ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​
ಡಿಕೆ ಶಿವಕುಮಾರ್​
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ವಿವೇಕ ಬಿರಾದಾರ

Updated on:Sep 17, 2024 | 1:29 PM

ನವದೆಹಲಿ/ಬೆಂಗಳೂರು, ಸೆಪ್ಟೆಂಬರ್​ 17: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ಸುಪ್ರೀಂಕೋರ್ಟ್ (Supreme Court)​​ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ಇದನ್ನೂ ಓದಿ: ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ

ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್ ​ಇಂದು ಅರ್ಜಿ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಪ್ರತಿವಾದ ಮಂಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್​ ಜಾರಿ ಮಾಡಿ, ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:19 pm, Tue, 17 September 24

ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!