ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪುತ್ರಿ ವಿವಾಹ ಹಿನ್ನೆಲೆ ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಭರ್ಜರಿ ಉಡುಗೊರೆ ನೀಡಿ, ವಧು-ವರರಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದರು. ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಮಾಲೀಕರಾಗಿದ್ದ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಮಗ ಅಮರ್ತ್ಯ ಹೆಗ್ಡೆ ಇಂದು (ಫೆಬ್ರವರಿ 14) ಸಪ್ತಪದಿ ತುಳಿದಿದ್ದಾರೆ. ಅಂದಹಾಗೆ ಅಮರ್ತ್ಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೊಮ್ಮಗ.
ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಕನಕಪುರ ಕ್ಷೇತ್ರದ ಮತದಾರರಿಗೆ ಡಿ.ಕೆ.ಶಿವಕುಮಾರ್ ಬಟ್ಟೆ ಹಾಗೂ ಸ್ವೀಟ್ ಬಾಕ್ಸ್ ಉಡುಗೊರೆ ನೀಡಿದ್ದಾರೆ. ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಮಹಿಳಾ ಮತದಾರರಿಗೆ ರೇಷ್ಮೆ ಸೀರೆ ಹಾಗೂ ಪುರುಷ ಮತದಾರರಿಗೆ ಶರ್ಟ್ ಹಾಗೂ ಪ್ಯಾಂಟ್ ಪೀಸ್ ಜೊತೆಗೆ ಸ್ವೀಟ್ ಬಾಕ್ಸ್ ನೀಡಿದ್ದಾರೆ.
ಕನಕಪುರ ಕ್ಷೇತ್ರದ ಎಲ್ಲರನ್ನು ಕರೆದು ಮದುವೆ ಮಾಡುವ ಹುಮ್ಮಸ್ಸಿನಲ್ಲಿ ಇದ್ದ ಡಿ.ಕೆ.ಶಿವಕುಮಾರ್ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಮುಖಂಡರಿಗೆ ಮಾತ್ರ ಸೀಮಿತ ಮಾಡಿ ತಮ್ಮ ಪುತ್ರಿ ವಿವಾಹ ನೆರವೇರಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕನಕಪುರ ಕ್ಷೇತ್ರದಲ್ಲಿ ಆರತಕ್ಷತೆ ನೆರವೇರಿಸಿ ಕ್ಷೇತ್ರದ ಮತದಾರರಿಗೆ ಸಿಹಿ ಊಟ ಹಾಕಿಸಲು ಮುಂದಾಗಿದ್ದಾರೆ. ಕಳೆದ ಎರಡು ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗಳಿಗೂ ಉಡುಗೊರೆಯನ್ನು ನೀಡಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಲಕ್ಷದ 20 ಸಾವಿರ ಮತದಾರರು ಇದ್ದು, ಎಲ್ಲರಿಗೂ ಉಡುಗೊರೆ ನೀಡಿ ಅಲ್ಲಿಂದಲೇ ಆಶೀರ್ವಾದ ನೀಡುವಂತೆ ಮನವಿ ಮಾಡಿದ್ದಾರೆ.
ಐಶ್ವರ್ಯ ಮತ್ತು ಅಮರ್ಥ್ಯ ಹೆಗ್ಡೆ ಮದುವೆ ಫೋಟೋಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ: Aishwarya Amartya Hegde Marriage | ಪ್ರೇಮಿಗಳ ದಿನದಂದು ಸಪ್ತಪದಿ ತುಳಿದ ಡಿ.ಕೆ. ಶಿವಕುಮಾರ್ ಪುತ್ರಿ; ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಮದುವೆಯ ಸುಂದರ ಕ್ಷಣಗಳು
Published On - 2:10 pm, Sun, 14 February 21