ನವದೆಹಲಿ/ಬೆಂಗಳೂರು, ಸೆಪ್ಟೆಂಬರ್ 17: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್ ನೀಡಿ ಸುಪ್ರೀಂಕೋರ್ಟ್ (Supreme Court) ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು.
ಇದನ್ನೂ ಓದಿ: ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್ ಜೋಶಿ
ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ಇಂದು ಅರ್ಜಿ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಪ್ರತಿವಾದ ಮಂಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿ, ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Tue, 17 September 24