DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಡಿಕೆ ಶಿವಕುಮಾರ್ ಹಾಜರು
Mekedatu Padayatra: ಕೊವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆಶಿ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಡಿಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ಸಮನ್ಸ್ ಜಾರಿ ಮಾಡಿತ್ತು.
ಬೆಂಗಳೂರು: ಮೇಕೆದಾಟು ಯೋಜನೆ (Mekedatu Project) ಜಾರಿಗೆ ಒತ್ತಾಯಿಸಿ ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಡಿ.ಕೆ. ಶಿವಕುಮಾರ್ ಹಾಜರಾಗಿದ್ದಾರೆ. ಕೊವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆಶಿ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಡಿಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ಸಮನ್ಸ್ ಜಾರಿ ಮಾಡಿತ್ತು.
ಹೀಗಾಗಿ, ಇಂದು ಕೋರ್ಟ್ಗೆ ಹಾಜರಾಗಿ ಡಿಕೆ ಶಿವಕುಮಾರ್ ಜಾಮೀನು ಪಡೆಯಲಿದ್ದಾರೆ. ರಾಮನಗರದಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದರು. ರಾಮನಗರದಲ್ಲಿ ಪ್ರಕರಣದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆಯ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಈ ವೇಳೆ ಶಿವಕುಮಾರ್ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿತ್ತು.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಕೊವಿಡ್ ಹೆಚ್ಚಳವಾಗಿದ್ದ ವೇಳೆ ಪಾದಯಾತ್ರೆ ಕೈಗೊಂಡಿದ್ದರಿಂದ ಕೊವಿಡ್ ನಿಯಮ ಉಲ್ಲಂಘನೆಯ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಡಿಕೆ ಶಿವಕುಮಾರ್ಗೆ ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ಏನಿದು ಪ್ರಕರಣ?:
ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಒಟ್ಟು 29 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್ ಸೇರಿ ಒಟ್ಟು 29 ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದರು. ಬಳಿಕ ನ್ಯಾಯಾಲಯದ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದರು.
ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ಉಲ್ಲಂಘನೆ ಮಾಡಿ ಸಾವಿರಾರು ಜನರನ್ನು ಒಂದಡೆ ಸೇರಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸರು ಎಫ್ಐಆರ್ ದಾಖಲಿಸಲಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:16 pm, Wed, 15 June 22