ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, […]
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.
ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, ನಿಮ್ಮ ಜೊತೆ ಸುದೀರ್ಘವಾದ ವಿಶ್ವಾಸದಿಂದ ಕೆಲಸ ಮಾಡುವುದಕ್ಕೆ ನಾನು ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ನಾನು ಯಾರೇ ಕೆಪಿಸಿಸಿ ಅಧ್ಯಕ್ಷರಾಗುವುದಕ್ಕೂ ನಾನು ಅಡ್ಡಿಪಡಿಸಿಲ್ಲ. ನೀವು ಅಧ್ಯಕ್ಷರಾಗುವುದಕ್ಕೂ ನಾನು ತಕರಾರು ಮಾಡಿಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆಯೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.
ನಾನು ಯಾವುದೇ ಹುದ್ದೆ ಕೇಳಲ್ಲ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಹೀಗಾಗಿ ಭೇಟಿ ಮಾಡಿ ಮಾತಾಡಿದ್ದೇನೆ. ಅದ್ರಲ್ಲಿ ಏನು ವಿಶೇಷ ಇಲ್ಲ ಎಂದು ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಹುದ್ದೆ ಕೇಳಲ್ಲ, ಕೇಳೋ ಕಾಲ ಹೋಗಿದೆ. ಯಾರು ಬೇಕಾದ್ರು ಯಾವ ಹುದ್ದೆ ಬೇಕಾದ್ರು ಕೇಳಲಿ. ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಏನು ತೀರ್ಮಾನ ಮಾಡ್ತಾರೋ ಅದಕ್ಕೆ ನಾನು ಬದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಇಂದು ನನ್ನನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. pic.twitter.com/qfAn6X0XHf
— Siddaramaiah (@siddaramaiah) January 5, 2020