರು ಇದೀಗ, ಸಿದ್ದು ಪರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದೂ ಹೇಳುತ್ತಿದ್ದಾರೆ.

ರಾಜಕೀಯ ತಂತ್ರಗಾರಿಕೆಯೇ ಕಾರಣ

ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಈ ರೀತಿ ಮಾತಿನ ಧಾಟಿಯಲ್ಲಿ ಬದಲಾವಣೆ ಮಾಡಿಕೊಳ್ಳಲು ರಾಜಕೀಯ ತಂತ್ರಗಾರಿಕೆಯೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯ ಮುಂದಿನ ಡಿಸೆಂಬರ್‌ ತನಕವೂ ಗಟ್ಟಿಯಾಗಿದ್ದರೆ ಮಾತ್ರ ಡಿಕೆ ಶಿವಕುಮಾರ್​​ಗೆ ಅನುಕೂಲ. ಸಿದ್ದರಾಮಯ್ಯ ಮುಂದುವರಿದರೆ ಮಾತ್ರ ಅಧಿಕಾರ ಹಂಚಿಕೆಯ ಧ್ವನಿ ಎತ್ತಬಹುದು. ಸಿದ್ದರಾಮಯ್ಯ ಅರ್ಧದಲ್ಲೇ ಹಿಂದೆ ಸರಿದರೆ ಸಿಎಂ ಖುರ್ಚಿಗೆ ಬೇರೆಯವರು ಬರಬಹುದು. ಬೇರೆ ಸಮುದಾಯದ ನಾಯಕರು ಖುರ್ಚಿಗೆ ಬಂದರೆ ತಕ್ಷಣಕ್ಕೆ ಇಳಿಸುವುದು ಕಷ್ಟವಾಗಲಿದೆ.

ಹೊಸ ಸಿಎಂ ಆದರೆ ಅಧಿಕಾರ ಹಂಚಿಕೆ ಕಷ್ಟ

ಹೊಸ ಸಿಎಂ ಬಂದರೆ ಅಧಿಕಾರ ಹಂಚಿಕೆ ಸೂತ್ರ ಪಾಲನೆ ಮಾಡುವುದು ಕಷ್ಟಸಾಧ್ಯ. ಅದರಲ್ಲೂ ದಲಿತರು ಸಿಎಂ ಆಗಿ ಬಿಟ್ಟರೆ ಒಕ್ಕಲಿಗ ನಾಯಕ ಡಿಕೆ ಶಿವಕುಮಾರ್​ಗೆ ಸಿಎಂ ಖುರ್ಚಿ ಕನಸಾಗಿಯೇ ಉಳಿಬಹುದು ಎಂಬ ಆತಂಕ ಡಿಕೆ ಸಹೋದರರಲ್ಲಿದೆ. ಇದೇ ಕಾರಣಕ್ಕೆ ಉಭಯ ನಾಯಕರು ತಮ್ಮ ಮಾತಿನ ವರಸೆ ಬದಲಿಸಿದ್ದಾರೆ ಎಂದು ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ಮಹದೇವಪ್ಪ ಜೊತೆಗಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ

ಬೇರೊಬ್ಬರು ಮುಖ್ಯಮಂತ್ರಿಯಾಗಿ ಹೊಸ ತಲೆನೋವು ಎದುರಿಸುವುದಕ್ಕಿಂತ ಹಳೆಯ ಅಧಿಕಾರ ಹಂಚಿಕೆ ಸೂತ್ರವೇ ಉತ್ತಮ ಎಂಬ ನಿರ್ಧಾರಕ್ಕೆ ಡಿಕೆ ಸಹೋದರರು ಬಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಉಭಯ ನಾಯಕರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಮತ್ತೆ ಮತ್ತೆ ಹೇಳುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ