ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಎಣ್ಣೆ ಬೆಲೆನೂ ಜಾಸ್ತಿಯಾಗಿದೆ.. ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ
ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ತೈಲ ಬೆಲೆ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ಸರ್ಕಾರಿ, ಖಾಸಗಿ ನೌಕರರ ಸಂಬಳ ಹೆಚ್ಚಾಗಿದೆಯಾ? ಮನ್ರೇಗಾ ಯೋಜನೆಯಡಿ ನೀಡುವ ಕೂಲಿ ಹೆಚ್ಚಾಗಿದೆಯಾ?
ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಶಾಸಕ ಡಾ.ರಂಗನಾಥ್, ವೆಂಕಟರಮಣಪ್ಪ, ಮಾಜಿ ಸಚಿವ ರಾಜಣ್ಣ ಸೇರಿ ಹಲವರು ಭಾಗಿಯಾಗಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ತೈಲ ಬೆಲೆ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ಸರ್ಕಾರಿ, ಖಾಸಗಿ ನೌಕರರ ಸಂಬಳ ಹೆಚ್ಚಾಗಿದೆಯಾ? ಮನ್ರೇಗಾ ಯೋಜನೆಯಡಿ ನೀಡುವ ಕೂಲಿ ಹೆಚ್ಚಾಗಿದೆಯಾ? ತೈಲ ಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಎಣ್ಣೆ, ಸಿಮೆಂಟ್, ಕಬ್ಬಿಣದ ಬೆಲೆ ಗಗನಕ್ಕೆ ಏರುತ್ತಿದೆ. ಕ್ರಿಮಿನಾಶಕಗಳು, ರಸಗೊಬ್ಬರಗಳ ಬೆಲೆಯೂ ಹೆಚ್ಚಾಗಿದೆ. ಈ ಸರ್ಕಾರ ಜನರಿಂದ ಪಿಕ್ ಪಾಕೆಟ್ ಮಾಡುತ್ತಿದೆ. ಹೀಗಾಗಿ ಬೆಲೆ ಏರಿಕೆ ವಿರೋಧಿಸಿ ಹೋರಾಟ ಮಾಡ್ತಿದ್ದೇವೆ ಎಂದು ಹೇಳಿದರು.
ಗ್ರಾಮೀಣ ಮಟ್ಟದಲ್ಲಿ ಹೋಬಳಿ ಮಟ್ಟದಲ್ಲಿ ಈ ಕಾರ್ಯಕ್ರಮ ಮುಂದುವರಿಯುತ್ತಿದೆ. ಸುಮಾರು 900 ಜಿಲ್ಲಾ ಪಂಚಾಯಿತಿ, ಹೋಬಳಿಗಳಲ್ಲಿ ಈ ಕಾರ್ಯಕ್ರಮ ನಡೀತಿದೆ. ನಾಳೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ತೈಲ ಬೆಲೆ ಏರಿಕೆಯಾಗ್ತಾ ಇದೆ. ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಆ ಎಣ್ಣೆ ಬೆಲೆನು ಜಾಸ್ತಿಯಾಗಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೀವಿ. ಈ ಹೋರಾಟ ಕಾಂಗ್ರೆಸ್ ಪಾರ್ಟಿಯದಲ್ಲ. ಇದು ಸಾಮಾನ್ಯ ಜನರ ಹೋರಾಟ. 130 ಕೋಟಿ ಜನರ ಕಾರ್ಯಕ್ರಮ. ಅವರ ಧ್ವನಿಯಾಗಿ ಜನರ ಹಿತಕ್ಕಾಗಿ ಕಾರ್ಯಕ್ರಮ ಮಾಡ್ತಿದ್ದೀವಿ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ: ಯಾವುದೇ ಕಾರಣಕ್ಕೂ ಶಾಲಾ ಶುಲ್ಕವನ್ನು ಕಡಿಮೆ ಮಾಡಲ್ಲ; ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್