AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ತನಿಖೆಯಿಂದ ಪಾರಾಗಲು ಡಿಕೆ ಶಿವಕುಮಾರ್​ಗಿದೆ ಸವಾಲು, ಸಿಬಿಐ ಮುಂದಿನ ದಾರಿ ಏನು?

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದೆ. ಹಾಗಾದರೆ, ಡಿಕೆ ಶಿವಕುಮಾರ್ ಅವರ ಮುಂದಿರುವ ಸವಾಲುಗಳೇನು? ಅವರ ಮುಂದಿನ ನಡೆ ಏನು? ಸಿಬಿಐ ಮುಂದಿನ ದಾರಿ ಏನು? ಇಲ್ಲಿದೆ ಮಾಹಿತಿ.

ಸಿಬಿಐ ತನಿಖೆಯಿಂದ ಪಾರಾಗಲು ಡಿಕೆ ಶಿವಕುಮಾರ್​ಗಿದೆ ಸವಾಲು, ಸಿಬಿಐ ಮುಂದಿನ ದಾರಿ ಏನು?
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
Follow us
Ramesha M
| Updated By: Rakesh Nayak Manchi

Updated on: Nov 24, 2023 | 8:13 PM

ಬೆಂಗಳೂರು, ನ.24: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಆದರೆ ಸಿಬಿಐ ತನಿಖೆಯಿಂದ ಪಾರಾಗಲು ಶಿವಕುಮಾರ್ ಹೂಡಿರುವ ತಂತ್ರ ಸುಲಭಕ್ಕೆ ಫಲ ಕೊಡುವ ಲಕ್ಷಣಗಳು ಕಾಣುತ್ತಿಲ್ಲ. ಕೋರ್ಟ್​ನಲ್ಲಿ ಈ ಬಗ್ಗೆ ಕಾನೂನು ಹೋರಾಟಕ್ಕೆ ಸಿದ್ಧತೆಗಳು ಆರಂಭವಾಗಿವೆ. ಹಾಗಾದರೆ ಸಿಬಿಐ (CBI) ಮುಂದಿನ ದಾರಿ ಏನು? ಶಿವಕುಮಾರ್ ಮುಂದಿರುವ ಹಾದಿ ಏನು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನಾದರೂ ಸರಿ ಸಿಬಿಐ ತನಿಖೆಯಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬಚಾವು ಮಾಡಲೇಬೇಕು ಎಂದು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ನೀಡಿದ ಸಮ್ಮತಿ ಹಿಂಪಡೆಯಲು ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಬಗ್ಗೆ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸುಪ್ರೀಂ ತಿಳಿವಳಿಕೆ ಇಲ್ಲದೆ ಹೋಯ್ತೇ ಸಿದ್ದರಾಮಯ್ಯ ಸರ್ಕಾರಕ್ಕೆ?

ಸರ್ಕಾರ ಅಡ್ವೊಕೇಟ್ ಜನರಲ್ ಅಭಿಪ್ರಾಯ ಪಡೆದು ಈ ನಿರ್ಧಾರ ಕೈಗೊಂಡಿದ್ದರೂ, ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಮುಂದಿನ ಹಾದಿ ಸುಲಭವಾಗೇನೂ ಇಲ್ಲ. 2020 ರಲ್ಲೇ ಸಿಬಿಐ ತನಿಖೆ ಆರಂಭಿಸಿದ್ದು, ತನಿಖೆ ಇದೀಗ ಮುಕ್ತಾಯ ಹಾದಿಯಲ್ಲಿದೆ. ಈ ಹಂತದಲ್ಲಿ ರಾಜ್ಯ ಸರ್ಕಾರ ಸಮ್ಮತಿ ಹಿಂಪಡೆದಿರುವ ಕ್ರಮ ದೋಷಪೂರಿತವೆಂದು ವಾದಿಸಲು ಸಿಬಿಐ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಸಮ್ಮತಿ ಹಿಂಪಡೆಯುವ ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಸಿಬಿಐ ಕಾಯುತ್ತಿದೆ.

ಸಿಬಿಐ ನಿಲುವಿಗೆ ಪೂರಕವಾಗಿ ಸುಪ್ರೀಂಕೋರ್ಟ್ ತೀರ್ಪು ಕೂಡಾ ಇದ್ದು, ಇದನ್ನೇ ಅಸ್ತ್ರವಾಗಿ ಬಳಸಲು ಸಿಬಿಐ ಚಿಂತನೆ ನಡೆಸುತ್ತಿದೆ. ಸಿಬಿಐ ಅಲ್ಲದೇ ಯಾವುದೇ ವ್ಯಕ್ತಿ ಸರ್ಕಾರದ ಆದೇಶ ಪ್ರಶ್ನಿಸಿ ಪಿಐಎಲ್ ದಾಖಲಿಸಲೂ ಅವಕಾಶವಿದೆ. ಸಿಕ್ಕಿಂನ ಮುಖ್ಯಮಂತ್ರಿ ವಿರುದ್ಧದ ಇಂತಹದ್ದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಈಗ ಮಹತ್ವ ಪಡೆದಿದೆ.

ಸುಪ್ರೀಂಕೋರ್ಟ್ ಹೇಳಿದ್ದೇನು?

  • ಸಿಬಿಐ ತನಿಖೆಗೆ ನೀಡಿದ ಅನುಮತಿ ಪೂರ್ವಾನ್ವಯವಾಗಿ ಹಿಂಪಡೆಯಲು ಸಾಧ್ಯವಿಲ್ಲ
  • 1994 ರಲ್ಲೇ ಈ ಬಗ್ಗೆ ತೀರ್ಪು ನೀಡಿರುವ ಸುಪ್ರೀಂಕೋರ್ಟ್
  • ಕಾಜಿ ಲೆಂಡಪ್ ದೊರ್ಜಿ ವರ್ಸಸ್ ಸಿಬಿಐ ಪ್ರಕರಣದಲ್ಲಿ ತೀರ್ಪು
  • 1979 ರಿಂದ 1984 ರವರೆಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿದ್ದ ನರ ಬಹದೂರ್ ಭಂಡಾರಿ
  • 1984 ರಲ್ಲಿ ಸಿಬಿಐ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ದಾಖಲಿಸಿತ್ತು
  • ಸರ್ಕಾರದ ಪೂರ್ವಾನುಮತಿ ಪಡೆದು ಸಿಬಿಐ ಕೇಸ್ ದಾಖಲಿಸಿತ್ತು
  • 1985 ರಲ್ಲಿ ಮತ್ತೆ ಭಂಡಾರಿ ಸಿಎಂ ಆದ ನಂತರ ಅನುಮತಿ ವಾಪಸ್
  • ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಕಾಜಿ ಲೆಂಡಪ್ ದೊರ್ಜಿ ಕೋರ್ಟ್ ಮೊರೆ
  • ಒಮ್ಮೆ ಕೊಟ್ಟ ಅನುಮತಿ ಹಿಂಪಡೆಯಲು ಕಾಯ್ದೆಯಲ್ಲಿ ಅವಕಾಶವಿಲ್ಲವೆಂದು ತೀರ್ಪು
  • ಅನುಮತಿಯನ್ನು ಪೂರ್ವಾನ್ವಯವಾಗಿ ಹಿಂಪಡೆಯಲು ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್
  • ಸಿಬಿಐ ಎಫ್ಐಆರ್ ದಾಖಲಿಸುವ ಮುನ್ನ ಸರ್ಕಾರದ ಸಮ್ಮತಿ ಪಡೆದಿದೆ
  • ಹೀಗಾಗಿ ಸಿಬಿಐ ತನ್ನ ತನಿಖೆ ಮುಂದುವರಿಸಬಹುದೆಂದು ಮಹತ್ವದ ತೀರ್ಪು

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್: ಸಿದ್ದರಾಮಯ್ಯ ಸಂಪುಟ ಡಿಕೆಶಿ ಪಾದದಡಿಯಲ್ಲಿದೆ ಎಂದ ಕುಮಾರಸ್ವಾಮಿ

ಸದ್ಯ ಸಿಬಿಐ ಈ ತೀರ್ಪನ್ನು ಡಿಕೆ ಶಿವಕುಮಾರ್ ಪ್ರಕರಣಕ್ಕೂ ಅನ್ವಯಿಸಿ ವಾದಮಂಡಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ಶಿವಕುಮಾರ್ ಕೂಡಾ ಈ ಪ್ರಕರಣದ ಕಾನೂನು ಕುಣಿಕೆಯಿಂದ ಪಾರಾಗಲು ಸರ್ವಸಿದ್ಧತೆ ನಡೆಸಿದ್ದಾರೆ. ಸುಪ್ರೀಂಕೋರ್ಟ್​ನ ಹಿರಿಯ ವಕೀಲರು, ಕರ್ನಾಟಕದ ಹಲವು ಹಿರಿಯ ವಕೀಲರ ಕಾನೂನು ಸಲಹೆ ಪಡೆದಿದ್ದಾರೆ. ನವೆಂಬರ್ 29 ರಂದು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಅಷ್ಟರಲ್ಲಿ ಸರ್ಕಾರದ ನಿರ್ಧಾರ ತಿಳಿಸಿ, ವಿಚಾರಣೆಯನ್ನು ಮುಕ್ತಾಯಗೊಳಿಸುವುದು ಡಿಕೆ ಶಿವಕುಮಾರ್ ಉದ್ದೇಶ.

ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಒಪ್ಪಿದರೆ ಸಿಬಿಐ ತನಿಖೆಗೆ ಸಮ್ಮತಿ ಪ್ರಶ್ನಿಸಿರುವ ತಮ್ಮ ಮೇಲ್ಮನವಿಯನ್ನು ಡಿಕೆ ಶಿವಕುಮಾರ್ ಹಿಂಪಡೆಯಬಹುದು. ಒಮ್ಮೆ ಸಿಬಿಐ ತನಿಖೆಯಿಂದ ಪಾರಾದರೆ ರಾಜ್ಯದ ಯಾವುದೇ ತನಿಖಾ ಸಂಸ್ಥೆಯಿಂದಲೂ ತೊಂದರೆಯಾಗುವುದಿಲ್ಲವೆಂಬ ನಂಬಿಕೆ ಅವರಿಗಿದ್ದರೆ ಅದು ಸಹಜ. ಹೀಗಾಗಿ ಡಿಕೆ ಶಿವಕುಮಾರ್ ಅವರನ್ನು ಸಿಬಿಐ ಸಂಕಷ್ಟದಿಂದ ಪಾರು ಮಾಡಲು ಸರ್ಕಾರ ಮುಂದಿಟ್ಟಿರುವ ಈ ಹೆಜ್ಜೆಯ ಪರಿಣಾಮಗಳು ನವೆಂಬರ್ 29 ರಂದೇ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!