AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ

ಅಮೆರಿಕದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯಿಸಿದ್ದು, ಸಿಎಂ ಆಗುವ ಉದ್ದೇಶದಿಂದ ರಾಹುಲ್​ಯನ್ನು ಡಿಕೆ ಶಿವಕುಮಾರ್​ ಭೇಟಿಯಾಗಿದ್ದಾರೆ ಎಂದಿದ್ದಾರೆ.

ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ
ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ

Updated on: Sep 11, 2024 | 9:31 PM

ಹುಬ್ಬಳ್ಳಿ, ಸೆಪ್ಟೆಂಬರ್​​ 11: ಸಿಎಂ ಆಗುವ ಉದ್ದೇಶದಿಂದ ರಾಹುಲ್ ಗಾಂಧಿಯನ್ನು ಡಿಸಿಎಂ ಡಿಕೆ ಶಿವಕುಮಾರ್​​ (DK Shivakumar) ಭೇಟಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಅಮೆರಿಕದಲ್ಲಿ ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿ ಮಾತಾಡಿದರೆ ಗೊತ್ತಾಗುತ್ತೆಂದು ಅಲ್ಲಿ ಭೇಟಿ ಆಗಿದ್ದಾರೆ. ಅದಕ್ಕೆ ಅಲ್ಲಿ ಒಂದು ಫೋಟೋ ಬಿಟ್ಟಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕ್ತಿದಾರೆ: ಜೋಶಿ ವಾಗ್ದಾಳಿ

ವಿದೇಶದಲ್ಲಿ ರಾಹುಲ್ ಗಾಂಧಿಯಿಂದ ಅಪ್ರಬುದ್ಧ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದಾರೆ. ಕಾಂಗ್ರೆಸ್ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿ. ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಕಾಂಗ್ರೆಸ್​ ಸಾಮಾಜಿಕ ವಿರೋಧಿ ಅನ್ನೋದು ಸ್ಪಷ್ಟವಾಗುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ

ಅಂಬೇಡ್ಕರ್​ಗೆ ಅಪಮಾನ ಮಾಡಿದವರು ಕಾಂಗ್ರೆಸ್​ನವರು. ಬಾಬು ಜಗಜೀವನ್​ ರಾಮ್​ಗೆ ಕಾಂಗ್ರೆಸ್​ನಿಂದ ಅನ್ಯಾಯವಾಗಿದೆ. ದಲಿತರು, ಅಲ್ಪಸಂಖ್ಯಾತರನ್ನ ಮತಬ್ಯಾಂಕ್​ ಮಾಡ್ಕೊಂಡಿದೆ. ರಾಹುಲ್ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯ ಟೀಕೆ ಭರದಲ್ಲಿ ಇಂಥ ಮಾತು ಸರಿಯಲ್ಲ. ದೇಶದ ಪ್ರತಿಷ್ಠೆಗೆ ರಾಹುಲ್​​ ಗಾಂಧಿ ಮಸಿ ಬಳಿಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹ

ಕಾಮಗಾರಿ ವೇಳೆ ಕಬ್ಬಿಣದ ರಾಡ್ ​ಬಿದ್ದು ಎಎಸ್​ಐಗೆ ಗಾಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ದುರ್ದೈವದ ಘಟನೆ, ಈ ರೀತಿ ಆಗಬಾರದಿತ್ತು. ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿತ್ತು. ಈ ಕಾಮಗಾರಿಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಇದನ್ನ ರಾಜ್ಯ ಸರ್ಕಾರ ಜಾರಿಗೆ ತರ್ತಾ ಇದ್ದಾರೆ. ಇಂತಹ ಯೋಜನೆಗಳಿಗೆ ಕೇಂದ್ರ ಅನುದಾನವನ್ನ ಕೊಟ್ಟಿಲ್ಲ ಆದರೆ, ಈ ಕಾಮಗಾರಿಗೆ ಅನುದಾನವನ್ನು ಕೊಡಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಇಲಾಖೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಓಟ್ ಬ್ಯಾಂಕ್​ಗಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ

ಬಿಜೆಪಿ ಕಚೇರಿ ಟಾರ್ಗೆಟ್ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಕಚೇರಿ ಟಾರ್ಗೆಟ್ ಮಾಡಿದ್ದರು ಎಂದ ಎನ್.ಐ.ಎ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಸರ್ಕಾರದವರು ಸಹ ಹೇಗೆ ನಡೆದು ಕೊಳುತ್ತಿದ್ದಾರೆ. ಕೆಲವು ಮಂತ್ರಿಗಳು ಇದನ್ನ ಸುಳ್ಳು ಅಂತಾರೆ. ಭಯೋತ್ಪಾದಕರನ್ನು ಬೆಂಬಲಿಸಿ ಮಾತನಾಡುವ ಪ್ರವೃತ್ತಿಯಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ, ಸಿದ್ದರಾಮಯ್ಯ ಸ್ಪಷ್ಟನೆ

ಗಡಿ ರಾಜ್ಯದಲ್ಲಿನ ಘಟನೆಗಳ ಬಗ್ಗೆ ಕ್ರಮ ಕೈಗೊಳ್ತಿರೋದ್ರಿಂದ ಯಾವುದೇ ರೀತಿಯ ಅನಾಹುತ ನಡೆದಿಲ್ಲ. ಕರ್ನಾಟಕದಲ್ಲಿ ಕುಕ್ಕರ್, ಬಾಂಬ್ ಬ್ಲಾಸ್ಟ್ ಆದಾಗ ನಮ್ಮ ಸಹೋದರ ಅಂತಾರೆ. ವಿ ಆರ್ ಮೈ ಬ್ರದರ್ಸ್ ಅಂತಾರೆ. ರಾಮೇಶ್ವರ ಕೆಫೆ ಘಟನೆ ಆದಾಗ ಸಿಲೆಂಡರ್ ಬ್ಲಾಸ್ಟ್ ಅಂತಾರೆ. ಓಟ್ ಬ್ಯಾಂಕ್​ಗಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ