ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರು ಪೊಲೀಸರ ವಶಕ್ಕೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 8 ಬಸ್ಗಳಲ್ಲಿ ನಾಯಕರನ್ನು ಕರೆದೊಯ್ಯಲಾಗಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ಹಮ್ಮಿಕೊಂಡಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಸಾಕಷ್ಟು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 8 ಬಸ್ಗಳಲ್ಲಿ ನಾಯಕರನ್ನು ಕರೆದೊಯ್ಯಲಾಗಿದೆ.
ಧರಣಿ ನಿರತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆಕ್ರೋಶ ಹೊರ ಹಾಕಿದರು. ಸಿದ್ದರಾಮಯ್ಯ ಕೂಡ ಈ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯ ಸರ್ಕಾರ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ
Published On - 3:37 pm, Wed, 20 January 21