ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, […]

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಅಧ್ಯಕ್ಷ ಹಾದಿ ಸುಗಮ; ಟಗರು ಶ್ರೀರಕ್ಷೆಗೆ ಡಿಕೆಶಿ ಗಾಳ?
ಡಿಕೆಶಿಗೆ ಟಾಂಗ್: ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​, ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ
ಸಾಧು ಶ್ರೀನಾಥ್​

Updated on: Jan 05, 2020 | 2:32 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಡಾ.ಜಿ.ಪರಮೇಶ್ವರ್​ ನಿವಾಸದಲ್ಲಿ ನಡೆದ ಸಭೆಯ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಸಹಕಾರ ಕೋರಿದ ಡಿಕೆಶಿ?
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡ್ತೇನೆ, ಸಹಕಾರ ಕೊಡಿ ಎಂದು ಸಿದ್ದರಾಮಯ್ಯಗೆ ನೇರವಾಗಿ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ನೀವೇ ನಮ್ಮ ನಾಯಕರು, ನಿಮ್ಮ ಜೊತೆ ಸುದೀರ್ಘವಾದ ವಿಶ್ವಾಸದಿಂದ ಕೆಲಸ ಮಾಡುವುದಕ್ಕೆ ನಾನು ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ನಾನು ಯಾರೇ ಕೆಪಿಸಿಸಿ ಅಧ್ಯಕ್ಷರಾಗುವುದಕ್ಕೂ ನಾನು ಅಡ್ಡಿಪಡಿಸಿಲ್ಲ. ನೀವು ಅಧ್ಯಕ್ಷರಾಗುವುದಕ್ಕೂ ನಾನು ತಕರಾರು ಮಾಡಿಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆಯೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ನಾನು ಯಾವುದೇ ಹುದ್ದೆ ಕೇಳಲ್ಲ:
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಹೀಗಾಗಿ ಭೇಟಿ ಮಾಡಿ ಮಾತಾಡಿದ್ದೇನೆ. ಅದ್ರಲ್ಲಿ ಏನು ವಿಶೇಷ ಇಲ್ಲ ಎಂದು ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಹುದ್ದೆ ಕೇಳಲ್ಲ, ಕೇಳೋ ಕಾಲ ಹೋಗಿದೆ. ಯಾರು ಬೇಕಾದ್ರು ಯಾವ ಹುದ್ದೆ ಬೇಕಾದ್ರು ಕೇಳಲಿ. ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಏನು ತೀರ್ಮಾನ ಮಾಡ್ತಾರೋ ಅದಕ್ಕೆ ನಾನು ಬದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us