ನವದೆಹಲಿ, (ನವೆಂಬರ್ 07): ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI)ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ (Supreme Court )ಮುಂದೂಡಿದೆ. ಸಿಬಿಐ ತನಿಖೆಗೆ ಸರಕಾರ ಶಿಫಾರಸು ಮಾಡಿದ್ದನ್ನು ಡಿಕೆ ಶಿವಕುಮಾರ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಕರ್ನಾಟಕದ ಹೈಕೋರ್ಟ್ ವಿಭಾಗೀಯ ಪೀಠ ಸಿಬಿಐ ತನಿಖೆಗ ತಡೆ ನೀಡಿತ್ತು. ಹೈಕೋರ್ಟ್ ತಡೆಯಾಜ್ಞೆ ಆದೇಶ ಪ್ರಶ್ನಿಸಿ ಸಿಬಿಐ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್, ನವೆಂಬರ್ 10ಕ್ಕೆ ಮುಂದೂಡಿದೆ.
ಅಕ್ಟೋಬರ್ 16ರಂದು ಸಿಬಿಐನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಇಂದಿಗೆ ಅಂದರೆ ನವೆಂಬರ್ 7 ಕ್ಕೆ ಮುಂದೂಡಿತ್ತು. ಇದೀಗ ಮತ್ತೆ ನವೆಂಬರ್ 10ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಪಟ್ಟು ಬಿಡದ ಸಿಬಿಐ: ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂಕೋರ್ಟ್ ನೋಟಿಸ್
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ನಡೆಸುವಂತೆ ಈ ಹಿಂದೆ ಬಿಎಸ್ ಯಡಿಯೂರಪ್ಪನವರ ಸರ್ಕಾರ ಸಿಬಿಐಗೆ ಶಿಫಾರಸ್ಸು ಮಾಡಿತ್ತು. ಆದ್ರೆ, ಇತ್ತ ಡಿಕೆ ಶಿವಕುಮಾರ್ , ಸಿಬಿಐ ತನಿಖೆ ರದ್ದು ಕೋರಿ ಕರ್ನಾಟಕ ಹೈಕೋರ್ಟ್ (Karnataka High Court)ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್ ಅಕ್ಟೋಬರ್ 19 ಡಿಕೆ ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿತ್ತು.
ಇನ್ನು ಇದೇ ಪ್ರಕರಣದಲ್ಲಿ ಹೈಕೋರ್ಟ್, ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದೀಗ ಇದೇ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು.
Published On - 1:32 pm, Tue, 7 November 23