ಕಾರಾಗೃಹಕ್ಕೆ ಭೇಟಿ ನೀಡಿ NSUI ಕಾರ್ಯಕರ್ತರಿಗೆ ಹಣ್ಣುಗಳನ್ನು ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಬಂಧನಕ್ಕೊಳಗಾದ ಎನ್​ಎಸ್​ಯುಐ ಕಾರ್ಯಕರ್ತರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜೈಲಿನಲ್ಲಿ ಭೇಟಿಯಾಗಿ ವಿಚಾರಿಸಿದರು. ಇದೇ ವೇಳೆ ಕಾರ್ಯಕರ್ತರಿಗೆ ಹಣ್ಣುಗಳನ್ನು ವಿತರಿಸಿದರು.

ಕಾರಾಗೃಹಕ್ಕೆ ಭೇಟಿ ನೀಡಿ NSUI ಕಾರ್ಯಕರ್ತರಿಗೆ ಹಣ್ಣುಗಳನ್ನು ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: Rakesh Nayak Manchi

Updated on:Jun 04, 2022 | 9:48 PM

ತುಮಕೂರು: ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C.Nagesh) ಅವರ ಮನೆಗೆ ಮುತ್ತಿಗೆ ಹಾಕಿ ಬಂಧಿತರಾಗಿರುವವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಭೇಟಿಯಾಗಿ ಹಣ್ಣುಗಳನ್ನು ನೀಡಿದರು. ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎನ್​ಎಸ್​ಯುಐ (NSUI) ಕಾರ್ಯಕರ್ತರನ್ನು ಪೊಲೀಸರ ಬಂಧಿಸಿ ತುಮಕೂರು ಹೊರವಲಯದ ಊರುಕೆರೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕಳುಹಿಸಿದ್ದಾರೆ. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್, ಶಾಸಕ ಡಾ ರಂಗನಾಥ್ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ವಿಚಾರಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಅವರು ಕಾರ್ಯಕರ್ತರಿಗೆ ಬಾಳೆಹಣ್ಣು ಸೇರಿದಂತೆ ಇತರೆ ಹಣ್ಣುಗಳನ್ನು ವಿತರಿಸಿದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದ: ತಪ್ಪು ಮಾಹಿತಿಗಳನ್ನು ಪಟ್ಟಿ ಮಾಡಿದ ಬರಗೂರು ರಾಮಚಂದ್ರಪ್ಪ

ರಾಜ್ಯದಲ್ಲಿ ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಸಮಿತಿಯಲ್ಲಿ ನಡೆದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಎದಿದ್ದು, ಇದಕ್ಕೆ ರಾಜಕೀಯ ಬೆರೆತು ವಿವಾದ ತಾರಕಕ್ಕೇರಿದೆ. ಈ ನಡುವೆ ಪಠ್ಯ ಪರಿಷ್ಕರಣೆ ವಿವಾದ ಸಂಬಂಧ ಜೂನ್ 01ರಂದು NSUI ಸಂಘಟನೆ ಕಾರ್ಯಕರ್ತರು ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಅವರ ಮನೆ ಮುಂದೆ ಆರ್​ಎಸ್​ಎಸ್​ನ ಖಾಕಿ ಚಡ್ಡಿಯನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಕೆಲವು ಕಾರ್ಯಕರ್ತರನ್ನ ತಿಪಟೂರು ಪೊಲೀಸರು ಬಂಧಿಸಿದ್ದರು. ಅಲ್ಲದೆ ಸಚಿವರ ನಿವಾಸಕ್ಕೆ ಭೇಟಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ: ರೋಹಿತ್ ಚಕ್ರತೀರ್ಥ

ಬೇಲ್ ಸಿಗಲೇಬಾರದು ಎಂದು ಸೆಕ್ಷನ್​ಗಳನ್ನ ಹಾಕಿದ್ದಾರೆ

ಸಚಿವ ಬಿ.ಸಿ. ನಾಗೇಶ್​ ಮನೆಗೆ ಎನ್​ಎಸ್​ಯುಐ ಕಾರ್ಯಕರ್ತರ ಮುತ್ತಿಗೆ ಯತ್ನದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಕರ್ನಾಟಕ ರಾಜ್ಯ ಇತಿಹಾಸವನ್ನು ತಿರುಚಲು ನಾಗೇಶ್ ನೇತೃತ್ವದ ಇಲಾಖೆ ಹೊರಟಿದೆ. ಕುವೆಂಪು, ಬಸವಣ್ಣರಿಗೆ ಅವಮಾನ ಮಾಡುತ್ತಿರುವುದು ಸರಿಯಲ್ಲ. ಯುವಕರು, ವಿದ್ಯಾರ್ಥಿಗಳು, ಶ್ರೀಗಳು ಧರಣಿ ಮಾಡುತ್ತಿದ್ದಾರೆ. ಧಿಕ್ಕಾರ ಕೂಗಿದ್ದಾರೆ. ಅವರೇನು ಯಾರ ಮನೆಗೂ ಹೋಗಿಲ್ಲ. ನಾಗೇಶ್​ ಹಾಕಿದ್ದ ಚಡ್ಡಿಯನ್ನೇನು ಅವರು ಸುಟ್ಟು ಹಾಕಿಲ್ಲ. ಬೇಲ್ ಸಿಗಲೇಬಾರದು ಎಂದು ಸೆಕ್ಷನ್​ಗಳನ್ನ ಹಾಕಿದ್ದಾರೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಸಾಂವಿಧಾನಿಕ ಹಕ್ಕಿದೆ. ಮೊನ್ನೆ ರೈತ ನಾಯಕ ಟಿಕಾಯತ್ ಅವರ ಮೇಲೆ ಬೆಂಗಳೂರಿನಲ್ಲಿ ಕೆಲವರು ಮೋದಿ ಅವರಿಗೆ ಜೈಕಾರ ಕೂಗುತ್ತಾ ಹಲ್ಲೆ ಮಾಡಿದ್ದಾರೆ. ಸರ್ಕಾರ ಇವರ ವಿರುದ್ಧ ಯಾವ ಸೆಕ್ಷನ್ ಹಾಕಿದೆ? ನಮ್ಮ ವಿದ್ಯಾರ್ಥಿ ನಾಯಕರಿಗೆ ಜಾಮೀನು ಸಿಗಬಾರದು ಎಂದು 143, 147, 448, 443, 332 ಸೇರಿದಂತೆ ಹಲವು ಗಂಭೀರ ಸೆಕ್ಷನ್ ಹಾಕಿ ಪ್ರಕರಣ ದಾಖಲಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ಇಂತಹ ಪ್ರಕರಣ ದಾಖಲಿಸಲಾಗುತ್ತಿದೆ ಎಂದರು.

ಈ ಜಿಲ್ಲೆಯಲ್ಲಿ ಇಬ್ಬರು ದಲಿತರು ಸತ್ತಾಗ ಸಚಿವರು, ಶಾಸಕರು ಎಲ್ಲಿಗೆ ಹೋಗಿದ್ದರು? ಯಾರಾದ್ರೂ ದಲಿತರಿಗೆ ರಕ್ಷಣೆ ಕೊಡುವುದಕ್ಕೆ ಹೋಗಿದ್ದಾರಾ? ಈಗ ಮನೆಮನೆಗೆ ಹೋಗಿ ಸಿಕ್ಕಸಿಕ್ಕವರನ್ನ ತಂದು ಜೈಲಿಗೆ ಹಾಕಿದ್ದಾರೆ. ಬೇಲ್ ರಿಜೆಕ್ಟ್ ಆಗಿದೆ, ಮೇಲಿನ ಕೋರ್ಟ್​​​ಗೆ ಹೋಗುತ್ತಾರೆ. ಇದು ಅವರಿಗೇನು ಅವಮಾನ ಅಲ್ಲಾ ಎಂದರು.

ಒಂದು ದಿನ ಅಧಿಕಾರಿಗಳು ಅನುಭವಿಸುತ್ತಾರೆ

ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಸಚಿವರು ಶವಯಾತ್ರೆ ಮಾಡಿದ್ದರು, ಬಿಜೆಪಿ ನಾಯಕರು ಜನರನ್ನು ಸೇರಿಸಿ ಜಾತ್ರೆ, ಹುಟ್ಟುಹಬ್ಬ ಆಚರಿಸಿದ್ದರು. ಆದರೆ ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಾಜಕಾರಣಿಗಳ ಮಾತು ಕೇಳಿ ಅನಗತ್ಯವಾಗಿ ಸೆಕ್ಷನ್ ಹಾಕುತ್ತಿರುವ ಅಧಿಕಾರಿಗಳು ಒಂದು ದಿನ ಇದಕ್ಕೆಲ್ಲಾ ಉತ್ತರ ನೀಡಿ, ಇದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದರು.

ವಿಡಿಯೋ ವೀಕ್ಷಿಸಿ:

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Sat, 4 June 22

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ