ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ಗೆ ಅಧಿಕೃತ ಪಟ್ಟಾಭಿಷೇಕ
ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು.
ಬೆಂಗಳೂರು, (ಜೂನ್ 21): ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಹಿರಿಯ ಕಾರ್ಯಕರ್ತ ಹರಿಪ್ರಸಾದ್ಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ . ಶಕ್ತಿ ಮೀರಿ ನನ್ನ ಕಾರ್ಯಕರ್ತರಿಗೆ ಸೇವೆ ಮಾಡಿದ್ದೇನೆ ಸೋನಿಯಾ ಗಾಂಧಿಯವರ ಆಶೀರ್ವಾದ ನಾನು ಮರೆಯುವುದಿಲ್ಲ. ಕೊವಿಡ್ ಸಂದರ್ಭದಲ್ಲೂ ಮೇಕೆದಾಟು ಪಾದಯಾತ್ರೆ ಮಾಡಿದ್ದೆವು.ಕೇವಲ ಸಿದ್ದರಾಮಯ್ಯ ಹಾಗೂ ನನ್ನಿಂದ 136 ಸೀಟ್ಗಳನ್ನ ಗೆದ್ದಿಲ್ಲ. ನಿಮ್ಮೆಲ್ಲರ ಶಕ್ತಿಯಿಂದ 136 ಸೀಟ್ಗಳನ್ನು ಗೆಲ್ಲಲು ಸಾಧ್ಯವಾಯ್ತು ಎಂದರು.
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ

