AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಅಕ್ರಮ ಹಣ ವರ್ಗಾವಣೆ ಕೇಸ್; ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಡಿಕೆಶಿಗೆ ಹಿಂದೆ ಜಾಮೀನು​ ನೀಡಿರುವುದು ದೆಹಲಿ ಹೈಕೋರ್ಟ್, ಇಡಿ ವಿಶೇಷ ನ್ಯಾಯಾಲಯದಲ್ಲಿ ಅಲ್ಲ. ಈ ನ್ಯಾಯಾಲಯ ಜಾಮೀನನ್ನು ನಿರಾಕರಿಸಬೇಕು ಎಂದು ಇಡಿ ಪರ ವಕೀಲರು ಹೇಳಿದರು.

DK Shivakumar: ಅಕ್ರಮ ಹಣ ವರ್ಗಾವಣೆ ಕೇಸ್; ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ
ಡಿ.ಕೆ. ಶಿವಕುಮಾರ್​
TV9 Web
| Updated By: ಸುಷ್ಮಾ ಚಕ್ರೆ|

Updated on:Jul 01, 2022 | 12:23 PM

Share

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಜುಲೈ 30ಕ್ಕೆ ಮುಂದೂಡಿದೆ. ಜಾಮೀನಿಗೆ ಆಕ್ಷೇಪ ಸಲ್ಲಿಸಲು ಇಡಿ (ಜಾರಿ ನಿರ್ದೇಶನಾಲಯ) ಸಮಯಾವಕಾಶ ಕೇಳಿತ್ತು. ಜುಲೈ 30ಕ್ಕೆ ಆಕ್ಷೇಪಣೆ ಸಲ್ಲಿಸಲು ಇಡಿ ಕೋರ್ಟ್​ (ED Court) ಅನುಮತಿ ನೀಡಿದೆ.

ದೆಹಲಿಯ ಇಡಿ ವಿಶೇಷ ಕೋರ್ಟ್​​ನಲ್ಲಿ ಡಿ.ಕೆ. ಶಿವಕುಮಾರ್​ ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ವಿಕಾಸ್ ಧುಲ್ ಪೀಠದಿಂದ ವಿಚಾರಣೆ ನಡೆಸಲಾಗಿದೆ. ಹೈಕೋರ್ಟ್ ಡಿಕೆಶಿಗೆ ಜಾಮೀನು ನೀಡಿದ ಬಗ್ಗೆ ವಕೀಲರು ಮನವರಿಕೆ ಮಾಡಿಕೊಟ್ಟಿದ್ದು, ಇಡಿ ಪರ ವಕೀಲರು 20 ನಿಮಿಷ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು. ಆದರೆ, ವಿಚಾರಣೆ ಮುಂದೂಡಲು ಡಿಕೆಶಿ ಪರ ವಕೀಲರಿಂದ ಆಕ್ಷೇಪ ವ್ಯಕ್ತವಾಯಿತು. ಡಿಕೆಶಿ ಜಾಮೀನು ನವೀಕರಿಸಲು ಇಡಿ ವಕೀಲರು ವಿರೋಧಿಸಿದರು.

ಡಿಕೆಶಿಗೆ ಹಿಂದೆ ಜಾಮೀನು​ ನೀಡಿರುವುದು ದೆಹಲಿ ಹೈಕೋರ್ಟ್, ಇಡಿ ವಿಶೇಷ ನ್ಯಾಯಾಲಯದಲ್ಲಿ ಅಲ್ಲ. ಈ ನ್ಯಾಯಾಲಯ ಜಾಮೀನನ್ನು ನಿರಾಕರಿಸಬೇಕು ಎಂದು ಇಡಿ ಪರ ವಕೀಲರು ಹೇಳಿದರು. ಇಡಿ ವಕೀಲರ ವಾದಕ್ಕೆ ಡಿಕೆಶಿ ಪರ ವಕೀಲರ ಆಕ್ಷೇಪ ವ್ಯಕ್ತವಾಯಿತು. ಇದೇ ಕೋರ್ಟ್ ಕಾರ್ತಿ ಚಿದಂಬರಂಗೆ ಜಾಮೀನು ನೀಡಿದೆ. ಹಾಗಾಗಿ, ಡಿಕೆಶಿಗೂ ಜಾಮೀನು ನೀಡಬಹುದು ಎಂದು ಡಿಕೆ ಶಿವಕುಮಾರ್ ಪರ ವಕೀಲರು ವಾದ ಮಂಡಿಸಿದರು.

ಇದನ್ನೂ ಓದಿ: ದೆಹಲಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಚಾರಣೆ, ಜಾಮೀನು ಪರಿಶೀಲನೆ

ವಾದ-ಪ್ರತಿವಾದ ಆಲಿಸಿದ ಇ.ಡಿ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇ.ಡಿ.ಅಧಿಕಾರಿಗಳು ಇತ್ತೀಚೆಗಷ್ಟೇ ಜಾರ್ಜ್​ಶೀಟ್‌ ಸಲ್ಲಿಸಿದ್ದು, ಅದರಂತೆ ಡಿ.ಕೆ. ಶಿವಕುಮಾರ್‌ ಸೇರಿ ಐವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ಈ ಸಂಬಂಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಚ್‌ನಲ್ಲಿ ವಿಚಾರಣೆ ನಡೆದಿದೆ. 2018ರಲ್ಲಿ ದೆಹಲಿಯ ಸಪ್ಧರ್‌ಜಂಗ್‌ ಫ್ಲಾಟ್‌ನಲ್ಲಿ ಸಿಕ್ಕ ಹಣಕ್ಕೆ ಸಂಬಂಧಿಸಿ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಸಂಬಂಧ 2019ರಲ್ಲಿ ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಲಾಗಿತ್ತು.

ಏನಿದು ಪ್ರಕರಣ?: 2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಎರಡೂವರೆ ವರ್ಷದ ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. 2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂ. ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಡಿ.ಕೆ ಶಿವಕುಮಾರ್ 800 ಬೇನಾಮಿ ಆಸ್ತಿ ಮಾಡಿದ್ದಾರೆ‌. ಕುಟುಂಬಸ್ಥರ ಹೆಸರಿನಲ್ಲಿ 200 ಕೋಟಿ ರೂ. ಠೇವಣಿ ಇದೆ. 20ಕ್ಕೂ ಅಧಿಕ ಬ್ಯಾಂಕ್, 317ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಮೂಲಕ ಅಕ್ರಮ ಹಣ ವರ್ಗಾವಣೆ.‌ ಮಗಳ ಹೆಸರಿನಲ್ಲಿ 108 ಕೋಟಿ ರೂ. ಅಕ್ರಮ ವ್ಯವಹಾರ ನಡೆಸಲಾಗಿದೆ. ಡಿಕೆಶಿ ಪುತ್ರಿಗೆ 48 ಕೋಟಿ ಸಾಲ‌ ಇದೆ, ಆದರೆ ಸಾಲದ ಮೂಲ ತಿಳಿಸಿಲ್ಲ ಎಂದು ಆರೋಪಿಸಲಾಗಿತ್ತು.

ದೆಹಲಿ ನಿವಾಸದ 8.59 ಕೋಟಿ ಹಣಕ್ಕೆ ಲೆಕ್ಕ ಕೊಟ್ಟಿಲ್ಲ. ಡಿ.ಕೆ ಶಿವಕುಮಾರ್ ಹೆಸರಲ್ಲಿ 24, ಸಂಸದ ಡಿಕೆ ಸುರೇಶ್ ಹೆಸರಲ್ಲಿ 27 , ತಾಯಿ ಹೆಸರಲ್ಲಿ 38 ಆಸ್ತಿಗಳಿವೆ. ಡಿಕೆಶಿ ಕುಟುಂಬದ ಬಳಿ ಒಟ್ಟು 300 ಆಸ್ತಿಗಳಿವೆ. ಡಿ.ಕೆ ಶಿವಕುಮಾರ್ ವ್ಯವಹಾರದಲ್ಲಿ ಅಕ್ರಮ ಆಸ್ತಿ ಗಳಿಕೆ ಮತ್ತು ಹವಾಲ ದಂಧೆ ನಡೆದಿರುವ ಅನುಮಾನಗಳಿವೆ ಎಂದು ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಮೇಲೆ ಆರೋಪ ಮಾಡಿದ್ದರು.

Published On - 12:20 pm, Fri, 1 July 22