ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಉತ್ತಮ ವ್ಯಕ್ತಿ, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ; ಡಿಕೆ ಶಿವಕುಮಾರ್

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಉತ್ತಮ ವ್ಯಕ್ತಿಯಾಗಿದ್ದು, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ (DK Shivakumar) ಹೇಳಿದರು.

ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಉತ್ತಮ ವ್ಯಕ್ತಿ, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ; ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
Ganapathi Sharma
|

Updated on: May 30, 2023 | 4:37 PM

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಉತ್ತಮ ವ್ಯಕ್ತಿಯಾಗಿದ್ದು, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಅವರು, ಅನೇಕ ಸಲಹೆ ಸೂಚನೆಗಳನ್ನು ನೀಡಿದರು. ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ ಎಂದರು.

ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣಗೊಳಿಸುವಿಕೆ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು. ನೀರಾವರಿ ಯೋಜನೆಗಳಿಗೆ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ. ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು. ಕೇಂದ್ರ ಸಚಿವ ಶೇಖಾವತ್ ಉತ್ತಮ ವ್ಯಕ್ತಿ. ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ. ಬಾಕಿ ಯೋಜನೆಗಳಿಗೆ ಭೂಸ್ವಾಧೀನ ತ್ವರಿತಗತಿಯಲ್ಲಿ ಮಾಡಿ ಎಂದರು.

ಗುಣಮಟ್ಟದಲ್ಲಿ ರಾಜಿ ಮಾಡಲಾಗದು. ಮೇಕೆದಾಟು ಯೋಜನೆಗೆ ಮೀಸಲಿಟ್ಟ 1000 ಕೋಟಿ ರೂಪಾಯಿ ಅನುದಾನವನ್ನು ಭೂಸ್ವಾಧೀನದಂತಹ ಪೂರ್ವಸಿದ್ಧತೆ ಕೆಲಸಗಳಿಗೆ ಬಹುದಿತ್ತು. ಮಾಡಿಲ್ಲ ಏಕೆ? ಹಾಗಾದರೆ ಹಣ ಇಟ್ಟಿದ್ದಾದರೂ ಏಕೆ? ಬರೀ ಎಲ್ಒಸಿ, ಟೆಂಡರ್, ಗುತ್ತಿಗೆ ಹಂಚಿಕೆ, ಬಿಲ್ ಮಾಡೋ ಕೆಲಸಕ್ಕೆ ನಿಮ್ಮ ಶ್ರಮ ವಿನಿಯೋಗ ಆಗಬಾರದು. ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ. ಜಾತಿಯತೆ ಬೇಡ. ಮಾನವೀಯತೆ ಇರಲಿ. ನನಗೆ ಯಾವುದೇ ದ್ವೇಷ ಇಲ್ಲ. ಕೆಲಸ ಆಗಬೇಕು ಅಷ್ಟೇ. ನೀವು ಸರಕಾರಕ್ಕೆ ನಿಷ್ಠಾರಾಗಿರಬೇಕೆ ಹೊರತು ನಿಮಗೆ ಪೋಸ್ಟಿಂಗ್ ಕೊಟ್ಟವರಿಗಲ್ಲ. ಅಂತವರನ್ನು ಸಹಿಸೋದಿಲ್ಲ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

ನನಗೂ 33 ವರ್ಷ ಅನುಭವ ಇದೆ. ನಿಮ್ಮ ಕೈಯಲ್ಲಿ ಮಾಡಬಾರದ್ದು ಮಾಡಿಸಲ್ಲ, ದಾರಿ ತಪ್ಪಬೇಡಿ. ಎಚ್ಚರಿಕೆಯಿಂದ ಕೆಲಸ ಮಾಡಿ. ಬದಲಾವಣೆ ತನ್ನಿ. ಕೇಂದ್ರದಿಂದ ಯೋಜನೆಗಳನ್ನು ತರಬೇಕು. ನೆರೆಯ ತಮಿಳುನಾಡು, ಆಂಧ್ರ, ಮಹಾರಾಷ್ಟ್ರಕ್ಕೆ ಎಷ್ಟು ಯೋಜನೆಗಳು ಬಂದಿವೆ, ನಮ್ಮ ರಾಜ್ಯಕ್ಕೆ ಎಷ್ಟು ಬಂದಿವೆ ಎಂದು ನೀವೇ ಹೋಲಿಕೆ ಮಾಡಿಕೊಳ್ಳಿ. ನೀವು ಎಷ್ಟು ಚೆನ್ನಾಗಿ ಕೆಲಸ ಮಾಡಿದ್ದೀರಿ ಎಂದು ಗೊತ್ತಾಗುತ್ತದೆ. ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ ಎಂದು ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭ್ರಷ್ಟಾಚಾರ ರಹಿತ ಕಾರ್ಪೊರೇಷನ್ ಆಗಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ನೀಡಿದ ಖಡಕ್ ಸೂಚನೆಗಳಿವು

ನಾವು ಕರ್ನಾಟಕದ ಸಂಸದರ ಜತೆ ಸಭೆ ಮಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋಣ. ಪ್ರಧಾನಿ, ಕೇಂದ್ರದ ಜಲ ಸಂಪನ್ಮೂಲ ಸಚಿವರು ಸೇರಿದಂತೆ ಅಗತ್ಯ ಇರುವ ಎಲ್ಲರನ್ನೂ ಭೇಟಿ ಮಾಡೋಣ. ಕೇಂದ್ರದಿಂದ ಯೋಜನೆಗಳನ್ನು ತರುವ ಗುರಿಯನ್ನು ನಿಮಗೆ ನೀಡುತಿದ್ದೇನೆ. ಕೇಂದ್ರಕ್ಕೆ ಮನವರಿಕೆ ಮಾಡಿ, ಯೋಜನೆ ತರುವುದೇ ನಿಮ್ಮ ಕೆಲಸ. ಕೆಲಸ ಮಾಡಿದರೆ ನೀವು ಇಲ್ಲಿರುತ್ತೀರಿ. ಇಲ್ಲದಿದ್ದರೆ ನಿಮ್ಮ ಜಾಗದಲ್ಲಿ ಬೇರೆಯವರು ಇರುತ್ತಾರೆ. ನಾನು ವಹಿಸಿಕೊಂಡ ಇಲಾಖೆಯಲ್ಲಿ ಏನೇನು ಕೆಲಸ ಮಾಡಲಾಗಿದೆ ಎಂಬ ಬಗ್ಗೆ ಕಾಲ ಕಾಲಕ್ಕೆ ವರದಿ ಕೊಡಬೇಕು. ಯಾವ, ಯಾವ ಯೋಜನೆಗಳು ಯಾವ ಹಂತದಲ್ಲಿವೆ ಎಂಬ ಬಗ್ಗೆ ವಿಡಿಯೋ, ಫೋಟೋ ದಾಖಲೆ ಒದಗಿಸಬೇಕು. ಯೋಜನೆಗಳು ಕುಂಠಿತಗೊಳ್ಳಲು ಕಾರಣಗಳನ್ನು ಸಾಕ್ಷಿ ಸಮೇತ ನೀಡಬೇಕು. ಕತೆ, ಕಟ್ಟು ಕತೆ ಕೇಳುವುದಿಲ್ಲ. ನಾನು ಈ ಖಾತೆಯಿಂದ ಇಳಿದ ನಂತರ ಕಣ್ಣಿಗೆ ಕಾಣುವ ಯಾವುದೇ ಕೆಲಸ ಆಗಿಲ್ಲ. ಮೂರು ವರ್ಷದ ಹಿಂದೆ ಇದ್ದಂತೆಯೇ ಇದೆ. ನಾನು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇನೆ ಎನ್ನುವುದಕ್ಕಿಂತ ಎಷ್ಟು ಕೆಲಸ ಮಾಡಿದೆ ಎಂಬುದೇ ಮುಖ್ಯವಾಗಬೇಕು ಎಂದು ಅವರು ಹೇಳಿದರು.

ನೀವು ಯಾವುದೇ ಯೋಜನೆ ಮಾಡಿದರೂ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಪ್ರತಿ ಹನಿ ನೀರು ರೈತರ, ಜನರ ಹಿತಕ್ಕೆ ಬಳಕೆ ಆಗಬೇಕೇ ವಿನಃ ಪೋಲಾಗಬಾರದು. ಎಲ್ಲೆಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು ಎಂಬುದರ ಬಗ್ಗೆ ತ್ವರಿತಗತಿಯಲ್ಲಿ ನೀಲನಕ್ಷೆ ತಯಾರು ಮಾಡಿ. ಕೆಆರ್​​ಎಸ್, ಮಂಚನಬೆಲೆ, ತಿಪ್ಪಗೊಂಡನಹಳ್ಳಿ, ಹೇಮಾವತಿ ಜಲಾಶಯ ಸೇರಿದಂತೆ ಈಗಾಗಲೇ ಸಿದ್ದವಾಗಿರುವ ಉದ್ಯಾನವನ, ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ತುರ್ತು ಕ್ರಮ ತೆಗೆದುಕೊಳ್ಳಿ ಎಂದು ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ