ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಾಳೆ ಪದಗ್ರಹಣ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಾಳೆ ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಕೆಪಿಸಿಸಿ ನೂತನ ಕಟ್ಟಡದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದಾದ್ಯಂತ ಪ್ಲೆಕ್ಸ್ ಬ್ಯಾನರ್​ಗಳು ರಾರಾಜಿಸುತ್ತಿವೆ. ಕಾರ್ಯಕ್ರಮದಲ್ಲಿ 150 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ ವೇದಿಕೆ ಮೇಲೆ ಯಾರಿಗೂ ಆಸನದ ವ್ಯವಸ್ಥೆ ಇರುವುದಿಲ್ಲ. ಜೂಮ್ ಮೂಲಕ ರಾಜ್ಯದ 7,800 ಸ್ಥಳಗಳಿಂದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಬೆಳಗ್ಗೆ 10.30ರಿಂದ ಮಧ್ಯಾಹ್ನ […]

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಾಳೆ ಪದಗ್ರಹಣ
Follow us
ಆಯೇಷಾ ಬಾನು
|

Updated on:Jul 01, 2020 | 2:36 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಾಳೆ ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಕೆಪಿಸಿಸಿ ನೂತನ ಕಟ್ಟಡದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದಾದ್ಯಂತ ಪ್ಲೆಕ್ಸ್ ಬ್ಯಾನರ್​ಗಳು ರಾರಾಜಿಸುತ್ತಿವೆ.

ಕಾರ್ಯಕ್ರಮದಲ್ಲಿ 150 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ ವೇದಿಕೆ ಮೇಲೆ ಯಾರಿಗೂ ಆಸನದ ವ್ಯವಸ್ಥೆ ಇರುವುದಿಲ್ಲ. ಜೂಮ್ ಮೂಲಕ ರಾಜ್ಯದ 7,800 ಸ್ಥಳಗಳಿಂದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.

ಪ್ಲೆಕ್ಸ್, ಬ್ಯಾನರ್ ತೆರವುಗೊಳಿಸುವಂತೆ ಒತ್ತಾಯ ಅನಧಿಕೃತವಾಗಿ ಹಾಕಿರುವ ಕಾಂಗ್ರೆಸ್ ಬ್ಯಾನರ್ ಮತ್ತು ಪ್ಲೆಕ್ಸ್ ತೆರವುಗೊಳಿಸುವಂತೆ ಬೆಜೆಪಿಗರು ಒತ್ತಾಯಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾದ ಕಾರ್ಯಕರ್ತರು ಈ ಬಗ್ಗೆ ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್​ಗಳನ್ನು ಹಾಕಬಾರದು ಎನ್ನುವ ಆದೇಶವಿದ್ದರೂ ಪ್ರತಿಜ್ಞಾ ಕಾರ್ಯಕ್ರಮದ ಅಂಗವಾಗಿ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಸಿ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

Published On - 1:20 pm, Wed, 1 July 20