ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಇಂದು ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ್ದು, ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ
ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: May 20, 2024 | 8:02 PM

ಬೆಂಗಳೂರು, ಮೇ 20: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಲಿದ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಜೊತೆಗೆ ಕೆ.ಆರ್ ಪುರ ಸಮೀಪದ ಎನ್​ಜಿಎಫ್​​ ಬಳಿ ಸ್ಕೈಡೆಕ್ ಸ್ಥಳ ವೀಕ್ಷಣೆ ಮಾಡಿದ್ದು, ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ (Raja Kaluve Encroachment) ತೆರವು ಕಾರ್ಯಚರಣೆ ಮಾಡುತ್ತೇವೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಮಳೆ ಹಿನ್ನೆಲೆ ರಾಜಕಾಲುವೆ ಸ್ವಚ್ಛತೆ ಕುರಿತು ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪಕ್ಕದ ಸಾಯಿ ಲೇಔಟ್​ಗೆ ಮಳೆ ನೀರು ನುಗ್ಗುವ ಭೀತಿ ಹಿನ್ನೆಲೆ ಮಳೆ ನೀರು ರಾಜಕಾಲುವೆಗೆ ಕನೆಕ್ಟ್ ಮಾಡಲು ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಡಿಎ ಸೈಟ್​ಗಳಿಗೆ ದಾರಿ ಇಲ್ಲ ಅಂತಾ ಡಿ.ಕೆ.ಶಿವಕುಮಾರ್​ಗೆ ಬಿಡಿಎ ನಿವಾಸಿಗಳಿಂದ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳಿಗೆ ತಲುಪಿದ 5 ಗ್ಯಾರೆಂಟಿ: 1 ವರ್ಷದ ಸಾಧನೆ ಬಿಚ್ಚಿಟ್ಟ ಸಿದ್ದರಾಮಯ್ಯ

ಅಮೃತಹಳ್ಳಿಯ ರಾಚೇನಹಳ್ಳಿ ಸಮೀಪದಲ್ಲಿರುವ ಜವಹರಲಾಲ್ ನೆಹರು ಅಧ್ಯಯನ ಕೇಂದ್ರಕ್ಕೂ ಶಿವಕುಮಾರ್​ ಭೇಟಿ ನೀಡಿದ್ದು, ಪ್ರಗತಿ ಹಂತದಲ್ಲಿರುವ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದ ಡಿ.ಕೆ.ಶಿವಕುಮಾರ್

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್​, ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯಾಗಿಲ್ಲ, ಆದರೆ ನೀರು ನಿಂತಿದೆ. ಪ್ರೈವೇಟ್ ಲೇಔಟ್ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ, ಸರಿಪಡಿಸುತ್ತೇವೆ. ನಿವಾಸಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ತೇವೆ. ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇವರಾಜೇಗೌಡ ಜೈಲಿಂದ ಹೊರಬಂದ ದಿನ ಸರ್ಕಾರ ಉರುಳೋದಾದರೆ ಅವರು ಅಲ್ಲೇ ಇರಲಿ: ಜಿ ಪರಮೇಶ್ವರ್, ಗೃಹ ಸಚಿವ

ಮಳೆಯಿಂದ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಲೇಔಟ್ ನಿರ್ಮಿಸಿ ಮೂಲಸೌಕರ್ಯ ಒದಗಿಸದವರಿಗೆ ನೋಟಿಸ್ ನೀಡಲಾಗಿದೆ. ಬಿಡಿಎ ಲೇಔಟ್​ಗಳ ಖಾಸಗೀಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮತ್ತು ಬಿಡಿಎಗೆ ಆದಾಯ ಬೇಕಲ್ವಾ. ವಿರೋಧ ಮಾಡೋರು ಮಾಡಲಿ, ಈ ಹಿಂದೆ ಅದೆಲ್ಲಾ ಆಗಿದೆ. ವ್ಯಾಪಾರಸ್ಥರು, ಅಂಗಡಿ ಮಾಲೀಕರಿಗೆ ಅಲ್ಟ್ರಾನೇಟಿವ್ ವ್ಯವಸ್ಥೆ ಮಾಡ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ