ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಗಳೂರು ಪೊಲೀಸರ ವಶಕ್ಕೆ

|

Updated on: Jan 20, 2021 | 4:39 PM

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 8 ಬಸ್​ಗಳಲ್ಲಿ ನಾಯಕರನ್ನು ಕರೆದೊಯ್ಯಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಗಳೂರು ಪೊಲೀಸರ ವಶಕ್ಕೆ
ಬಂಧನ ನಡೆದ ದೃಶ್ಯ
Follow us on

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್​ ಇಂದು ರಾಜಭವನ ಚಲೋ ಹಮ್ಮಿಕೊಂಡಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್​, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಸಾಕಷ್ಟು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 8 ಬಸ್​ಗಳಲ್ಲಿ ನಾಯಕರನ್ನು ಕರೆದೊಯ್ಯಲಾಗಿದೆ.

ಧರಣಿ ನಿರತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆಕ್ರೋಶ ಹೊರ ಹಾಕಿದರು. ಸಿದ್ದರಾಮಯ್ಯ ಕೂಡ ಈ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯ ಸರ್ಕಾರ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

 

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ

Published On - 3:37 pm, Wed, 20 January 21