ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯನ್ನು ಮಾಡಿದ್ದಾರೆ. ಬ್ರಿಟಿಷರ ಕಾಲದಲ್ಲಿ ಅಷ್ಟೋ, ಇಷ್ಟೋ ಸ್ವಾತಂತ್ರ್ಯ ಇತ್ತು, ಈಗ ಅದನ್ನೂ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಆದ್ರೆ ಇದು ಸಾಧ್ಯವಾಗಲು ನಾವು ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದಿದ್ದಾರೆ.
ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಇದಕ್ಕೆಲ್ಲಾ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರಣ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರಿಗೆ ಸರ್ಕಾರವೇ ಪ್ರಚೋದನೆ ಮಾಡಿ ಲಾಠಿಚಾರ್ಜ್ ನಡೆಸಿದೆ. ನಂತರ ಗುಂಡುಹಾರಿಸಲಾಗಿದೆ. ರಾಜ್ಯದಲ್ಲಿ ಈ ರೀತಿಯ ಪರಿಸ್ಥಿತಿಗೆ ಸಿಎಂ ಯಡಿಯೂರಪ್ಪ ಮತ್ತು ಗೃಹ ಸಚಿವರೇ ಕಾರಣ. ಇಡೀ ವಿಶ್ವ ನೋಡ್ತಿದೆ, ದೇಶದ ಮರ್ಯಾದೆ ಹೋಗ್ತಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.