ಹುಬ್ಬಳ್ಳಿ, ಸೆಪ್ಟೆಂಬರ್ 11: ಸಿಎಂ ಆಗುವ ಉದ್ದೇಶದಿಂದ ರಾಹುಲ್ ಗಾಂಧಿಯನ್ನು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಅಮೆರಿಕದಲ್ಲಿ ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿ ಮಾತಾಡಿದರೆ ಗೊತ್ತಾಗುತ್ತೆಂದು ಅಲ್ಲಿ ಭೇಟಿ ಆಗಿದ್ದಾರೆ. ಅದಕ್ಕೆ ಅಲ್ಲಿ ಒಂದು ಫೋಟೋ ಬಿಟ್ಟಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
ವಿದೇಶದಲ್ಲಿ ರಾಹುಲ್ ಗಾಂಧಿಯಿಂದ ಅಪ್ರಬುದ್ಧ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದಾರೆ. ಕಾಂಗ್ರೆಸ್ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿ. ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಕಾಂಗ್ರೆಸ್ ಸಾಮಾಜಿಕ ವಿರೋಧಿ ಅನ್ನೋದು ಸ್ಪಷ್ಟವಾಗುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ
ಅಂಬೇಡ್ಕರ್ಗೆ ಅಪಮಾನ ಮಾಡಿದವರು ಕಾಂಗ್ರೆಸ್ನವರು. ಬಾಬು ಜಗಜೀವನ್ ರಾಮ್ಗೆ ಕಾಂಗ್ರೆಸ್ನಿಂದ ಅನ್ಯಾಯವಾಗಿದೆ. ದಲಿತರು, ಅಲ್ಪಸಂಖ್ಯಾತರನ್ನ ಮತಬ್ಯಾಂಕ್ ಮಾಡ್ಕೊಂಡಿದೆ. ರಾಹುಲ್ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯ ಟೀಕೆ ಭರದಲ್ಲಿ ಇಂಥ ಮಾತು ಸರಿಯಲ್ಲ. ದೇಶದ ಪ್ರತಿಷ್ಠೆಗೆ ರಾಹುಲ್ ಗಾಂಧಿ ಮಸಿ ಬಳಿಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಎಎಸ್ಐಗೆ ಗಾಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ದುರ್ದೈವದ ಘಟನೆ, ಈ ರೀತಿ ಆಗಬಾರದಿತ್ತು. ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿತ್ತು. ಈ ಕಾಮಗಾರಿಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಇದನ್ನ ರಾಜ್ಯ ಸರ್ಕಾರ ಜಾರಿಗೆ ತರ್ತಾ ಇದ್ದಾರೆ. ಇಂತಹ ಯೋಜನೆಗಳಿಗೆ ಕೇಂದ್ರ ಅನುದಾನವನ್ನ ಕೊಟ್ಟಿಲ್ಲ ಆದರೆ, ಈ ಕಾಮಗಾರಿಗೆ ಅನುದಾನವನ್ನು ಕೊಡಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಇಲಾಖೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿ ಟಾರ್ಗೆಟ್ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಕಚೇರಿ ಟಾರ್ಗೆಟ್ ಮಾಡಿದ್ದರು ಎಂದ ಎನ್.ಐ.ಎ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಸರ್ಕಾರದವರು ಸಹ ಹೇಗೆ ನಡೆದು ಕೊಳುತ್ತಿದ್ದಾರೆ. ಕೆಲವು ಮಂತ್ರಿಗಳು ಇದನ್ನ ಸುಳ್ಳು ಅಂತಾರೆ. ಭಯೋತ್ಪಾದಕರನ್ನು ಬೆಂಬಲಿಸಿ ಮಾತನಾಡುವ ಪ್ರವೃತ್ತಿಯಿದೆ ಎಂದಿದ್ದಾರೆ.
ಇದನ್ನೂ ಓದಿ: ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ, ಸಿದ್ದರಾಮಯ್ಯ ಸ್ಪಷ್ಟನೆ
ಗಡಿ ರಾಜ್ಯದಲ್ಲಿನ ಘಟನೆಗಳ ಬಗ್ಗೆ ಕ್ರಮ ಕೈಗೊಳ್ತಿರೋದ್ರಿಂದ ಯಾವುದೇ ರೀತಿಯ ಅನಾಹುತ ನಡೆದಿಲ್ಲ. ಕರ್ನಾಟಕದಲ್ಲಿ ಕುಕ್ಕರ್, ಬಾಂಬ್ ಬ್ಲಾಸ್ಟ್ ಆದಾಗ ನಮ್ಮ ಸಹೋದರ ಅಂತಾರೆ. ವಿ ಆರ್ ಮೈ ಬ್ರದರ್ಸ್ ಅಂತಾರೆ. ರಾಮೇಶ್ವರ ಕೆಫೆ ಘಟನೆ ಆದಾಗ ಸಿಲೆಂಡರ್ ಬ್ಲಾಸ್ಟ್ ಅಂತಾರೆ. ಓಟ್ ಬ್ಯಾಂಕ್ಗಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.